ದೇಶ

ಕಾಶ್ಮೀರದಲ್ಲಿ ತಮಿಳು ಪ್ರವಾಸಿಗ ಸಾವು: ಸರ್ವಪಕ್ಷ ಸಭೆ ಕರೆದ ಸಿಎಂ ಮುಫ್ತಿ

ಪ್ರವಾಸಕ್ಕೆ ಬಂದಿದ್ದ ತಮಿಳುನಾಡು ಯುವಕನೊಬ್ಬ ಕಲ್ಲೇಟಿಗೆ ಬಲಿಯಾಗಿದ್ದು, ಘಟನೆಯಿಂದ ತೀವ್ರ ಬೇಸರಗೊಂಡಿರುವ....

ಕಾಶ್ಮೀರದಲ್ಲಿ ತಮಿಳು ಪ್ರವಾಸಿಗ ಸಾವು: ಸರ್ವಪಕ್ಷ ಸಭೆ ಕರೆದ ಸಿಎಂ ಮುಫ್ತಿ
ಮೆಹಬೂಬಾ ಮುಫ್ತಿ
Published On :
ಶ್ರೀನಗರ: ಪ್ರವಾಸಕ್ಕೆ ಬಂದಿದ್ದ ತಮಿಳುನಾಡು ಯುವಕನೊಬ್ಬ ಕಲ್ಲೇಟಿಗೆ ಬಲಿಯಾಗಿದ್ದು, ಘಟನೆಯಿಂದ ತೀವ್ರ ಬೇಸರಗೊಂಡಿರುವ ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಅವರು ಸರ್ವ ಪಕ್ಷ ಸಭೆ ಕರೆದಿದ್ದಾರೆ.
ಕಣಿವೆ ರಾಜ್ಯದಲ್ಲಿನ ಪರಿಸ್ಥಿತಿ ಕುರಿತು ಚರ್ಚಿಸಲು ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಅವರು ಬುಧವಾರ ಸರ್ವಪಕ್ಷ ಸಭೆ ಕರೆದಿದ್ದಾರೆ ಎಂದು ಅಧಿಕೃತ ವಕ್ತಾರರು ತಿಳಿಸಿದ್ದಾರೆ.
ನಾಳೆ ಮಧ್ಯಾಹ್ನ 2 ಗಂಟೆಗೆ ಶೆರ್-ಐ-ಕಾಶ್ಮೀರ ಇಂಟರ್ನ್ಯಾಷನಲ್ ಕಾನ್ಫರೆನ್ಸ್ ಸೆಂಟರ್ ನಲ್ಲಿ ಸರ್ವಪಕ್ಷ ಸಭೆ ಕರೆಯಲಾಗಿದೆ ಎಂದು ಅವರು ಹೇಳಿದ್ದಾರೆ.
ಕುಟುಂಬ ಸಮೇತ ಕಾಶ್ಮೀರಕ್ಕೆ ಪ್ರವಾಸಕ್ಕೆ ತೆರಳಿದ್ದ ಚೆನ್ನೈ ನಿವಾಸಿ, 22 ವರ್ಷದ ತಿರುಮಣಿ ಅವರ ವಾಹನದ ಮೇಲೆ ನಿನ್ನೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದರು. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ತಿರುಮಣಿ ಇಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಪ್ರವಾಸಿಗನ ಸಾವನ್ನು ಮೆಹಬೂಬಾ ಮುಫ್ತಿ ತೀವ್ರವಾಗಿ ಖಂಡಿಸಿದ್ದು, ಇದು ಮಾನವೀಯತೆಯ ಕಗ್ಗೊಲೆ ಎಂದು ಹೇಳಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.