2 ವರ್ಷ ಜೈಲು ವಾಸದ ನಂತರ ಛಗನ್ ಭುಜಬಲ್ ಗೆ ಜಾಮೀನು
ಮನಿ ಲಾಂಡ್ರಿಂಗ್ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಎನ್ ಸಿಪಿ ಮುಖಂಡ ಹಾಗೂ ಮಹಾರಾಷ್ಟ್ರ ಮಾಜಿ ಉಪ ಮುಖ್ಯಮಂತ್ರಿ....

Published On :
ಮುಂಬೈ: ಮನಿ ಲಾಂಡ್ರಿಂಗ್ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಎನ್ ಸಿಪಿ ಮುಖಂಡ ಹಾಗೂ ಮಹಾರಾಷ್ಟ್ರ ಮಾಜಿ ಉಪ ಮುಖ್ಯಮಂತ್ರಿ ಛಗನ್ ಭುಜಬಲ್ ಅವರಿಗೆ ಬಾಂಬೆ ಹೈಕೋರ್ಟ್ ಶುಕ್ರವಾರ ಜಾಮೀನು ಮಂಜೂರು ಮಾಡಿದೆ.
ಛಗನ್ ಭುಜಬಲ್ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು 2016ರಲ್ಲಿ ಬಂಧಿಸಿದ್ದರು.
ಛಗನ್ ಭುಜಬಲ್ ಅವರು ರಾಜ್ಯ ಲೋಕೋಪಯೋಗಿ ಸಚಿವರಾಗಿದ್ದ ವೇಳೆ ಅಕ್ರಮ ಹಣ ವಹಿವಾಟು ನಡೆಸಿದ್ದಾರೆ ಮತ್ತು ಕಿಕ್ ಬ್ಯಾಕ್ ಪಡೆದಿದ್ದಾರೆ ಎಂದು ಜಾರಿ ನಿರ್ದೇಶನಾಲಯ ಆರೋಪಿಸಿದೆ.
ಭುಜಬಲ್ ಅವರ ಪುತ್ರ ಮತ್ತು ಎನ್ ಸಿಪಿ ಶಾಸಕ ಪಂಕಜ್ ಹಾಗೂ ಅವರ ಸಂಬಂಧ ಸಮೀರ್ ಸಹ ಮನಿ ಲಾಂಡ್ರಿಂಗ್ ಪ್ರಕರಣದ ಆರೋಪಿಗಳಾಗಿದ್ದಾರೆ.
ದೆಹಲಿಯಲ್ಲಿನ ಮಹಾರಾಷ್ಟ್ರ ಸದನ ಹಗರಣ ಮತ್ತು ಕಲೀನಾ ಭೂಕಬಳಿಕೆ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಲಾಯ ಭುಜಬಲ್, ಅವರ ಪುತ್ರ ಹಾಗೂ ಸೋದರ ಸಂಬಂಧಿ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


