ರಾಯ್ಬರೇಲಿ ಶಾಸಕಿ ಅದಿತಿ ಸಿಂಗ್ ಜತೆ ರಾಹುಲ್ ಮದುವೆ ಅಂತೆ: ಸುಳ್ಳು ಸುದ್ದಿ ವೈರಲ್
ಕರ್ನಾಟಕ ಚುನಾವಣಾ ಪ್ರಚಾರದಲ್ಲಿ ಸಕ್ರಿಯರಾಗಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಮದುವೆಯಾಗುತ್ತಿದ್ದಾರೆ ಎನ್ನುವ ಸುಳ್ಳು ಸುದ್ದಿಯೊಂದು ಫೋಟೋಗಳ...

Published On :
ನವದೆಹಲಿ: ಕರ್ನಾಟಕ ಚುನಾವಣಾ ಪ್ರಚಾರದಲ್ಲಿ ಸಕ್ರಿಯರಾಗಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಮದುವೆಯಾಗುತ್ತಿದ್ದಾರೆ ಎನ್ನುವ ಸುಳ್ಳು ಸುದ್ದಿಯೊಂದು ಫೋಟೋಗಳ ಸಮೇತ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ರಾಹುಲ್ ಗಾಂಧಿ ರಾಯ್ ಬರೇಲಿ ಕಾಂಗ್ರೆಸ್ ಶಾಸಕಿ ಅದಿತಿ ಸಿಂಗ್ ಅವರೊಂದಿಗೆ ಮದುವೆಯಾಗಿದ್ದಾರೆ ಎನ್ನುವ ಪೋಸ್ಟಿಂಗ್ ಗಳು ವೈರಲ್ ಆಗಿತ್ತು. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅದಿತಿ ಸಿಂಗ್ ಅವರು ಈ ವಿಚಾರ ನನಗೆ ತುಂಬಾ ನೋವು ತಂದಿದೆ. ರಾಹುಲ್ ಗಾಂಧಿ ಅವರು ನನಗೆ ರಕ್ಷಾ ಬಂಧನ ಕಟ್ಟಿದ ಅಣ್ಣ ಎಂದಿದ್ದಾರೆ.
29 ವರ್ಷದ ಅದಿತಿ ಸಿಂಗ್ ಅವರು ಅಮೆರಿಕ ಡ್ನೂಕ್ ವಿವಿಯಲ್ಲಿ ಮ್ಯಾನೇಜ್ ಮೆಂಟ್ ಶಿಕ್ಷಣ ಪಡೆದಿದ್ದು ರಾಯ್ ಬರೇಲಿಯ 5 ಬಾರಿಯ ಶಾಸಕ ಅಖಿಲೇಶ್ ಸಿಂಗ್ ಅವರ ಪುತ್ರಿ. ಕಳೆದ ಚುನಾವಣೆಯಲ್ಲಿ 90 ಸಾವಿರ ಮತಗಳ ಅಂತರದಿಂದ ಅದಿತಿ ಸಿಂಗ್ ಗೆಲುವು ಸಾಧಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


