ಕಾವೇರಿ ಸ್ಕೀಂ ಕುರಿತ ಅಂತಿಮ ಆದೇಶಕ್ಕೆ ತಡೆ ನೀಡುವಂತೆ ಮನವಿ: ಅರ್ಜಿ ತಿರಸ್ಕರಿಸಿದ ಸುಪ್ರೀಂಕೋರ್ಟ್
ರಾಜ್ಯ ವಿಧಾನಸಭೆ ಅತಂತ್ರ ಸ್ಥಿತಿಯಲ್ಲಿರುವುದರಿಂದ ನೂತನ ಸರ್ಕಾರ ರಚನೆಯಾಗುವವರೆಗೂ ಕಾವೇರಿ ನಿರ್ವಹಣಾ ಮಂಡಳಿ ರಚನೆ ಕುರಿತ ಅಂತಿಮ ಆದೇಶಕ್ಕೆ ತಡೆ ನೀಡುವಂತೆ ಕೋರಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮನವಿಯನ್ನು ಸುಪ್ರೀಂಕೋರ್ಟ್ ಬುಧವಾರ ತಿರಸ್ಕರಿಸಿದೆ...

Published On :
ನವದೆಹಲಿ; ರಾಜ್ಯ ವಿಧಾನಸಭೆ ಅತಂತ್ರ ಸ್ಥಿತಿಯಲ್ಲಿರುವುದರಿಂದ ನೂತನ ಸರ್ಕಾರ ರಚನೆಯಾಗುವವರೆಗೂ ಕಾವೇರಿ ನಿರ್ವಹಣಾ ಮಂಡಳಿ ರಚನೆ ಕುರಿತ ಅಂತಿಮ ಆದೇಶಕ್ಕೆ ತಡೆ ನೀಡುವಂತೆ ಕೋರಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮನವಿಯನ್ನು ಸುಪ್ರೀಂಕೋರ್ಟ್ ಬುಧವಾರ ತಿರಸ್ಕರಿಸಿದೆ.
ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರಿದ್ದ ಪೀಠ ಅರ್ಜಿಯನ್ನು ತಿರಸ್ಕರಿಸಿದ್ದು, ಕರಡು ಯೋಜನೆ ಸಿದ್ಧಪಡಿಸಿರುವುದು ಕೇಂಗ್ರ ಸರ್ಕಾರವೇ, ಹೊರತು ರಾಜ್ಯ ಸರ್ಕಾರಗಳಲ್ಲ ಎಂದು ಹೇಳಿದೆ.
ದಕ್ಷಿಣ ರಾಜ್ಯಗಳಾದ ತಮಿಳುನಾಡು, ಕರ್ನಾಟಕ, ಕೇರಳ ಮತ್ತು ಪುದುಚೇರಿ ರಾಜ್ಯಗಳ ನಡುವೆ ಕಾವೇರಿ ನೀರು ಹಂಚಿಕೆ ಕುರಿತು ಅಂತಿಮ ಆದೇಶ ನೀಡಲು ಕೇಂದ್ರ ಸರ್ಕಾರಕ್ಕೆ ನೀಡುವ ಅಧಿಕಾರ ಕುರಿತ ಕಾವೇರಿ ನಿರ್ವಹಣಾ ಮಂಡಳಿಯ ಕರಡಿನಲ್ಲಿರುವ ಕೆಲ ನಿಬಂಧನೆಗಳನ್ನು ಮಾರ್ಪಾಡು ಮಾಡಿ, ಮೇ.17 ಗುರುವಾರದೊಳಗಾಗಿ ಸಲ್ಲಿಸುವಂತೆ ಅಟಾರ್ನಿ ಜನರಲ್ ಕೆ.ಕೆ.ವೇಣುಗೋಪಾಲ್ ಅವರಿಗೆ ಇದೇ ವೇಳೆ ಸೂಚನೆ ನೀಡಿದೆ.
ಕಾವೇರಿ ನದಿ ನೀರು ವಿಚಾರಕ್ಕೆ ಸಂಬಂಧಿಸಿದಂತೆ ಇಂದು ನಡೆದ ವಿಚಾರಣೆ ವೇಳೆ ಹಿರಿಯ ವಕೀಲ ಶ್ಯಾಮ್ ದಿವಾನ್ ಅವರು ವಾದ ಮಂಡಿಸಿದ್ದರು. ಕಾವೇರಿ ನಿರ್ವಹಣಾ ಮಂಡಳಿ ಕುರಿತ ಕೇಂದ್ರ ಸರ್ಕಾರ ರಚನೆ ಮಾಡಿರುವ ಕರಡಿಗೆ ಎಲ್ಲಾ ರಾಜ್ಯಗಳು ತಮ್ಮ ತಮ್ಮ ಅಭಿಪ್ರಾಯಗಳನ್ನು ಸಲ್ಲಿಸುತ್ತಿವೆ. ನನಗೆ ಕರ್ನಾಟಕ ರಾಜ್ಯದಿಂದ ಯಾವುದೇ ರೀತಿಯ ಪ್ರತಿಕ್ರಿಯೆಗಳಾಗಲೀ ಅಥವಾ ಕಾನೂನು ಸಚಿವಾಲಗಳಿಂದ ಯಾವುದೇ ರೀತಿಯ ಸೂಚನೆಗಳು ಬಾರದಿರುವುದರಿಂದ ಜುಲೈ ಮೊದಲ ವಾರದವರಿಗೂ ಅಂತಿಮ ಆದೇಶವನ್ನು ತಡೆ ಹಿಡಿಯುವಂತೆ ಮನವಿ ಮಾಡಿದರು.
ಇದಕ್ಕೆ ಪ್ರತಿಕ್ರಿಯೆ ನೀಡಿದ ನ್ಯಾಯಾಲಯ, ಕರಡು ಯೋಜನೆ ರೂಪಿಸಿರುವುದು ಕೇಂದ್ರ ಸರ್ಕಾರವೇ ಹೊರತು, ರಾಜ್ಯ ಸರ್ಕಾರಗಳಲ್ಲ ಎಂದು ಹೇಳಿತು.
ಸುದೀರ್ಘ ವಾದ ವಿವಾದಗಳ ಬಳಿಕ, ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿದ ಸುಪ್ರೀಂಕೋರ್ಟ್, ಕಾವೇರಿ ನಿರ್ವಹಣಾ ಮಂಡಳಿಯ ಪ್ರಾಧಿಕಾರವನ್ನು ಬೆಂಗಳೂರಿನಿಂದ ದೆಹಲಿ ಸ್ಥಳಾಂತರಿಸುವಂತೆ ತಿಳಿಸಿದ್ದು, ಕಾವೇರಿ ನಿರ್ವಹಣಾ ಮಂಡಳಿ ಪ್ರಾಧಿಕಾರ ಹೆಸರಿನ ಬದಲು ಕಾವೇರಿ ನಿರ್ವಹಣಾ ಮಂಡಳಿ ಎಂದು ಹೆಸರಿಡುವಂತೆ ಸೂಚಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
supreme courtಸುಪ್ರೀಂಕೋರ್ಟ್Karnatakaಕರ್ನಾಟಕಕಾವೇರಿ ವಿವಾದCauvery disputeCauvery management boardಕಾವೇರಿ ನಿರ್ವಹಣಾ ಮಂಡಳಿಕಾವೇರಿ ಕರಡು ಯೋಜನೆDraft Cauvery scheme
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


