ದೇಶವನ್ನು ರಕ್ಷಿಸುವ ಬದಲು ನಿರ್ಮಲಾ ಸೀತಾರಾಮನ್ ಬಿಜೆಪಿ ನಾಯಕರನ್ನು ರಕ್ಷಿಸುತ್ತಿದ್ದಾರೆ: ಕಾಂಗ್ರೆಸ್
ರಕ್ಷಣಾ ಸಚಿವ ನಿರ್ಮಲಾ ಸೀತಾರಾಮನ್ ವಿರುದ್ಧ ಕಾಂಗ್ರೆಸ್ ಗಂಭೀರ ಆರೋಪ ಮಾಡಿದ್ದು, ರಕ್ಷಣಾ ಸಚಿವೆಯಾಗಿ ನಿರ್ಮಲಾ ಸೀತಾರಾಮನ್ ಕೊಡುಗೆ ಶೂನ್ಯ ಎಂದು ಹೇಳಿದೆ.

Published On :
ನವದೆಹಲಿ: ರಕ್ಷಣಾ ಸಚಿವ ನಿರ್ಮಲಾ ಸೀತಾರಾಮನ್ ವಿರುದ್ಧ ಕಾಂಗ್ರೆಸ್ ಗಂಭೀರ ಆರೋಪ ಮಾಡಿದ್ದು, ರಕ್ಷಣಾ ಸಚಿವೆಯಾಗಿ ನಿರ್ಮಲಾ ಸೀತಾರಾಮನ್ ಕೊಡುಗೆ ಶೂನ್ಯ ಎಂದು ಹೇಳಿದೆ.
ನಿರ್ಮಲಾ ಸೀತಾರಾಮನ್ ದೇಶವನ್ನು ರಕ್ಷಿಸುವುದರ ಬದಲು ಭ್ರಷ್ಟ ಬಿಜೆಪಿ ಸಚಿವರನ್ನು ಸಮರ್ಥಿಸಿಕೊಳ್ಳುವುದರಲ್ಲೇ ಕಾಲಹರಣ ಮಾಡುತ್ತಾದೆ. ದೇಶವನ್ನು ರಕ್ಷಿಸುವುದಕ್ಕಿಂತಲೂ ಬಿಜೆಪಿ ಸಚಿವರನ್ನು ರಕ್ಷಿಸುತ್ತಾರೆ ಎಂದು ಕಾಂಗ್ರೆಸ್ ಹೇಳಿದೆ.
ಮಾಜಿ ಕೇಂದ್ರ ಸಚಿವ ಪಿ ಚಿದಂಬರಂ ಅವರ ಕುಟುಂಬ ವಿದೇಶದಲ್ಲಿ ಹೊಂದಿರುವ ಆಸ್ತಿಯ ಬಗ್ಗೆ ನಿರ್ಮಲಾ ಸೀತಾರಾಮನ್ ಮಾತನಾಡಿದ್ದರು. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್, ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ದೇಶ ರಕ್ಷಣೆ ಕೆಲಸದಲ್ಲಿ ತೊಡಗುವುದರ ಬದಲು ಪಕ್ಷದ ರಕ್ಷಣೆಯಲ್ಲಿ ತೊಡಗಿರುತ್ತಾರೆ ಎಂದು ಕಾಂಗ್ರೆಸ್ ನಾಯಕ ಪವನ್ ಖೇರ ಆರೋಪಿಸಿದ್ದಾರೆ.
ಕೇಂದ್ರ ಸಚಿವರುಗಳು ವಿರೋಧಪಕ್ಷಗಳ ಪ್ರಶ್ನೆಗೆ ಉತ್ತರಿಸುವುದಿಲ್ಲ, ನಿರ್ಮಲಾ ಸೀತಾರಾಮನ್ ಅವರು ರಾಫೆಲ್ ಫೈಟರ್ ಜೆಟ್ ಒಪ್ಪಂದದ ಮೊತ್ತವನ್ನು ಬಹಿರಂಗಪಡಿಸುವುದಿಲ್ಲ, ಈ ಒಪ್ಪಂದದಲ್ಲಿ ಹಗರಣ ನಡೆದಿದೆ ಎಂದು ಖೇರಾ ಹೇಳಿದ್ದಾರೆ. ಚಿದಂಬರಂ ಆಸ್ತಿಗೆ ಸಂಬಂಧಿಸಿದಂತೆ ಅವರ ಲೆಕ್ಕಪರಿಶೋಧಕರು ಈಗಾಗಲೇ ಹೇಳಿಕೆ ನೀಡಿದ್ದಾರೆ, ಇದನ್ನು ಆದಾಯ ತೆರಿಗೆ ಇಲಾಖೆ ಕೋರ್ಟ್ ನಲ್ಲಿ ಪ್ರಶ್ನಿಸುತ್ತದೆ. ಬಿಜೆಪಿ ಆದಾಯ ತೆರಿಗೆ ಇಲಾಖೆಯನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


