ಕರ್ನಾಟಕ ಚುನಾವಣಾ ಫಲಿತಾಂಶ ರಾಷ್ಟ್ರ ರಾಜಕೀಯಕ್ಕೆ ತಿರುವು ನೀಡಲಿದೆ: ಬಾಬಾ ರಾಮ್'ದೇವ್
ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆ ಫಲಿತಾಂಶ ರಾಷ್ಟ್ರ ರಾಜಕೀಯಕ್ಕೆ ತಿರುವು ನೀಡಲಿದೆ ಎಂದು ಯೋಗ ಗುರು ಬಾಬಾ ರಾಮ್ ದೇವ್ ಹೇಳಿದ್ದಾರೆ...

Published On :
ಲಖನೌ; ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆ ಫಲಿತಾಂಶ ರಾಷ್ಟ್ರ ರಾಜಕೀಯಕ್ಕೆ ತಿರುವು ನೀಡಲಿದೆ ಎಂದು ಯೋಗ ಗುರು ಬಾಬಾ ರಾಮ್ ದೇವ್ ಹೇಳಿದ್ದಾರೆ.
ವಾರಣಾಸಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಕರ್ನಾಟಕ ಚುನಾವಣೆಯಲ್ಲಿ ಗೆಲುವು ಸಾಧಿಸುವವರು, ಇಂದು ಘೋಷಣೆಯಾಗುವ ಫಲಿತಾಂಶಗಳು, 2019ರ ಮುಂದಿನ ಸರ್ಕಾರವನ್ನು ನಿರ್ಧರಿಸಲಿದೆ. ದಕ್ಷಿಣ ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆ ಮಾಡುವ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ.
ಇದೇ ವೇಳೆ ಕೇಂದ್ರದ ಮಾಜಿ ಸಚಿವ ಮತ್ತು ಕಾಂಗ್ರೆಸ್ ಹಿರಿಯ ನಾಯಕ ಪಿ.ಚಿದಂಬರಂ ವಿರುದ್ಧ ಕಿಡಿಕಾರಿರುವ ಅವರು, ಚಿದಂಬರಂ ಅವರು ಮಾಡಿದ್ದ ತಪ್ಪುಗಳು ನಿಧಾನಗತಿಯಲ್ಲಿ ಬಹಿರಂಗಗೊಳ್ಳುತ್ತಿವೆ ಎಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
bjpಬಿಜೆಪಿKarnatakaಕರ್ನಾಟಕBaba Ramdevಬಾಬಾ ರಾಮ್ ದೇವ್Karnataka Assembly Electionಕರ್ನಾಟಕ ವಿಧಾನಸಭಾ ಚುನಾವಣೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


