ಪ. ಬಂಗಾಳ ಪಂಚಾಯತ್ ಚುನಾವಣೆ: ಕಲ್ಕತ್ತಾ ಹೈಕೋರ್ಟ್ ತೀರ್ಪಿಗೆ ಸುಪ್ರೀಂ ತಡೆ
ಪಶ್ಚಿಮ ಬಂಗಾಳ ಪಂಚಾಯತಿ ಚುನಾವಣೆ ಸ್ಪರ್ಧಿಸುವದಕ್ಕೆ ಈ-ಮೇಲ್ ಮೂಲಕ ಸಲ್ಲಿಸಿದ ನಾಮಪತ್ರಗಳ ಸ್ವೀಕೃತಿ ಕುರಿತಂತೆ ಕಲ್ಕತ್ತಾ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನಿಡಿದೆ.

Published On :
ನವದೆಹಲಿ: ಪಶ್ಚಿಮ ಬಂಗಾಳ ಪಂಚಾಯತಿ ಚುನಾವಣೆ ಸ್ಪರ್ಧಿಸುವದಕ್ಕೆ ಈ-ಮೇಲ್ ಮೂಲಕ ಸಲ್ಲಿಸಿದ ನಾಮಪತ್ರಗಳ ಸ್ವೀಕೃತಿ ಕುರಿತಂತೆ ಕಲ್ಕತ್ತಾ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನಿಡಿದೆ.
ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರನ್ನೊಳಗೊಂಡ ಪೀಠವು ರಾಜ್ಯದ ಸುಮಾರು 17,000 ಅಭ್ಯರ್ಥಿಗಳು ಸ್ಪರ್ಧಿಸಿದ ಚುನಾವ್ಣೆ ಫಲಿತಾಂಶ ಪ್ರಕಟಿಸಲು ತಡೆ ಹಾಕಿದೆ. ಅಲ್ಲದೆ ಮೇ 14ರಂದು ರಾಜ್ಯದಲ್ಲಿ "ಮುಕ್ತ ಮತ್ತು ನ್ಯಾಯಯುತ" ಚುನಾವಣೆ ನಡೆಯುವುದನ್ನು ಖಚಿತಪಡಿಸಿಕೊಳ್ಳುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಕೇಳಿದೆ.
ಒಟ್ಟಾರೆ 34 ಪ್ರತಿಶತ ಅಭ್ಯರ್ಥಿಗಳು ಚುನಾವಣೆಯಲ್ಲಿ ಅವಿರೋಧವಾಗಿ ಗೆದ್ದಿದ್ದಾರೆ ಎನ್ನುವುದು ಆತಂಕಕಾರಿ ವಿಚಾರವಾಗಿದೆ ಎಂದು ಸರ್ವೋಚ್ಚ ನ್ಯಾಯಾಲಯ ಹೇಳಿದೆ.
ಏಪ್ರಿಲ್ 23 ಮಧ್ಯಾಹ್ನ 3 ಗಂಟೆಗೆ ಮುನ್ನ ಸಿಪಿಐ (ಎಂ) ಪಕ್ಷದ ಅಭ್ಯರ್ಥಿಗಳು ಈ-ಮೇಲ್ ಮುಖೇನ ಸಲ್ಲಿಸಿದ್ದ ನಾಮಪತ್ರವನ್ನು ಮಾನ್ಯ ಮಾಡುವಂತೆ ಕಲ್ಕತ್ತಾ ಹೈಕೋರ್ಟ್ ರಾಜ್ಯ ಚುನಾವಣಾ ಆಯೋಗಕ್ಕೆ ಮೇ 8ರಂದು ನಿರ್ದೇಶಿಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
supreme courtಸುಪ್ರೀಂ ಕೋರ್ಟ್Calcutta High Courtಕಲ್ಕತ್ತಾ ಹೈಕೋರ್ಟ್ಪಶ್ಚಿಮ ಬಂಗಾಳ ಪಂಚಾಯತ್ ಚುನಾವಣೆWest Bengal panchayat polls
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


