ಪುತ್ರ ತೇಜ್ ಪ್ರತಾಪ್ ಮದುವೆಗೆ 5 ದಿನ ಪೆರೋಲ್ ಕೇಳಿದ ಲಾಲು
ಬಹುಕೋಟಿ ಮೇವು ಹಗರಣದಲ್ಲಿ ಜೈಲು ಪಾಲಾಗಿರುವ ಬಿಹಾರದ ಮಾಜಿ ಮುಖ್ಯಮಂತ್ರಿ ಹಾಗೂ ಆರ್ ಜೆಡಿ ಮುಖ್ಯಸ್ಥ ಲಾಲು...

Published On :
ರಾಂಚಿ: ಬಹುಕೋಟಿ ಮೇವು ಹಗರಣದಲ್ಲಿ ಜೈಲು ಪಾಲಾಗಿರುವ ಬಿಹಾರದ ಮಾಜಿ ಮುಖ್ಯಮಂತ್ರಿ ಹಾಗೂ ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರು ತಮ್ಮ ಪುತ್ರ ತೇಜ್ ಪ್ರತಾಪ್ ಯಾದವ್ ಅವರ ಮದುವೆಯಲ್ಲಿ ಭಾಗವಹಿಸುವುದಕ್ಕಾಗಿ ಐದು ದಿನಗಳ ಕಾಲ ಪೆರೋಲ್ ಕೇಳಿದ್ದಾರೆ.
ಲಾಲು ಪುತ್ರ ಹಾಗೂ ಹಾಲಿ ಆರ್ ಜೆಡಿ ಶಾಸಕ ತೇಜ್ ಪ್ರತಾಪ್ ಅವರು ಮೇ 12ರಂದು ಆರ್ ಜೆಡಿ ಶಾಸಕಿ ಚಂದ್ರಿಕಾ ರೈ ಅವರ ಪುತ್ರಿ ಐಶ್ವರ್ಯ ರೈ ಅವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದು, ಈ ಶುಭ ಗಳಿಗೆಯಲ್ಲಿ ಭಾಗವಹಿಸುವುದಕ್ಕಾಗಿ ಲಾಲು ಪ್ರಸಾದ್ ಯಾದವ್ ಅವರು ಪೆರೋಲ್ ಕೇಳಿದ್ದಾರೆ ಎಂದು ಅವರ ವಕೀಲರು ತಿಳಿಸಿದ್ದಾರೆ.
ಮೇ 10ರಿಂದ 14ರ ವರೆಗೆ ಪೆರೋಲ್ ನೀಡುವಂತೆ ಕೋರಿ ನಾವು ನಿನ್ನೆ ರಾಂಚಿ ಜೈಲು ಅಧೀಕ್ಷಕರಿಗೆ ಅರ್ಜಿ ಸಲ್ಲಿಸಿದ್ದೇವೆ. ನಮ್ಮ ನಾಯಕನಿಗೆ ಪೆರೋಲ್ ಸಿಗುವ ಭರವಸೆ ಇದೆ ಎಂದು ಆರ್ ಜೆಡಿ ರಾಷ್ಟ್ರೀಯ ಕಾರ್ಯದರ್ಶಿ ಮತ್ತು ಶಾಸಕ ಭೋಲಾ ಯಾದವ್ ಅವರು ಪಿಟಿಐಗೆ ತಿಳಿಸಿದ್ದಾರೆ.
ಮೇವು ಹಗರಣಕ್ಕೆ ಸಂಬಂಧಿಸಿದ ಮೂರು ಪ್ರಕರಣಗಳಲ್ಲಿ ಲಾಲು ಜೈಲು ಶಿಕ್ಷೆಗೆ ಗುರಿಯಾಗಿದ್ದು, ಸದ್ಯ ರಾಂಚಿಯ ರಾಜೇಂದ್ರ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಹೃದಯವಿಜ್ಞಾನ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


