ದೇಶ

ಪತ್ರಕರ್ತರ ಹತ್ಯೆ ಪ್ರಕರಣ: ಭೂಗತ ಪಾತಕಿ ಛೋಟಾ ರಾಜನ್ ದೋಷಿ, ಜಿಗ್ನ ವೋರಾ ಖುಲಾಸೆ

ಮಿಡ್ ಡೇ ಪತ್ರಿಕೆಯ ವರದಿಗಾರ ಜ್ಯೋತಿರ್ಮಯಿ ಡೇ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭೂಗತ ಪಾತಕಿ ಛೋಟಾ ರಾಜನ್ ದೋಷಿ ಎಂದು ಮುಂಬೈನ ವಿಶೇಷ ನ್ಯಾಯಾಲಯ ಬುಧವಾರ ತೀರ್ಪು ನೀಡಿದೆ.

ಪತ್ರಕರ್ತರ ಹತ್ಯೆ ಪ್ರಕರಣ: ಭೂಗತ ಪಾತಕಿ ಛೋಟಾ ರಾಜನ್ ದೋಷಿ, ಜಿಗ್ನ ವೋರಾ ಖುಲಾಸೆ
ಸಂಗ್ರಹ ಚಿತ್ರ
Published On :
ಮುಂಬೈ: ಮಿಡ್ ಡೇ ಪತ್ರಿಕೆಯ ವರದಿಗಾರ ಜ್ಯೋತಿರ್ಮಯಿ ಡೇ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭೂಗತ ಪಾತಕಿ ಛೋಟಾ ರಾಜನ್ ದೋಷಿ ಎಂದು ಮುಂಬೈನ ವಿಶೇಷ ನ್ಯಾಯಾಲಯ ಬುಧವಾರ ತೀರ್ಪು ನೀಡಿದೆ.
ಭೂಗತ ಪಾತಕಿ ಛೋಟಾ ರಾಜನ್ ಸೇರಿದಂತೆ ಪ್ರಕರಣ ಸಂಬಂಧ ಬಂಧಿತರಾಗಿದ್ದ ಒಂಭತ್ತು ಆರೋಪಿಗಳನ್ನು ನ್ಯಾಯಾಲಯ ದೋಷಿಗಳು ಎಂದು ತೀರ್ಪು ನೀಡಿದೆ. ಆರೋಪಿಗಳಾಗಿದ್ದ ಸತೀಶ್ ಕಾಳ್ಯಾ, ಅನಿಲ್ ವಾಗ್ಮೋಡ್, ಅರುಣ್ ದಾಖೆ, ಮಂಗೇಶ್ ಆಗವಾಣೆ, ಸಚಿನ್ ಗಾಯಕ್ವಾಡ್, ಅಭಿಜಿತ್ ಶಿಂಡೆ, ನೀಲೆಶ್ ಶೆಂಗ್ಡೆ, ದೀಪಕ್ ಸಿಸೋಡಿಯಾ ಮುಂತಾದವರು ಶಿಕ್ಷೆಗೊಳಗಾದ ಇತರ ಆರೋಪಿಗಳಾಗಿದ್ದು, ಇದೇ ಪ್ರಕರಣದ ಆರೋಪಿಯಾಗಿದ್ದ ಪತ್ರಕರ್ತ ಜಿಗ್ನಾ ವೋರಾ ಅವರನ್ನು ನ್ಯಾಯಾಲಯ ಸಾಕ್ಷ್ಯಾಧಾರದ ಕೊರತೆ ಹಿನ್ನಲೆಯಲ್ಲಿ ಖುಲಾಸೆಗೊಳಿಸಿದೆ.
2011ರ ಜೂನ್ 9ರಿಂದ ಜೂನ್ 18ರವರೆಗೆ ಜಿಗ್ನಾ ವೋರಾ ಕರ್ತವ್ಯಕ್ಕೆ ಹಾಜರಾಗಿರಲಿಲ್ಲ. ರಜೆಯಲ್ಲಿ ತೆರಳುವುದಾಗಿ ಅರ್ಜಿಯನ್ನೂ ಸಲ್ಲಿಸಿರಲಿಲ್ಲ. 2011ರ ಜೂನ್ 11ರಂದು ಬೈಕ್‌ನಲ್ಲಿ ತೆರಳುತ್ತಿದ್ದ ಡೇ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. 
ಇನ್ನು ಪತ್ರಕರ್ತ ಜೇಡೇ ಭೂಗತ ಜಗತ್ತಿನ ತಮ್ಮ ವರದಿಗಳಿಂದಲೇ ಖ್ಯಾತಿ ಪಡೆದಿದ್ದರು. ಅಲ್ಲದೇ ಇದೇ ಭೂಗತ ಜಗತ್ತಿನ ಕುರಿತಂತೆ ಜೇಡೇ ಬರೆದಿದ್ದ ಎರಡು ಪ್ರಸ್ತುಕಗಳು ಪಾತಕಿಗಳ ಕೆಂಗಣ್ಣಿಗೆ ಗುರಿಯಾಗಿತ್ತು. ಜೇಡೇ ಖಲ್ಲಾಸ್ (Khallas: An A to Z Guide to the Underworld) ಎಂಬ ಪುಸ್ತಕ, Zero Dial: The Dangerous World of Informers, Chindi: Rags to Riches ಎಂಬ ಪುಸ್ತಕಗಳನ್ನು ಬರೆದಿದ್ದರು.  ಈ ಪೈಕಿ ಮೂರನೇ ಪುಸ್ತಕ Chindi: Rags to Riches ಅನ್ನು ಪೂರ್ಣಗೊಳಿಸುವುದುಕ್ಕೂ ಮೊದಲೇ ಅವರ ಹತ್ಯೆಯಾಗಿತ್ತು. ಚಿಂದಿ ಪುಸ್ತಕ ಭೂಗತ ಲೋಕದ ಮತ್ತೋರ್ವ ಪಾತಕಿ ಛೋಟಾ ರಾಜನ್ ಕುರಿತಾಗಿತ್ತು ಎಂದು ಹೇಳಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.