ನೇಪಾಳದಲ್ಲಿ ದೇವಸ್ಥಾನಕ್ಕೆ ಭೇಟಿ ಮೂಲಕ ಕರ್ನಾಟಕ ಚುನಾವಣೆ ಮೇಲೆ ಪ್ರಭಾವ ಬೀರಲು ಮೋದಿ ಯತ್ನ: ಕಾಂಗ್ರೆಸ್
ನೇಪಾಳ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ದೇವಸ್ಥಾನಗಳಿಗೆ ಭೇಟಿ ನೀಡುವ ಮೂಲಕ ಕರ್ನಾಟಕ ಚುನಾವಣೆ ಮೇಲೆ ಪ್ರಭಾವ ಬೀರಲು ಯತ್ನಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ...

Published On :
ನೇಪಾಳ: ನೇಪಾಳ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ದೇವಸ್ಥಾನಗಳಿಗೆ ಭೇಟಿ ನೀಡುವ ಮೂಲಕ ಕರ್ನಾಟಕ ಚುನಾವಣೆ ಮೇಲೆ ಪ್ರಭಾವ ಬೀರಲು ಯತ್ನಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ.
ಹಿಂದೂಗಳು ಮತ್ತು ಬೌದ್ಧರು ಎರಡು ಧರ್ಮದವರು ಪವಿತ್ರ ಕ್ಷೇತ್ರ ಎಂದು ಪರಿಗಣಿಸಿರುವ ನೇಪಾಳದ ಪ್ರಸಿದ್ಧ ಮುಕ್ತಿನಾಥ ದೇವಸ್ತಾನಕ್ಕೆ ಪ್ರಧಾನಿ ಮೋದಿ ಅವರು ಭೇಟಿ ನೀಡಿದ್ದಾರೆ. ಇನ್ನು ಈ ಕ್ಷೇತ್ರಕ್ಕೆ ಭೇಟಿ ನೀಡಿದ ವಿಶ್ವದ ಮೊದಲ ನಾಯಕ ಎಂಬ ಖ್ಯಾತಿಗೆ ಮೋದಿ ಭಾಜನರಾಗಿದ್ದಾರೆ.
ನೇಪಾಳದಲ್ಲಿ ದೇವಸ್ಥಾನಗಳಿಗೆ ಭೇಟಿ ನೀಡುವ ಮೂಲಕ ಪ್ರಧಾನಿ ಮೋದಿ ಅವರು ಕರ್ನಾಟಕದ ಮತದಾರರನ್ನು ಸೆಳೆಯುವ ಯತ್ನ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ನ ಹಿರಿಯ ನಾಯಕ ಅಶೋಕ್ ಗೆಹ್ಲೋಟ್ ಆರೋಪಿಸಿದ್ದಾರೆ.
ಪ್ರಜಾಪ್ರಭುತ್ವದಲ್ಲಿ ಇದು ಉತ್ತಮ ಸಂಪ್ರದಾಯವಲ್ಲ. ಗುಜರಾತ್ ನಲ್ಲಿ ಮತದಾನದ ಬಳಿಕ ಮೋದಿ ರೋಡ್ ಶೋ ನಡೆಸಿದ್ದರು. ಇಂದು ಅವರು ಹೊಸ ಪಥವನ್ನು ಅಳವಡಿಸಿಕೊಂಡಿದ್ದಾರೆ. ಕರ್ನಾಟಕ ಚುನಾವಣೆ ದಿನ ನೇಪಾಳದಲ್ಲಿ ದೇವಸ್ಥಾನಗಳಿಗೆ ಭೇಟಿ ನೀಡುವ ಮೂಲಕ ಹಿಂದೂ ಮತದಾರರನ್ನು ಸೆಳೆಯಲು ಯತ್ನಿಸುತ್ತಿದ್ದಾರೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


