ದೇಶ

ಜಮ್ಮು-ಕಾಶ್ಮೀರ : ಭಯೋತ್ಪಾದಕ ದಾಳಿ ನಂತರ ಇಬ್ಬರು ಪೊಲೀಸರ ಬಂಧನ , ವಿಚಾರಣೆ

ಭಯೋತ್ಪಾದಕ ದಾಳಿ ನಂತರ ಇಬ್ಬರು ಪೊಲೀಸರನ್ನು ಬಂಧಿಸಿ, ವಿಚಾರಣೆ ನಡೆಸಲಾಗಿದೆ. ಭಯೋತ್ಪಾದಕರು ತಮ್ಮ ಸಿಬ್ಬಂದಿ ಮೇಲೆ ದಾಳಿ ನಡೆಸಿ, ತಮ್ಮ ಶಸಾಸ್ತ್ರಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಜಮ್ಮು-ಕಾಶ್ಮೀರ : ಭಯೋತ್ಪಾದಕ ದಾಳಿ ನಂತರ  ಇಬ್ಬರು ಪೊಲೀಸರ ಬಂಧನ , ವಿಚಾರಣೆ
ಸಾಂದರ್ಭಿಕ ಚಿತ್ರ
Published On :

ಜಮ್ಮು-ಕಾಶ್ಮೀರ :  ಭಯೋತ್ಪಾದಕ ದಾಳಿ ನಂತರ ಇಬ್ಬರು ಪೊಲೀಸರನ್ನು ಬಂಧಿಸಿ, ವಿಚಾರಣೆ ನಡೆಸಲಾಗಿದೆ. ಭಯೋತ್ಪಾದಕರು ತಮ್ಮ ಸಿಬ್ಬಂದಿ ಮೇಲೆ ದಾಳಿ ನಡೆಸಿ, ತಮ್ಮ ಶಸಾಸ್ತ್ರಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಆರ್ ಎಸ್ ಪುರ ಸೆಕ್ಟರ್ ನ ಹೋಟೆಲ್ ಬಳಿಯ ಸಿಬ್ಬಂದಿ ಕರ್ತವ್ಯದಲ್ಲಿದ್ದಾಗ ಈ ಘಟನೆ ಸಂಭವಿಸಿದೆ.  ಭಯೋತ್ಪಾದಕರ ಗುಂಪು ತಮ್ಮ ಮೇಲೆ ದಾಳಿ ನಡೆಸಿದ್ದು, ಬಂದೂಕುಗಳೆನೆಲ್ಲಾ  ಕದ್ದು ಹೊಯ್ದಿದ್ದಾರೆ ಎಂದು ಕೇಂದ್ರ ಕಚೇರಿಗೆ ಪೊಲೀಸರು ತಿಳಿಸಿದ್ದಾರೆ.

ಜನದಟ್ಠಣೆ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಸೂಕ್ತ ಸಾಕ್ಷ್ಯಧಾರ ದೊರೆತಿಲ್ಲ ಎಂಬುದು ಪ್ರಾಥಮಿಕ ವಿಚಾರಣೆಯಿಂದ ತಿಳಿದುಬಂದಿದೆ.  ಘಟನೆ ನಡೆದ ಕೂಡಲೇ  ಜಮ್ಮು-ಕಾಶ್ಮೀರ ಶಸ್ತ್ರಾಸ್ತ ಪೊಲೀಸರ ಜೊತೆಯಲ್ಲಿದ್ದ ಇಬ್ಬರು ಪೊಲೀಸರನ್ನು ಬಂಧಿಸಲಾಗಿದೆ. ತಲೆಮರೆಸಿಕೊಂಡಿರುವ ಮತ್ತೊಬ್ಬ ಪೊಲೀಸರ ಸೆರೆಗಾಗಿ ಹುಡುಕಾಟ ನಡೆಸಲಾಗುತ್ತಿದೆ.

ಪ್ರಧಾನಮಂತ್ರಿ ನರೇಂದ್ರಮೋದಿ ನಾಳೆ ಜಮ್ಮು-ಕಾಶ್ಮೀರಕ್ಕೆ ಭೇಟಿ ನೀಡಲಿದ್ದಾರೆ. ಈ ಮಧ್ಯೆ ಭಯೋತ್ಪಾದಕ ದಾಳಿ ನಡೆದಿರುವುದು ಭದ್ರತಾ ವ್ಯವಸ್ಥೆ ಲೋಪದ ಬಗ್ಗೆ ಶಂಕೆ ವ್ಯಕ್ತವಾಗಿದೆ.


Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.