ಹಿಮಾಚಲಪ್ರದೇಶದ ಕಸೌಲಿಯಲ್ಲಿ ಮಹಿಳಾ ಅಧಿಕಾರಿ ಹತ್ಯೆ: ಮಥುರಾದಲ್ಲಿ ಆರೋಪಿ ಬಂಧನ
ಹಿಮಾಚಲ ಪ್ರದೇಶದ ಕಸೌಲಿಯಲ್ಲಿ ಎರಡು ದಿನಗಳ ಹಿಂದೆ ಕರ್ತವ್ಯ ನಿರತ ಮಹಿಳಾ ಅಧಿಕಾರಿಯನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದ ಆರೋಪಿಯನ್ನು ಉತ್ತರಪ್ರದೇಶದ ಮಥುರಾದಲ್ಲಿ ಪೊಲೀಸರು ಬಂಧಿಸಿದ್ದಾರೆ...

Published On :
ಕಸೌಲಿ: ಹಿಮಾಚಲ ಪ್ರದೇಶದ ಕಸೌಲಿಯಲ್ಲಿ ಎರಡು ದಿನಗಳ ಹಿಂದೆ ಕರ್ತವ್ಯ ನಿರತ ಮಹಿಳಾ ಅಧಿಕಾರಿಯನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದ ಆರೋಪಿಯನ್ನು ಉತ್ತರಪ್ರದೇಶದ ಮಥುರಾದಲ್ಲಿ ಪೊಲೀಸರು ಬಂಧಿಸಿದ್ದಾರೆ.
ಸುಪ್ರೀಂಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಹೊಟೇಲ್ ಒಂದು ಒತ್ತುವರಿ ಮಾಡಿರುವ ಜಮೀನು ತೆರವು ಮಾಡಲು ಜಿಲ್ಲಾ ನಗರ ಮತ್ತು ಪಟ್ಟಣ ಸಹಾಯಕ ಅಧಿಕಾರಿ ಶೈಲ್ ಬಾಲಾ ಶರ್ಮಾ ಮೇಲೆ ಹೊಟೇಲ್ ಮಾಲೀಕ 54 ವರ್ಷದ ವಿಜಯ್ ಸಿಂಗ್ ಗುಂಡು ಹಾರಿಸಿ ಪರಾರಿಯಾಗಿದ್ದ.
ಆರೋಪಿಯನ್ನು ಪತ್ತೆಗೆ ಮುಂದಾದ ಪೊಲೀಸರು ಎರಡು ದಿನಗಳ ನಂತರ ಅಂತೂ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಮಹಿಳಾ ಅಧಿಕಾರಿ ಹತ್ಯೆ ಪ್ರಕರಣವನ್ನು ಸುಪ್ರೀಂಕೋರ್ಟ್ ಗಂಭೀರವಾಗಿ ಪರಿಗಣಿಸಿ ನೀವು ಜನರನ್ನು ಕೊಲ್ಲುತ್ತಾ ಹೋದರೆ ನಾವು ಆದೇಶ ನೀಡುವುದನ್ನು ನಿಲ್ಲಿಸುತ್ತೇವೆ ಎಂದು ನ್ಯಾಯಮೂರ್ತಿ ಎಂಬಿ ಲೋಕುರ್, ನ್ಯಾ. ದೀಪಕ್ ಗುಪ್ತಾ ಅವರನ್ನೊಳಗೊಂಡ ವಿಭಾಗೀಯ ಪೀಠ ಪ್ರಶ್ನಿಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Uttar pradeshಉತ್ತರಪ್ರದೇಶಹಿಮಾಚಲ ಪ್ರದೇಶHimachal Pradeshಮಹಿಳಾ ಅಧಿಕಾರಿKasauli Firingfemale officerಕಸೌಲಿ ಹತ್ಯೆ
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


