ನ್ಯಾ.ಕೆ.ಎಂ ಜೋಸೆಫ್ ಪದೋನ್ನತಿ: ಮೇ 7ಕ್ಕೆ ಸು.ಕೋರ್ಟ್ ಬಾರ್ ಅಸೋಸಿಯೇಷನ್ ಸಾಮಾನ್ಯ ಸಭೆ
ಉತ್ತರಾಖಂಡ್ ಹೈಕೋರ್ಟ್ ನ ಮುಖ್ಯ ನ್ಯಾಯಾಧೀಶ ಕೆ. ಎಂ. ಜೋಸೆಫ್ ಅವರನ್ನು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಸ್ಥಾನಕ್ಕೇರಿಸುವುದು ಮತ್ತು...

Published On :
ನವದೆಹಲಿ: ಉತ್ತರಾಖಂಡ್ ಹೈಕೋರ್ಟ್ ನ ಮುಖ್ಯ ನ್ಯಾಯಾಧೀಶ ಕೆ. ಎಂ. ಜೋಸೆಫ್ ಅವರನ್ನು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಸ್ಥಾನಕ್ಕೇರಿಸುವುದು ಮತ್ತು ಎಸ್ ಬಿಸಿಎ ಅಧ್ಯಕ್ಷ ಸ್ಥಾನದಿಂದ ವಿಕಾಸ್ ಸಿಂಗ್ ಅವರನ್ನು ಕೆಳಗಿಳಿಸುವುದರ ಕುರಿತಂತೆ ಚರ್ಚಿಸಲು ಮೇ 7ರಂದು ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ ಸಾಮಾನ್ಯ ಸಭೆ ನಡೆಸಲು ತೀರ್ಮಾನಿಸಲಾಗಿದೆ.
ನ್ಯಾ.ಕೆಎಂ ಜೋಸೆಫ್ ಅವರಿಗೆ ಸುಪ್ರೀಂ ಕೋರ್ಟ್ ನ್ಯಾಯಾಧೀಶರಾಗಿ ಬಡ್ತಿ ನೀಡುವುದರ ವಿಷಯದ ಬಗ್ಗೆ ಕೊಲಿಜಿಯಂ ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳಲು ವಿಫಲವಾದ ಬಳಿಕ ಈ ತೀರ್ಮಾನಕ್ಕೆ ಬರಲಾಗಿದೆ.
ಮುಖ್ಯ ನ್ಯಾಯಮೂರ್ತಿ ಮಿಶ್ರ, ನ್ಯಾ. ಚಲಮೇಶ್ವರ್, ನ್ಯಾ.ರಂಜನ್ ಗೋಗೋಯಿ, ನ್ಯಾ.ಮದನ್ ಬಿ ಲೋಕುರ್. ನ್ಯಾ.ಕೆ.ಎಂ ಜೋಸೆಫ್ ಅವರಿದ್ದ ಕೊಲಿಜಿಯಂ ಸಭೆ ಮೇ.02 ರಂದು ನಡೆದಿದ್ದು, ಸರ್ಕಾರ ನ್ಯಾ. ಜೋಸೆಫ್ ಜೋಸೆಫ್ ಅವರ ಪದೋನ್ನತಿ ಶಿಫಾರಸ್ಸನ್ನು ವಾಪಸ್ ಕಳಿಸಿತ್ತು.
ಜನವರಿ 10 ರಂದು,ಕೊಲಿಜಿಯಂ ನ್ಯಾಯಮೂರ್ತಿ ಕೆ.ಎಂ. ಜೋಸೆಫ್ ಮತ್ತು ನ್ಯಾಯಮೂರ್ತಿ ಇಂದು ಮಲ್ಹೋತ್ರಾ ಅವರನ್ನು ಸರ್ವೋಚ್ಚ ನ್ಯಾಯಾಲಯ ನ್ಯಾಯಮೂರ್ತಿಯಾಗಿಸಲು ಶಿಫಾರಸು ಮಾಡಿತ್ತು. ಆದರೆ ಕೇಂದ್ರ ಸರ್ಕಾರ ನ್ಯಾಯಮೂರ್ತಿ ಇಂದು ಮಲ್ಹೋತ್ರಾ ಶಿಫಾರಸ್ಸನ್ನಷ್ಟೇ ಮನ್ನಿಸಿ ನ್ಯಾ. ಜೋಸೆಫ್ ಹೆಸರನ್ನು ತಿರಸ್ಕರಿಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
supreme courtಸರ್ವೋಚ್ಚ ನ್ಯಾಯಾಲಯBar AssociationJustice K M Josephಬಾರ್ ಅಸೋಸಿಯೇಷನ್ನ್ಯಾಯಮೂರ್ತಿ ಕೆ ಎಂ ಜೋಸೆಫ್
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


