ಬಿಹಾರ ಬಸ್ಸು ದುರಂತದಲ್ಲಿ 27 ಮಂದಿ ಸತ್ತಿಲ್ಲ - ಅಧಿಕೃತ ಮಾಹಿತಿ
ನಿನ್ನೆ ಸಂಭವಿಸಿದ್ದ ಮೊತಿಹರಿ ಬಸ್ ದುರಂತದಲ್ಲಿ ಯಾವುದೇ ರೀತಿಯ ಹಾನಿಯಾಗಿಲ್ಲ ಎಂದು ಬಿಹಾರ ವಿಪತ್ತು ನಿರ್ವಹಣಾ ಸಚಿವ ದಿನೇಶ್ ಚಂದ್ರ ಯಾದವ್ ಸ್ಪಷ್ಟನೆ ನೀಡಿದ್ದಾರೆ.

ಬಿಹಾರ : ನಿನ್ನೆ ಸಂಭವಿಸಿದ್ದ ಮೊತಿಹರಿ ಬಸ್ ದುರಂತದಲ್ಲಿ ಯಾವುದೇ ರೀತಿಯ ಹಾನಿಯಾಗಿಲ್ಲ ಎಂದು ಬಿಹಾರ ವಿಪತ್ತು ನಿರ್ವಹಣಾ ಸಚಿವ ದಿನೇಶ್ ಚಂದ್ರ ಯಾದವ್ ಸ್ಪಷ್ಟನೆ ನೀಡಿದ್ದಾರೆ.
ಸ್ಥಳೀಯ ಮಾಹಿತಿ ಆಧಾರಿಸಿ 27 ಮಂದಿ ಸಾವನ್ನಪ್ಪಿದ್ದಾರೆ ಎಂದು ಹೇಳಿಕೆ ನೀಡಿದ್ದೆ. ಆದರೆ, ಇದು ತಪ್ಪು ಮಾಹಿತಿ. ಅಂತಿಮ ಮಾಹಿತಿಯನ್ನು ಮಾತ್ರ ಪರಿಗಣಿಸುವುದಾಗಿ ಅವರು ಹೇಳಿದ್ದಾರೆ.
ಮುಜಾಫರ್ ನಗರಿಂದ ನವದೆಹಲಿಗೆ ತೆರಳುತ್ತಿದ್ದ ಬಸ್ಸು ರಾಷ್ಟ್ರೀಯ ಹೆದ್ದಾರಿ 28 ರ ಬಳಿಯ ಬೆಲ್ವಾ ಹಳ್ಳಿಯ ಬಳಿ ಕಂದಕಕ್ಕೆ ಉರುಳಿ ಬೆಂಕಿ ಹೊತ್ತಿಕೊಂಡಿತ್ತು.
ಬಸ್ಸು ಖಾಸಗಿ ಸಂಸ್ಥೆಗೆ ಸೇರಿದ್ದಾಗಿದ್ದು, ಬೈಕ್ ಸವಾರನನ್ನು ರಕ್ಷಿಸಲು ಹೋಗಿ ಬಸ್ಸು ಅಪಘಾತ ಸಂಭವಿಸಿತ್ತು ಎಂಬುದಾಗಿ ಪ್ರತ್ಯೇಕ್ಷದರ್ಶಿಗಳು ಹೇಳಿಕೆ ನೀಡಿದ್ದರು. ಬಸ್ಸಿನಲ್ಲಿ ಮುಜಾಫರ್ ನಗರದ 32 ಮಂದಿ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ.
ಬಸ್ಸನ್ನು ಕಂದಕದಿಂದ ಹೊರಗೆ ಎಳೆದಾಗ ಯಾವುದೇ ಮನುಷ್ಯರ ಗುರುತು ಪತ್ತೆಯಾಗಿಲ್ಲ ಎಂದು ಮುಜಾಫರ್ ನಗರ ವಲಯ ಐಜಿ ಸುನೀಲ್ ಕುಮಾರ್ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


