ದೇಶ

ಏಕಪಕ್ಷೀಯ ಕದನ ವಿರಾಮಕ್ಕೆ ಕರೆ ನೀಡಿದ್ದ ಮೆಹಬೂಬಾ ಮುಫ್ತಿ ವಿರುದ್ಧ ಬಿಜೆಪಿ ಕೆಂಡಾಮಂಡಲ!

ಜಮ್ಮು-ಕಾಶ್ಮೀರದಲ್ಲಿ ಪಿಡಿಪಿ ನೇತೃತ್ವದ ಸರ್ಕಾರದ ಭಾಗವಾಗಿರುವ ಬಿಜೆಪಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದು, ಏಕಪಕ್ಷೀಯ ಕದನ ವಿರಾಮಕ್ಕೆ ಕರೆ ನೀಡಿದ್ದ ಮುಫ್ತಿ ಹೇಳಿಕೆಯನ್ನು ವಿರೋಧಿಸಿದೆ.

ಏಕಪಕ್ಷೀಯ ಕದನ ವಿರಾಮಕ್ಕೆ ಕರೆ ನೀಡಿದ್ದ ಮೆಹಬೂಬಾ ಮುಫ್ತಿ ವಿರುದ್ಧ ಬಿಜೆಪಿ ಕೆಂಡಾಮಂಡಲ!
ಮೆಹಬೂಬಾ ಮುಫ್ತಿ
Published On :
ಜಮ್ಮು: ಜಮ್ಮು-ಕಾಶ್ಮೀರದಲ್ಲಿ ಪಿಡಿಪಿ ನೇತೃತ್ವದ ಸರ್ಕಾರದ ಭಾಗವಾಗಿರುವ ಬಿಜೆಪಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದು, ಏಕಪಕ್ಷೀಯ ಕದನ ವಿರಾಮಕ್ಕೆ ಕರೆ ನೀಡಿದ್ದ ಮುಫ್ತಿ ಹೇಳಿಕೆಯನ್ನು ವಿರೋಧಿಸಿದೆ. 
ಮೆಹಬೂಬಾ ಮುಫ್ತಿ ಈ ಹೇಳಿಕೆಯ ಮೂಲಕ ಕಲ್ಲು ತೂರಾಟಗಾರರ ಪರ ಮೃದು ಧೋರಣೆ ಅನುಸರಿಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯ ಘಟಕ ಆರೋಪಿಸಿದೆ. ಮೆಹಬೂಬಾ ಮುಫ್ತಿ ಹೇಳುತ್ತಿರುವಂತೆ ಏಕಪಕ್ಷೀಯ ಕದನ ವಿರಾಮದ ಮೊರೆ ಹೋದರೆ ಅದು ಭಯೋತ್ಪಾದಕರಿಗಿರುವ ಒತ್ತಡ ಕಡಿಮೆ ಮಾಡಿದಂತಾಗುತ್ತದೆ. ಅವರಿಗೆ ಮತ್ತಷ್ಟು ಶಕ್ತಿ ಪಡೆಯುವುದಕ್ಕೆ ಸಹಕಾರಿಯಾಗುತ್ತದೆ ಎಂದು ಬಿಜೆಪಿ ವಕ್ತಾರರಾದ ಅರುಣ್ ಗುಪ್ತ ಹಾಗೂ ಸುನಿಲ್ ಸೇಥಿ ಅಭಿಪ್ರಾಯಪಟ್ಟಿದ್ದಾರೆ. 
ಕಾಶ್ಮೀರದ ಪರಿಸ್ಥಿತಿಗೆ ಸಂಬಂಧಿಸಿದಂತೆ ನೆನ್ನೆ ನಡೆದ ಸರ್ವಪಕ್ಷ ಸಭೆಯಲ್ಲಿ ಪರಿಸ್ಥಿತಿ ಸುಧಾರಣೆಗೆ ಅಟಲ್ ಬಿಹಾರಿ ವಾಜಪೇಯಿ ಅನುಸರಿಸಿದ್ದ ಮಾರ್ಗದಲ್ಲಿ ನಡೆದು ಏಕಪಕ್ಷೀಯ ಕದನ ವಿರಾಮಕ್ಕೆ ನಿರ್ಧಾರ ತೆಗೆದುಕೊಳ್ಳಬೇಕೆಂಬ ಅಭಿಪ್ರಾಯ ವ್ಯಕ್ತವಾಗಿತ್ತು ಆದರೆ ಈ ಅಭಿಪ್ರಾಯಕ್ಕೆ ಸಹಮತ ಮೂಡಲಿಲ್ಲ ಎಂದು ಬಿಜೆಪಿ ಹೇಳಿದೆ. 
ಏಕಪಕ್ಷೀಯ ಕದನ ವಿರಾಮ ಉಲ್ಲಂಘನೆಗೆ ಮೆಹಬೂಬಾ ಮುಫ್ತಿ ನೀಡಿರುವ ಸಲಹೆ ರಾಷ್ಟ್ರದ ಹಿತಾಸಕ್ತಿಯ ಪರವಾಗಿಲ್ಲ ಎಂದು ಬಿಜೆಪಿ ಹೇಳಿದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.