ಡ್ರೈವಿಂಗ್ ವೇಳೆ ಮೊಬೈಲ್ ಬಳಕೆ ಅಪರಾಧವಲ್ಲ: ಕೇರಳ ಹೈಕೋರ್ಟ್
ವಾಹನ ಚಾಲನೆ ಮಾಡುವ ವೇಳೆ ಮೊಬೈಲ್ ಬಳಸುವುದು ಅಪರಾಧವಲ್ಲ ಎಂದು ಕೇರಳ ಹೈಕೋರ್ಟ್ ಗುರುವಾರ...

Published On :
ಕೊಚ್ಚಿ: ವಾಹನ ಚಾಲನೆ ಮಾಡುವ ವೇಳೆ ಮೊಬೈಲ್ ಬಳಸುವುದು ಅಪರಾಧವಲ್ಲ ಎಂದು ಕೇರಳ ಹೈಕೋರ್ಟ್ ಗುರುವಾರ ಹೇಳಿದೆ.
ಕಾರು ಚಾಲನೆ ಮಾಡುತ್ತಿದ್ದ ವೇಳೆ ಮೊಬೈಲ್ ಬಳಸಿದ್ದ ತಮ್ಮ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿದ್ದನ್ನು ಪ್ರಶ್ನಿಸಿ ಎಂ ಜೆ ಸಂತೋಷ್ ಎಂಬುವವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ವಿಭಾಗೀಯ ಪೀಠ, ವಾಹನ ಚಲಾಯಿಸುವ ವೇಳೆ ಮೊಬೈಲ್ ಬಳಸುವುದರಿಂದ ಸಾರ್ವಜನಿಕರಿಗೆ ಹಾನಿ ಉಂಟಾಗದೇ ಹೋದಲ್ಲಿ, ಆರೋಪಿಯನ್ನು ದಂಡಿಸುವ ಅವಕಾಶ ಪೊಲೀಸ್ ಕಾಯ್ದೆ 118(ಇ)ಗೆ ಇಲ್ಲ ಎಂದು ಹೇಳಿದೆ.
ವಾಹನ ಚಾಲನೆ ವೇಳೆ ಮೊಬೈಲ್ ಬಳಸಿದಲ್ಲಿ, ಪೊಲೀಸ್ ಕಾಯ್ದೆ 118(ಇ) ಸಾರ್ವಜನಿಕರಿಗೆ ಅಪಾಯ ಒಡ್ಡಿರುವ ಆರೋಪದಲ್ಲಿ ಜೈಲು ಶಿಕ್ಷೆ, ದಂಡ ಅಥವಾ ಇವರೆಡನ್ನೂ ವಿಧಿಸಲು ಅವಕಾಶಗಳಿದೆ. ಆದರೆ ಆರೋಪಿಯಿಂದ ಸಾರ್ವಜನಿಕರ ಸುರಕ್ಷತೆಗೆ ತೊಂದರೆಯಾಗಿದ್ದಲ್ಲಿ ಮಾತ್ರ ಇದು ಅನ್ವಯವಾಗುತ್ತದೆ ಎಂದು ನ್ಯಾಯಮೂರ್ತಿ ಎಎಂ ಶಫಿಕ್ ಮತ್ತು ನ್ಯಾಯಮೂರ್ತಿ ಪಿ ಸೋಮರಾಜನ್ ಅವರು ಸ್ಪಷ್ಟಪಡಿಸಿದ್ದಾರೆ.
ಏ.26ರಂದು ಸಂತೋಷ್ ಅವರ ವಿರುದ್ಧ ಕಾರು ಚಲಾವಣೆ ವೇಳೆ ಮೊಬೈಲ್ ಬಳಸಿದ ಆರೋಪದ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


