ದೇಶ

ಸಿಸಿಟಿವಿ ಯೋಜನೆಗೆ ಲೆಫ್ಟಿನೆಂಟ್ ಗವರ್ನರ್ ಆಕ್ಷೇಪ: ಪ್ರಧಾನಿ ಮಧ್ಯಸ್ಥಿಕೆಗೆ ಕೇಜ್ರಿವಾಲ್ ಮನವಿ

ದೆಹಲಿ ಸರ್ಕಾರದ ಸಿಸಿಟಿವಿ ಯೋಜನೆಗೆ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ಅವರು ಆಕ್ಷೇಪ ವ್ಯಕ್ತಪಡಿಸಿದ್ದು,....

ಸಿಸಿಟಿವಿ ಯೋಜನೆಗೆ ಲೆಫ್ಟಿನೆಂಟ್ ಗವರ್ನರ್ ಆಕ್ಷೇಪ: ಪ್ರಧಾನಿ ಮಧ್ಯಸ್ಥಿಕೆಗೆ ಕೇಜ್ರಿವಾಲ್ ಮನವಿ
ಅರವಿಂದ್ ಕೇಜ್ರಿವಾಲ್
Published On :
ನವದೆಹಲಿ: ದೆಹಲಿ ಸರ್ಕಾರದ ಸಿಸಿಟಿವಿ ಯೋಜನೆಗೆ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ಅವರು ಆಕ್ಷೇಪ ವ್ಯಕ್ತಪಡಿಸಿದ್ದು, ಈ ವಿಚಾರದಲ್ಲಿ ತಾವು ಮಧ್ಯಸ್ಥಿಕೆ ವಹಿಸಬೇಕು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.
ಈ ಸಂಬಂಧ ಮೋದಿ ಭೇಟಿಗೆ ಅರವಿಂದ್ ಕೇಜ್ರಿವಾಲ್ ಅವರ ಸಮಯ ಕೇಳಿದ್ದಾರೆ ಮತ್ತು ಸಿಸಿಟಿವಿ ಅಳವಡಿಸಲು ಅನುಮತಿ ನೀಡುವಂತೆ ಅನಿಲ್ ಬೈಜಾಲ್ ಅವರಿಗೆ ಸೂಚಿಸಬೇಕು ಎಂದು ದೆಹಲಿ ಸಿಎಂ ಪತ್ರದಲ್ಲಿ ಮನವಿ ಮಾಡಿದ್ದಾರೆ.
ಮಹಿಳೆಯರ ಸುರಕ್ಷತೆ ದೃಷ್ಟಿಯಿಂದ ಸಿಸಿಟಿವಿ ಅಳವಡಿಸಲಾಗುತ್ತಿದ್ದು, ಈ ವಿಚಾರದಲ್ಲಿ ರಾಜಕೀಯ ಮಾಡಬಾರದು ಎಂದು ಕೇಜ್ರಿವಾಲ್ ಹೇಳಿದ್ದಾರೆ.
ಸಿಸಿಟಿವಿ ಯೋಜನೆಯನ್ನು ತಡೆಯುವುದಕ್ಕಾಗಿಯೇ ಲೆಫ್ಟಿನೆಂಟ್ ಗವರ್ನರ್ ಸಮಿತಿ ರಚಿಸಿದ್ದಾರೆ ಮತ್ತು ಮಹಿಳೆಯರ ಸುರಕ್ಷತೆ ವಿಚಾರದಲ್ಲೂ ರಾಜಕೀಯ ಮಾಡುತ್ತಿದ್ದಾರೆ ಎಂದು ದೆಹಲಿ ಸಿಎಂ ಪ್ರಧಾನಿಗೆ ಬರೆದ ಪತ್ರದಲ್ಲಿ ಆರೋಪಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.