ಮಾಜಿ ಸಿಎಂಗಳಿಗೆ ಸರ್ಕಾರಿ ಬಂಗಲೆ ಇಲ್ಲ: ಸುಪ್ರೀಂ ಕೋರ್ಟ್
ಮಾಜಿ ಸಿಎಂಗಳಿಗೆ ಸರ್ಕಾರಿ ಸವಲತ್ತು ನೀಡುವ ಉತ್ತರ ಪ್ರದೇಶ ಸಿಎಂ ಯೋಗಿ ಸರ್ಕಾರದ ತಿದ್ದುಪಡಿ ವಿಧೇಯಕಕ್ಕೆ ಹಿನ್ನಡೆಯಾಗಿದ್ದು, ಮಾಜಿ ಸಿಎಂಗಳಿಗೆ ಸರ್ಕಾರಿ ಬಂಗಲೆ ನೀಡಬಾರದು ಎಂಬ ಆದೇಶವನ್ನು ಎತ್ತಿ ಹಿಡಿದಿದೆ.

Published On :
ನವದೆಹಲಿ: ಮಾಜಿ ಸಿಎಂಗಳಿಗೆ ಸರ್ಕಾರಿ ಸವಲತ್ತು ನೀಡುವ ಉತ್ತರ ಪ್ರದೇಶ ಸಿಎಂ ಯೋಗಿ ಸರ್ಕಾರದ ತಿದ್ದುಪಡಿ ವಿಧೇಯಕಕ್ಕೆ ಹಿನ್ನಡೆಯಾಗಿದ್ದು, ಮಾಜಿ ಸಿಎಂಗಳಿಗೆ ಸರ್ಕಾರಿ ಬಂಗಲೆ ನೀಡಬಾರದು ಎಂಬ ಆದೇಶವನ್ನು ಎತ್ತಿ ಹಿಡಿದಿದೆ.
ಈ ಬಗ್ಗೆ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ರಂಜನ್ ಗಗೋಯ್, ಉತ್ತರ ಪ್ರದೇಶ ಸರ್ಕಾರದ ತಿದ್ದುಪಡಿ, ನಿರಂಕುಶ, ತಾರತಮ್ಯ ಪೂರಿತವಾಗಿದ್ದು, ಸಂವಿಧಾನದ ಸಮಾನತೆಯ ಪರಿಕಲ್ಪನೆಗೆ ವಿರುದ್ಧವಾದದ್ದಾಗಿದೆ ಎಂದು ಕಿಡಿಕಾರಿದೆ.
ಜನಪ್ರತಿನಿಧಿ ಹುದ್ದೆಯಿಂದ ಕೆಳಗಿಳಿದ ಮೇಲೆ ಅವರೂ ಕೂಡ ಸಾಮಾನ್ಯರೇ. ಅವರೂ ಮತ್ತು ಸಾಮಾನ್ಯರ ನಡುವೆ ಯಾವುದೇ ವ್ಯತ್ಯಾಸವಿರುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಎನ್ ಜಿಒ ಸಂಸ್ಥೆಯೊಂದು ಸಲ್ಲಿಕೆ ಮಾಡಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್ ಕಳೆದ ಏಪ್ರಿಲ್ 19ರ ವಿಚಾರಣೆ ವೇಳೆ ಆದೇಶವನ್ನು ಮುಂದೂಡಿತ್ತು. ಲೋಕ್ ಪ್ರಹಾರಿ ಸಂಸ್ಥೆ ಮಾಜಿ ಸಿಎಂಗಳಿಗೂ ಸರ್ಕಾರ ಸವಲತ್ತು ನೀಡುವ ಸಿಎಂ ಯೋಗಿ ಸರ್ಕಾರದ ಮಂತ್ರಿಗಳು (ವೇತನಗಳು, ಭತ್ಯೆಗಳು ಮತ್ತು ವಿವಿಧ ನಿಬಂಧನೆಗಳು) ಕಾಯಿದೆ, 1981ರ ತಿದ್ದುಪಡಿಗೆ ವಿರೋಧ ವ್ಯಕ್ತಪಡಿಸಿತ್ತು.
2016ರಲ್ಲಿಯೇ ಆದೇಶ ನೀಡಿದ್ದ ಸುಪ್ರೀಂ
ಇನ್ನು ಇದೇ ವಿಚಾರಕ್ಕೆ ಸಂಬಂಧಿಸಿದಂತೆ 2016ರಲ್ಲಿಯೇ ಸುಪ್ರೀಂ ಕೋರ್ಟ್ ತನ್ನ ಆದೇಶ ನೀಡಿತ್ತು. ಮಾಜಿ ಮುಖ್ಯಮಂತ್ರಿಗಳು ಸರ್ಕಾರಿ ಬಂಗಲೆಗಳಲ್ಲಿನ ತಮ್ಮ ವಾಸ್ತವ್ಯವನ್ನು ಜೀವನ ಪರ್ಯಂತ ಮುಂದುವರಿಸುವಂತಿಲ್ಲ ಎಂದು ಅಂದು ತನ್ನ ಆದೇಶ ಹೇಳಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
supreme courtನವದೆಹಲಿNew Delhiಸುಪ್ರೀಂ ಕೋರ್ಟ್Uttar pradeshಉತ್ತರ ಪ್ರದೇಶCM Yogi Adityanathಸಿಎಂ ಯೋಗಿ ಆದಿತ್ಯಾನಾಥ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


