ಉತ್ತರ ಪ್ರದೇಶಕ್ಕೆ ಅಪ್ಪಳಿಸಿದ ಚಂಡಮಾರುತ; 8 ಮಂದಿ ಸಾವು, ಹಲವರಿಗೆ ಗಾಯ
ದೆಹಲಿ ಬಳಿಕ ಉತ್ತರ ಪ್ರದೇಶಕ್ಕೆ ಧೂಳು ಸಹಿತ ಚಂಡಮಾರುತ ಅಪ್ಪಳಿಸಿದ್ದು, ಈವರೆಗೂ ವಿವಿಧ ಪ್ರಕರಣಗಳಲ್ಲಿ 8 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

Published On :
ಲಖನೌ: ದೆಹಲಿ ಬಳಿಕ ಉತ್ತರ ಪ್ರದೇಶಕ್ಕೆ ಧೂಳು ಸಹಿತ ಚಂಡಮಾರುತ ಅಪ್ಪಳಿಸಿದ್ದು, ಈವರೆಗೂ ವಿವಿಧ ಪ್ರಕರಣಗಳಲ್ಲಿ 8 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ನಿನ್ನೆ ಸಂಜೆ ಸುರಿದ ಬಿರುಗಾಳಿ, ಗುಡುಗು ಸಹಿತ ಭಾರೀ ಮಳೆಯಿಂದ ಉತ್ತರ ಪ್ರದೇಶದಲ್ಲಿ 8 ಮಂದಿ ಮೃತಪಟ್ಟಿದ್ದು, ನಾಲ್ವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಇತ್ಮಾದ್ಪುರದಲ್ಲಿ ಮನೆಯ ಮೇಲೆ ಮರವೊಂದು ಬಿದ್ದ ಪರಿಣಾಮ ಒಬ್ಬ ವ್ಯಕ್ತಿ ಮೃತಪಟ್ಟಿದ್ದಾರೆ. ಮಥುರಾದಲ್ಲಿ ಮೂವರು ಹಾಗು ಎತವಾದಲ್ಲಿ ನಾಲ್ವರು ಮೃತಪಟ್ಟು, ನಾಲ್ವರು ಗಾಯಗೊಂಡಿದ್ದಾರೆ” ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಆಗ್ರಾದ ಮನೆಯ ಮೇಲೆ ಮರ ಬಿದ್ದ ಪರಿಣಾಮ ಮನೆಯಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ಫಿರೋಜಾಬಾದ್ ನಲ್ಲಿ ಪ್ರಬಲ ಬಿರುಗಾಳಿ ಬೀಸಿದ ಪರಿಣಾಮ ನೂರಾರು ವಿದ್ಯುತ್ ಕಂಬಗಳು ನೆಲಕ್ಕುರುಳಿ, ವಿದ್ಯುತ್ ಸೇವೆ ಅಸ್ತವ್ಯಸ್ಥಗೊಂಡಿದೆ.
ಸಂತ್ರಸ್ಥ ಕುಟುಂಬಗಳಿಗೆ ಪರಿಹಾರ ನೀಡಿ, ಸಮರೋಪಾದಿಯಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸುವಂತೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯಾನಾಥ್ ಆದೇಶಿಸಿದ್ದಾರೆ. ಪ್ರಸ್ತುತ ಕರ್ನಾಟಕ ವಿಧಾನಸಭೆ ಚುನಾವಣೆ ನಿಮಿತ್ತ ರಾಜ್ಯದಲ್ಲಿ ಬಿಜೆಪಿ ಪ್ರಚಾರ ಕಾರ್ಯದಲ್ಲಿ ತೊಡಗಿರುವ ಅವರು, ಅಧಿಕಾರಿಗಳಿಗೆ ಈ ಬಗ್ಗೆ ಸೂಚನೆ ನೀಡಿದ್ದಾರೆ.
ಇನ್ನು ರಾಜಧಾನಿ ಲಖನೌನಲ್ಲಿ ಇಂದೂ ಕೂಡ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ನಚ್ಚರಿಕೆ ನೀಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


