ವೈದ್ಯಕೀಯ, ಕಾನೂನು, ಫೋರೆನ್ಸಿಕ್ ಪುರಾವೆಗಳ ಆಧಾರದ ಮೇಲೆ ತರೂರ್ ವಿರುದ್ಧ ಚಾರ್ಜ್ ಶೀಟ್
ಸುನಂದಾ ಪುಷ್ಕರ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ವೈದ್ಯಕೀಯ-ಕಾನೂನು, ಫೋರೆನ್ಸಿಕ್ ಪುರಾವೆಗಳ ಆಧಾರದ ಮೇಲೆ ಕಾಂಗ್ರೆಸ್ ನಾಯಕ ಹಾಗೂ ಸುನಂದಾ ಪುಷ್ಕರ್ ಅವರ ಪತ್ನಿ ಶಶಿ ತರೂರ್ ಅವರ ಹೆಸರನ್ನು ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನವದೆಹಲಿ : ಸುನಂದಾ ಪುಷ್ಕರ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ವೈದ್ಯಕೀಯ-ಕಾನೂನು, ಫೋರೆನ್ಸಿಕ್ ಪುರಾವೆಗಳ ಆಧಾರದ ಮೇಲೆ ಕಾಂಗ್ರೆಸ್ ನಾಯಕ ಹಾಗೂ ಸುನಂದಾ ಪುಷ್ಕರ್ ಅವರ ಪತ್ನಿ ಶಶಿ ತರೂರ್ ಅವರ ಹೆಸರನ್ನು ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಪ್ರಕರಣದ ಜಾರ್ಜ್ ಶೀಟ್ ನಲ್ಲಿ ಶಶಿ ತರೂರ್ ಅವರನ್ನೇ ಏಕೈಕ ಆರೋಪಿಯನ್ನಾಗಿಸಲಾಗಿದೆ. 3 ಸಾವಿರ ಪುಟಗಳ ಜಾರ್ಜ್ ಶೀಟ್ ನಲ್ಲಿ ಶಶಿ ತರೂರ್ ಅವರ ಪತ್ನಿಯೊಂದಿಗೆ ಕ್ರೂರವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಲಾಗಿದೆ.
ತನಿಖೆಯ ಸಂದರ್ಭದಲ್ಲಿ ವಿಶ್ಲೇಷಿಸಿದ ವೈದ್ಯಕೀಯ-ಕಾನೂನು ಮತ್ತು ನ್ಯಾಯ ಸಾಕ್ಷ್ಯಗಳ ಆಧಾರದ ಮೇಲೆ ಮತ್ತು ಮಾನಸಿಕ ಶವಪರೀಕ್ಷೆಯ ತಜ್ಞರ ಅಭಿಪ್ರಾಯದಲ್ಲಿ ಜಾರ್ಜ್ ಶೀಟ್ ಸಲ್ಲಿಸಲಾಗಿದ್ದು, ಈ ವಿಷಯವು ನ್ಯಾಯಾಧೀಶರದ್ದಾಗಿದೆ" ಎಂದು ದೆಹಲಿ ಪೊಲೀಸ್ ವಕ್ತಾರರು ತಿಳಿಸಿದ್ದಾರೆ.
ಸಾವಿನ ಕಾರಣವನ್ನು ಗುರುತಿಸುವ ಉದ್ದೇಶದಿಂದ ಸಾವಿನ ಸಮಯದಲ್ಲಿ ವ್ಯಕ್ತಿಯ ಮಾನಸಿಕ ಸ್ಥಿತಿಯನ್ನು ಅರ್ಥಮಾಡಿಕೊಳ್ಳಲು ಮನೋವೈಜ್ಞಾನಿಕ ಶವತಜ್ಞರು ಪುನರ್ ರಚಿಸಿದ ಮಾನಸಿಕ ಸ್ಥಿತಿಯ ಮೌಲ್ಯಮಾಪನ ಮಾಡಿದ್ದಾರೆ ಎಂದು ಅವರು ಹೇಳಿದ್ದಾರೆ.
ಸುನಂದಾ ಪುಷ್ಕರ್ 2014 ಜನವರಿ 17 ರ ರಾತ್ರಿ ದೆಹಲಿಯ ಲಕ್ಸುರಿ ಹೋಟೆಲ್ ವೊಂದರಲ್ಲಿ ಶವವಾಗಿ ಪತ್ತೆಯಾಗಿದ್ದರು. ಶಶಿ ತರೂರ್ ವಿರುದ್ಧ ಭಾರತೀಯ ದಂಡ ಸಂಹಿತೆ 498 (ಗಂಡ ಅಥವಾ ಕುಟುಂಬಸ್ಥರು ಮಹಿಳೆಗೆ ಗಾಯಗೊಳಿಸುವುದು ಅಥವಾ ಪ್ರಾಣಾಪಾಯ ತಂದೊಡ್ಡುವುದು), 306 (ಆತ್ಮಹತ್ಯೆಗೆ ಪ್ರೇರಣೆ) ಅಡಿಯಲ್ಲಿ ಜಾರ್ಜ್ ಶೀಟ್ ಸಲ್ಲಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


