ನೀಟ್ ಪರೀಕ್ಷೆಯಲ್ಲಿ ಅಕ್ರಮ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪ
ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್)ಯಲ್ಲಿ ಅಕ್ರಮ ನಡೆದಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ಆರೋಪ ಮಾಡಿದ್ದು, ಮರುಪರೀಕ್ಷೆಗೆ ಒತ್ತಾಯಿಸಿ ಕೇಂದ್ರ ಸರ್ಕಾರಕ್ಕೆ ಮಂಗಳವಾರ ಪತ್ರ ಬರೆದಿದ್ದಾರೆ...

Published On :
ಕೋಲ್ಕತಾ: ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್)ಯಲ್ಲಿ ಅಕ್ರಮ ನಡೆದಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ಆರೋಪ ಮಾಡಿದ್ದು, ಮರುಪರೀಕ್ಷೆಗೆ ಒತ್ತಾಯಿಸಿ ಕೇಂದ್ರ ಸರ್ಕಾರಕ್ಕೆ ಮಂಗಳವಾರ ಪತ್ರ ಬರೆದಿದ್ದಾರೆ.
ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಪ್ರಕಾಶ್ ಜವಡೇಕರ್ ಅವರಿಗೆ ಪತ್ರ ಬರೆದಿರುವ ಮಮತಾ ಬ್ಯಾನರ್ಜಿಯವರು, ನೀಟ್ ಪರೀಕ್ಷೆಯಲ್ಲಿ ಅಕ್ರಮಗಳು ನಡೆದಿದೆ ಎಂದು ಆರೋಪ ಮಾಡಿದ್ದಾರೆ.
ರಾಜ್ಯದ ಹಲವು ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳಿಗೆ ಬಂಗಾಳಿ ಭಾಷೆಯಲ್ಲಿರುವ ಪ್ರಶ್ನೆಪತ್ರಿಕೆಗಳನ್ನು ನೀಡಿಲ್ಲ. ಇನ್ನು ಕೆಲವರಿಗೆ ಪ್ರಶ್ನೆಪತ್ರಿಕೆಯ ಪ್ರತಿಗಳನ್ನು ನೀಡಲಾಗಿದೆ. ಒಂದೇ ಕೋಡ್ ಇರುವಂತಹ ಪ್ರಶ್ನೆಪತ್ರಿಕೆಗಳನ್ನು ಹಲವು ವಿದ್ಯಾರ್ಥಿಗಳಿಗೆ ನೀಡಲಾಗಿದೆ. ಇದಲ್ಲದೆ, ಹಲವು ವಿದ್ಯಾರ್ಥಿಗಳಿಗೆ ಇಂಗ್ಲೀಷ್ ಹಾಗೂ ಹಿಂದಿಯಲ್ಲಿರುವ ಪ್ರಶ್ನೆ ಪತ್ರಿಕೆಗಳನ್ನು ನೀಡಲಾಗಿದೆ.
ಈ ಅಕ್ರಮಗಳ ಕುರಿತು ಕೇಂದ್ರ ಸರ್ಕಾರ ಕೂಡಲೇ ಈ ಬಗ್ಗೆ ಕ್ರಮ ಕೈಗೊಳ್ಳಬೇಕು. ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ಸಮಸ್ಯೆಗಳು ಎದುರಾಗದಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು. ಒಂದು ವೇಳೆ ಅಗತ್ಯಬಿದ್ದಲ್ಲಿ ಮರು ಪರೀಕ್ಷೆಯನ್ನು ನಡೆಸಬೇಕು ಎಂದು ಪತ್ರದಲ್ಲಿ ತಿಳಿಸಿದ್ದಾರೆ.
ಪರೀಕ್ಷಾ ಕೊಠಡಿಯಲ್ಲಿ 600 ವಿದ್ಯಾರ್ಥಿಗಳಿರುವಾಗ ಕೇವಲ 520 ಪ್ರಶ್ನೆಪತ್ರಿಕೆಗಳನ್ನು ನೀಡಲಾಗಿದೆ ಎಂದಿರುವ ಮಮತಾ ಅವರು ಪರೀಕ್ಷೆಗೆ ಸೂಕ್ತ ವ್ಯವಸ್ಥೆ ಸ್ಥಾಪನೆ ಮಾಡಲು ಮತ್ತು ಸಿಬಿಎಸ್ಇ ಜೊತೆ ಸಾಂಸ್ಥಿಕ ಮಟ್ಟದಲ್ಲಿ ಸಮನ್ವಯ ವ್ಯವಸ್ಥೆಯನ್ನು ಸ್ಥಾಪಿಸುವಂತೆ ಕೇಂದ್ರ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.
2017ರಲ್ಲಿಯೂ ಸಿಬಿಎಸ್ಇ ನಡೆಸಿದ್ದ ನೀಟಿ ಪರೀಕ್ಷೆಯಲ್ಲಿ ಇದೇ ರೀತಿಯ ಘಟನೆಗಳು ನಡೆದಿದ್ದವು. ಮತ್ತೆ ಇದೇ ರೀತಿಯ ಅಕ್ರಮಗಳು ನಡೆದಿದ್ದು, ಮುಂದೆ ಈ ರೀತಿಯ ಅಕ್ರಮಗಳು ನಡೆಯವುದಿಲ್ಲ ಎಂಬ ಭರವಸೆಯನ್ನು ಇಟ್ಟಿದ್ದೇವೆ. ಅಕ್ರಮಗಳನ್ನು ನೋಡಿದರೆ, ಪರೀಕ್ಷೆಗೆ ಆಡಳಿತ ಮಂಡಳಿ ಸೂಕ್ತ ರೀತಿಯ ವ್ಯವಸ್ಥೆಗಳನ್ನು ಮಾಡಿಕೊಂಡಿರಲಿಲ್ಲ ಎಂಬುದು ಸಾಬೀತಾಗುತ್ತಿದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಪಶ್ಚಿಮ ಬಂಗಾಳWest Bengalletterಪತ್ರಮಮತಾ ಬ್ಯಾನರ್ಜಿCentreಕೇಂದ್ರಅಕ್ರಮIrregularitiesNEETನೀಟ್Mamata Banerjea
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


