ದೇಶ

ಕಾಶ್ಮೀರದಲ್ಲಿ ಗುಂಡಿನ ದಾಳಿ: ವಿವಾಹದಲ್ಲಿ ಭಾಗವಹಿಸಬೇಕಿದ್ದ ವ್ಯಕ್ತಿ ಬಲಿ

ಕಾಶ್ಮೀರದ ಪೂಂಚ್ ಜಿಲ್ಲೆ ಗಡಿ ನಿಯಂತ್ರಣಾ ರೇಖೆ ಬಳಿ ಪಾಕಿಸ್ತಾನ ಪಡೆ ನಡೆಸಿದ ಗುಂಡಿನ ದಾಳಿಯಲ್ಲಿ 22 ವರ್ಷದ ವ್ಯಕ್ತಿಯೊಬ್ಬ ಹತ್ಯೆಯಾಗಿದ್ದಾನೆ ಎಂದು ಪೊಲೀಸರು ಹೇಳಿದರು.

ಕಾಶ್ಮೀರದಲ್ಲಿ ಗುಂಡಿನ ದಾಳಿ: ವಿವಾಹದಲ್ಲಿ ಭಾಗವಹಿಸಬೇಕಿದ್ದ ವ್ಯಕ್ತಿ ಬಲಿ
ಕಾಶ್ಮೀರದಲ್ಲಿ ಗುಂಡಿನ ದಾಳಿ: ವಿವಾಹದಲ್ಲಿ ಭಾಗವಹಿಸಬೇಕಿದ್ದ ವ್ಯಕ್ತಿ ಬಲಿ
Published On :
ಪೂಂಚ್(ಜಮ್ಮು ಕಾಶ್ಮೀರ): ಕಾಶ್ಮೀರದ ಪೂಂಚ್ ಜಿಲ್ಲೆ ಗಡಿ ನಿಯಂತ್ರಣಾ ರೇಖೆ ಬಳಿ ಪಾಕಿಸ್ತಾನ ಪಡೆ ನಡೆಸಿದ ಗುಂಡಿನ ದಾಳಿಯಲ್ಲಿ 22 ವರ್ಷದ ವ್ಯಕ್ತಿಯೊಬ್ಬ ಹತ್ಯೆಯಾಗಿದ್ದಾನೆ ಎಂದು ಪೊಲೀಸರು ಹೇಳಿದರು.
ಜಿಲ್ಲೆಯ ಗೋಲ್ಪುರ, ಬಾಗ್ಯಾಲ್-ಡಾರಾ ಸಿಮೆಯ ನಿಯಂತ್ರಣಾ ರೇಖೆಯ ಸನಿಹದಲ್ಲಿ ಪಾಕಿಸ್ತಾನ ಪಡೆಗಳು ಶಸ್ತ್ರಾಸ್ತ್ರಗಳ ಸಮೇತ ಗುಂಡಿನ ದಾಳಿ ನಡೆಸಿವೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಗುರುವಾರ ಮಧ್ಯರಾತ್ರಿ  12:30ಕ್ಕೆ ಈ ದಾಳಿ ನಡೆದಿದ್ದು ಭಾರತೀಯ ಸೇನೆ ಸಹ ಉತ್ತಮ ಪ್ರತಿದಾಳಿ ನಡೆಸಿದೆ ಎಂದು ಅವರು ಹೇಳಿದ್ದಾರೆ.
ಮೃತ ವ್ಯಕ್ತಿಯನ್ನು ಬಗಲ್ ಧಾರಾದ ಕಲ್ಸಾನ್ ಮಾಲ್ತಿ ನಿವಾಸಿಯಾದ ಮಹಮದ್ ಇಕ್ಲಾಕ್ ಎಂದು ಗುರುತಿಸಲಾಗಿದೆ. ದಾಳಿಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾಗಿ ಪೋಲೀಸ್ರೌ ಹೇಳಿದ್ದಾರೆ.
ಸತ್ತ ವ್ಯಕ್ತಿಯು ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವವನಿದ್ದ ಎನ್ನಲಾಗಿದ್ದು ಗಡಿ ರೇಖೆಯ ಉದ್ದಕ್ಕೂ ಗುಂಡಿನ ಚಕಮಕಿ ನಡೆಯುತ್ತಿದ್ದಾಗ ಹಾರಿಸಿದ ಗುಂಡು ತಗುಲಿ ಸಾವನ್ನಪ್ಪಿದ್ದಾನೆ.
ಈ ವರ್ಷಾರಂಬದಿಂದ ಇಂದಿನವರೆಗೆ ಕಾಶ್ಮೀರದ ಗಡಿ ಭಾಗದಲ್ಲಿ ಸುಮಾರು 700 ಬಾರಿ ಕದನ ವಿರಾಮ ಉಲ್ಲಂಘನೆಯಾಗಿದೆ. ಇಂತಹಾ ಘಟನೆಗಳಲ್ಲಿ ಭದ್ರತಾ ಪಡೆಯ 16  ಮಂದಿ ಸೇರಿ ಒಟ್ಟು 31 ಮಂದಿ ಸಾವನ್ನಪ್ಪಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.