ತನ್ನ ಮನೆಯ ಶೌಚಾಲಯ ತಾನೇ ನಿರ್ಮಿಸಿಕೊಳ್ಳುತ್ತಿರುವ ಕಾಶ್ಮೀರದ ಈ ವೃದ್ಧೆ!
ಜಮ್ಮು-ಕಾಶ್ಮೀರದ 87 ವರ್ಷದ ವೃದ್ಧೆ ತನ್ನ ಮನೆಯ ಶೌಚಾಲಯವನ್ನು ತಾನೇ ನಿರ್ಮಿಸಿಕೊಳ್ಳುವ ಮೂಲಕ ತನ್ನ ಗ್ರಾಮವನ್ನು ಬಯಲುಶೌಚ ಮುಕ್ತವನ್ನಾಗಿಸಲು ಕೊಡುಗೆ ನೀಡಿದ್ದಾರೆ.

Published On :
ಕಾಶ್ಮೀರ: ಜಮ್ಮು-ಕಾಶ್ಮೀರದ 87 ವರ್ಷದ ವೃದ್ಧೆ ತನ್ನ ಮನೆಯ ಶೌಚಾಲಯವನ್ನು ತಾನೇ ನಿರ್ಮಿಸಿಕೊಳ್ಳುವ ಮೂಲಕ ತನ್ನ ಗ್ರಾಮವನ್ನು ಬಯಲುಶೌಚ ಮುಕ್ತವನ್ನಾಗಿಸಲು ಕೊಡುಗೆ ನೀಡಿದ್ದಾರೆ.
ಇತ್ತೀಚಿನ ದಿನಗಳಲ್ಲಿ ತಮ್ಮ ಮನೆಗಳಲ್ಲಿ ಶೌಚಾಲಯ ನಿರ್ಮಾಣ ಮಾಡಲು ಮುಂದಾಗುತ್ತಿರುವುದು ಸಂತಸದ ಸಂಗತಿ ಎಂದು 87 ವರ್ಷದ ವೃದ್ಧೆ ಹೇಳಿದ್ದಾರೆ.
2019 ರ ವೇಳೆಗೆ ಭಾರತ ಬಯಲು ಶೌಚ ಮುಕ್ತ ದೇಶವಾಗಲಿದೆ ಎಂದು ಈಗಗಾಲೇ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ಮನೆಗಳಲ್ಲಿ ಶೌಚಾಲಯ ನಿರ್ಮಾಣ ಮಾಡುವುದರಿಂದ ಮಹಿಳೆಯರಿಗೆ ಅನುಕೂಲವಾಗಲಿದೆ, ಸ್ವಚ್ಛತೆಯೇ ಸೇವೆ ಅಭಿಯಾನದ ಮೂಲಕ ಮಕ್ಕಳಲ್ಲಿ ಪೌಷ್ಟಿಕಾಂಶ ಹಾಗೂ ಪೋಷಣೆ ಸಿಗಲಿದೆ ಎಂದು ರಾಜನಾಥ್ ಸಿಂಗ್ ಹೇಳಿದ್ದರು.
ಸಿಕ್ಕಿಂ, ಹಿಮಾಚಲ ಪ್ರದೇಶ, ಕೇರಳ, ಉತ್ತರಾಖಂಡ್ ರಾಜ್ಯಗಳು ಈಗಾಗಲೇ ಬಯಲು ಶೌಚ ಮುಕ್ತ ರಾಜ್ಯಗಳಾಗಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


