ದೇಶದಲ್ಲಿನ ಎಲ್ಲಾ ಸಾಂವಿಧಾನಿಕ ಸಂಸ್ಥೆಗಳು ಬಿಜೆಪಿ, ಆರ್ ಎಸ್ ಎಸ್ ಅಧೀನ- ರಾಹುಲ್ ಗಾಂಧಿ
ಬಿಜೆಪಿ ನೇತೃತ್ವದ ಕೇಂದ್ರಸರ್ಕಾರದ ವಿರುದ್ಧ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದು, ಸಂವಿಧಾನಿಕ ಸಂಸ್ಥೆಗಳು ಕೇಂದ್ರದ ಅಧೀನಕ್ಕೊಳಪಟ್ಟಿದ್ದು, ದೇಶದಲ್ಲಿ ಭಯದ ವಾತವಾರಣ ನಿರ್ಮಾಣವಾಗಿದೆ ಎಂದು ಆರೋಪಿಸಿದ್ದಾರೆ.

ರಾಯಪುರ : ಬಿಜೆಪಿ ನೇತೃತ್ವದ ಕೇಂದ್ರಸರ್ಕಾರದ ವಿರುದ್ಧ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದು, ದೇಶದಲ್ಲಿನ ಎಲ್ಲಾ ಸಾಂವಿಧಾನಿಕ ಸಂಸ್ಥೆಗಳು ಕೇಂದ್ರದ ಅಧೀನಕ್ಕೊಳಪಟ್ಟಿದ್ದು, ದೇಶದಲ್ಲಿ ಭಯದ ವಾತವಾರಣ ನಿರ್ಮಾಣವಾಗಿದೆ ಎಂದು ಆರೋಪಿಸಿದ್ದಾರೆ.
ಸಂವಿಧಾನದ 73 ಮತ್ತು 74ನೇ ತಿದ್ದುಪಡಿಯ ಬೆಳ್ಳಿ ಮಹೋತ್ಸವ ಅಂಗವಾಗಿ ಸ್ಥಳೀಯ ಆಡಳಿತ ಆಯೋಜಿಸಿದ್ದ ಜನ್ ಸ್ವರಾಜ್ ಸಮ್ಮೇಳನ ಕಾರ್ಯಕ್ರಮದಲ್ಲಿ ಮಾತನಾಡಿದ ರಾಹುಲ್ ಗಾಂಧಿ, ಬಿಜೆಪಿ ಮತ್ತು ಆರ್ ಎಸ್ ಸ್ ದೇಶದಲ್ಲಿನ ಎಲ್ಲಾ ಪ್ರಜಾಪ್ರಭುತ್ವ ಸಂಸ್ಥೆಗಳನ್ನು ಆಕ್ರಮಣ ಮಾಡಿಕೊಂಡಿವೆ ಎಂದು ಆರೋಪಿಸಿದರು.
ದೇಶದಲ್ಲಿನ ನ್ಯಾಯಾಂಗ ವ್ಯವಸ್ಥೆಯಲ್ಲಿ ಭೀತಿ ಆವರಿಸಿದೆ. ಮಾಧ್ಯಮ ಕ್ಷೇತ್ರದಲ್ಲೂ ಭಯದ ವಾತವಾರಣವಿದೆ. ಪ್ರಧಾನಿ ನರೇಂದ್ರಮೋದಿ ಎದುರು ನಿಂತು ಯಾವುದೇ ಸಂಸದ ಮಾತನಾಡದ ಪರಿಸ್ಥಿತಿ ಸೃಷ್ಟಿಯಾಗಿದೆ ಎಂದು ರಾಹುಲ್ ಗಾಂಧಿ ಟೀಕಿಸಿದರು.
ಕರ್ನಾಟಕದಲ್ಲಿ ಶಾಸಕರು ಒಂದು ಕಡೆಯಾದರೆ, ರಾಜ್ಯಪಾಲರು ಮತ್ತೊಂದು ಕಡೆ ಹೀಗೆ ದೇಶದಲ್ಲಿನ ಎಲ್ಲಾ ಪ್ರಜಾಪ್ರಭುತ್ವ ಸಂಸ್ಥೆಗಳು, ಸಂಸದರು, ಶಾಸಕರು, ಮಾಧ್ಯಮ, ಯೋಜನಾ ಆಯೋಗ ಎಲ್ಲಾದರಲ್ಲೂ ಜನರನ್ನು ತನ್ನ ಹಿಡಿತದಲ್ಲಿಟ್ಟುಕೊಳ್ಳಲು ಆರ್ ಎಸ್ ಎಸ್ ಪ್ರಯತ್ನಿಸುತ್ತಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


