ವಿತ್ತ ಸಚಿವಾಲಯ ಮುಚ್ಚಿದೆ: ಸಚಿವ ಜೇಟ್ಲಿ, ಪ್ರಧಾನಿ ಮೋದಿ ಕುರಿತು ರಾಹುಲ್ ವ್ಯಂಗ್ಯಭರಿತ ಪತ್ರ
ನಾಯಕರ ಗೈರುಹಾಜರುಗಳಿಂದಾಗಿ ಕೇಂದ್ರ ವಿತ್ತ ಸಚಿವಾಲಯ ಬಣಗುಡುತ್ತಿದ್ದು, ಈ ನಡುವಲ್ಲೇ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಕುರಿತು ಮಂಗಳವಾರ ಲೇವಡಿ ಮಾಡಿದ್ದಾರೆ...

Published On :
ನವದೆಹಲಿ: ನಾಯಕರ ಗೈರುಹಾಜರುಗಳಿಂದಾಗಿ ಕೇಂದ್ರ ವಿತ್ತ ಸಚಿವಾಲಯ ಬಣಗುಡುತ್ತಿದ್ದು, ಈ ನಡುವಲ್ಲೇ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಕುರಿತು ಮಂಗಳವಾರ ಲೇವಡಿ ಮಾಡಿದ್ದಾರೆ.
ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ರಾಹುಲ್ ಗಾಂಧಿಯವರು, ನಾಯಕರು ಗೈರು ಹಾಜರಾಗಿದ್ದರೂ ಮೋದಿ ಸರ್ಕಾರ ಸಚಿವಾಲಯವನ್ನು ನಡೆಸುತ್ತಿರುವುದು ಹಾಸ್ಯಸ್ಪದವಾಗಿದೆ ಎಂದು ವ್ಯಂಗ್ಯವಾಡಿದ್ದಾರೆ.
ಅನಾರೋಗ್ಯದಿಂದಾಗಿ ಸಚಿವ ಅರುಣ್ ಜೇಟ್ಲಿಯವರು ಕಳೆದ ಏಪ್ರಿಲ್ ತಿಂಗಳಿನಿಂದ ಗೈರು ಹಾಜರಾಗಿದ್ದಾರೆ. ಇದರಂತೆ ಹಣಕಾಸು ಸಚಿವಾಲಯದ ಕಾರ್ಯದರ್ಶಿ ಹಸ್ಮುಖ್ ಆದಿಯಾ ಅವರು ಕೂಡ ತಮ್ಮ ಆಧ್ಯಾತ್ಮಿಕ ಗುರವಿನೊಂದಿಗೆ ಆತ್ಮ ಶಾಂತಿಯನ್ನು ಅರಸಿ ಮೈಸೂರಿಗೆ ತೆರಳಲು ಮೇ.20ರವರೆಗೂ ರಜೆ ಪಡೆದುಕೊಂಡಿದ್ದಾರೆ. ಹೀಗಾಗಿ ನಾನು ಕೇಂದ್ರ ಹಣಕಾಸು ಸಚಿವಾಲಯವನ್ನು ಮುಚ್ಚಲು ನಿರ್ಧರಿಸಿದ್ದೇನೆ. ಪ್ರಧಾನಮಂತ್ರಿಗಳ ಕಚೇರಿ ಈ ಮೊದಲಿನಂತೆಯೇ ಎಲ್ಲಾ ಹಣಕಾಸು ನೀತಿಗಳ ನಿರ್ಧಾರಗಳನ್ನು ತೆಗೆದುಕೊಳ್ಳಲಿದೆ ಎಂದು ವ್ಯಂಗ್ಯವಾಗಿ ಟ್ವೀಟ್ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


