ಕಾವೇರಿ ನಿರ್ವಹಣಾ ಮಂಡಳಿ: ಮತ್ತೆ 10 ದಿನ ಕಾಲಾವಕಾಶ ಕೋರಿದ ಕೇಂದ್ರ
ಕಾವೇರಿ ನೀರು ಹಂಚಿಕೆ ಕುರಿತ ಯೋಜನೆಯ ಕರಡು ಸಲ್ಲಿಕೆಗಾಗಿ ಮತ್ತೆ 10 ದಿನಗಳ ಕಾಲಾವಕಾಶ ನೀಡುವಂತೆ ಕೇಂದ್ರ ಸರ್ಕಾರ ನ್ಯಾಯಪೀಠವನ್ನು ಕೋರಿದೆ.

Published On :
ನವದೆಹಲಿ: ಕಾವೇರಿ ನೀರು ಹಂಚಿಕೆ ಕುರಿತ ಯೋಜನೆಯ ಕರಡು ಸಲ್ಲಿಕೆಗಾಗಿ ಮತ್ತೆ 10 ದಿನಗಳ ಕಾಲಾವಕಾಶ ನೀಡುವಂತೆ ಕೇಂದ್ರ ಸರ್ಕಾರ ನ್ಯಾಯಪೀಠವನ್ನು ಕೋರಿದೆ.
ಈ ಬಗ್ಗೆ ಸುಪ್ರೀಂ ಕೋರ್ಟ್ ಗೆ ಪ್ರಮಾಣ ಪತ್ರ ಸಲ್ಲಿಕೆ ಮಾಡಿರುವ ಕೇಂದ್ರ ಸರ್ಕಾರ, ಕಾವೇರಿ ಜಲವಿವಾದ ನ್ಯಾಯಮಂಡಳಿ ನೀಡಿದ್ದ ಐತೀರ್ಪನ್ನು ಮಾರ್ಪಡಿಸುವ ಮೂಲಕ ಸುಪ್ರೀಂ ಕೋರ್ಟ್ ಕಳೆದ ಫೆಬ್ರುವರಿ 16ರಂದು ನೀಡಿದ್ದ ತೀರ್ಪಿನ ಅನ್ವಯ ನೀರು ಹಂಚಿಕೆ ಕುರಿತ ಯೋಜನೆ ಸಿದ್ಧಪಡಿಸುವ ನಿಟ್ಟಿನಲ್ಲಿ ಕಣಿವೆ ವ್ಯಾಪ್ತಿಯ ಕರ್ನಾಟಕ, ತಮಿಳುನಾಡು, ಕೇರಳ ಮತ್ತು ಪುದುಚೇರಿ ಸರ್ಕಾರಗಳ ಮುಖ್ಯ ಕಾರ್ಯದರ್ಶಿಯವರ ಸಭೆ ಆಯೋಜಿಸಿ ಅಭಿಪ್ರಾಯ ಸಂಗ್ರಹಿಸಲಾಗಿದೆ ಎಂದು ಹೇಳಿದೆ.
ಅಂತೆಯೇ ಜಲ ಸಂಪನ್ಮೂಲ ಸಚಿವಾಲಯದ ಅಧಿಕಾರಿಗಳೂ ರಾಷ್ಟ್ರದ ವಿವಿಧೆಡೆ ಅಸ್ತಿತ್ವದಲ್ಲಿರುವ ವಿವಿಧ ನದಿ ನೀರು ನಿರ್ವಹಣಾ ಮಂಡಳಿಗಳು, ನೀರು ನಿಯಂತ್ರಣ ಸಮಿತಿಗಳ ಕಾರ್ಯವೈಖರಿ ಬಗ್ಗೆ ಅವಲೋಕಿಸಿದೆ ಎಂದು ಕೇಂದ್ರವು ಸೋಮವಾರ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿರುವ ಹೇಳಿಕೆಯಲ್ಲಿ ಸ್ಪಷ್ಟಪಡಿಸಿದೆ.
ಮೂಲಗಳು ತಿಳಿಸಿರುವಂತೆ ಕೇಂದ್ರ ಸರ್ಕಾರ ಈಗಾಗಲೇ ಕಾವೇರಿ ನದಿ ನೀರು ನಿರ್ವಹಣೆಯ ಕುರಿತ ಕರಡು ಸಿದ್ಧಪಡಿಸಿದೆಯಾದರೂ, ಸಂಬಂಧ ಪಟ್ಟ ರಾಜ್ಯಸರ್ಕಾರಗಳ ಅಭಿಪ್ರಾಯದಂತೆ ಕೆಲ ತಿದ್ದುಪಡಿಗಳನ್ನು ಮಾಡಬೇಕಿದೆಯಂತೆ. ಹೀಗಾಗಿ ಸುಪ್ರೀಂ ಕೋರ್ಟ್ ಕರಡು ಸಲ್ಲಿಕೆ ಮಾಡುವ ಮುನ್ನ ಕೇಂದ್ರದ ಅನುಮೋದನೆ ಪಡೆಯಬೇಕಿದೆ ಎಂದು ತಿಳಿದುಬಂದಿದೆ.
ಇನ್ನು ಕಳೆದ ತಿಂಗಳಷ್ಟೇ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದ ಕರ್ನಾಟಕ ಸಿಎಂ ಸಿದ್ದರಾಮಯ್ಯ ಕಾವೇರಿ ನಿರ್ವಹಣಾ ಮಂಡಳಿ ರಚನೆಗೆ ತಮ್ಮ ವಿರೋಧ ವ್ಯಕ್ತಪಡಿಸಿದ್ದರು. ಕಾವೇರಿ ನಿರ್ವಹಣಾ ಮಂಡಳಿ ರಚನೆ ಅಸವಿಂಧಾನಿಕ ನಡೆಯಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
supreme courtನವದೆಹಲಿNew DelhiKarnatakaಕರ್ನಾಟಕಸುಪ್ರೀಂ ಕೋರ್ಟ್ಕೇಂದ್ರ ಸರ್ಕಾರunion Governmentಕಾವೇರಿ ವಿವಾದCauvery row
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


