ಹಿಮಾಚಲ ಪ್ರದೇಶದಲ್ಲಿ ಉರುಳಿ ಬಿದ್ದ ಬಸ್:7 ಮಂದಿ ದುರ್ಮರಣ
ರಸ್ತೆಯಿಂದ ಬಸ್ ಉರುಳಿ ಬಿದ್ದ ಪರಿಣಾಮ ಸುಮಾರು 7 ಮಂದಿ ಸಾವನ್ನಪ್ಪಿ 12 ಪ್ರಯಾಣಿಕರು ಗಾಯಗೊಂಡಿರುವ ಘಟನೆ ಹಿಮಾಚಲ ಪ್ರದೇಶದ ...

Published On :
ಶಿಮ್ಲಾ: ರಸ್ತೆಯಿಂದ ಬಸ್ ಉರುಳಿ ಬಿದ್ದ ಪರಿಣಾಮ ಸುಮಾರು 7 ಮಂದಿ ಸಾವನ್ನಪ್ಪಿ 12 ಪ್ರಯಾಣಿಕರು ಗಾಯಗೊಂಡಿರುವ ಘಟನೆ ಹಿಮಾಚಲ ಪ್ರದೇಶದ ಸರ್ಮೌರ್ ನಲ್ಲಿ ನಡೆದಿದೆ.
ಮಾನ್ವಾಯಿಂದ ಸೋಲಾನ್ ಗೆ ತೆರಳುತ್ತಿದ್ದ ಖಾಸಗಿ ಬಸ್ ರಾಜಗರ್ ಪಟ್ಟಣದಿಂದ 25 ಕೀಮೀ ದೂರು ಇರುವ ನೈನೇತಿ ಪಂಚಾಯತ್ ರಸ್ತೆಯಲ್ಲಿ ಉರುಳಿ ಬಿದ್ದಿದೆ.
ಗಾಯಗೊಂಡವರನ್ನು ಸೋಲಾನ್ ಪ್ರಾದೇಶಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ರಕ್ಷಣಾ ಕಾರ್ಯಾಚರಣೆ ಆರಂಭವಾಗಿದ್ದು ಅಪಘಾತಕ್ಕೆ ಕಾರಣ ಏನು ಎಂಬುದು ಇನ್ನೂ ತಿಳಿದು ಬಂದಿಲ್ಲ. ಸ್ಥಳೀಯ ಆಡಳಿತ ಅಧಿಕಾರಿಗಳು ಸ್ಥಳಕ್ಕೆ ಬರುವ ಮುನ್ನವೇ ಸ್ಥಳೀಯರು ಬಂದು ರಕ್ಷಣಾ ಕಾರ್ಯಾಚರಣೆಗೆ ತೆರಳಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


