2001ರ ಕೇರಳ ಮರ್ಯಾದೆ ಹತ್ಯೆ ಪ್ರಕರಣ: ಇಬ್ಬರಿಗೆ ಜೀವಾವಧಿ ಶಿಕ್ಷೆ
ಕೇರಳದ ಕಾಸರಗೋಡಿನಲ್ಲಿ ಮುಸ್ಲಿಂ ಮಹಿಳೆಯನ್ನು ಮದುವೆಯಾಗಿದ್ದ ಯುವ ಕಾಂಗ್ರೆಸ್ ನಾಯಕನನ್ನ....

Published On :
ಕೊಚ್ಚಿ: ಕೇರಳದ ಕಾಸರಗೋಡಿನಲ್ಲಿ ಮುಸ್ಲಿಂ ಮಹಿಳೆಯನ್ನು ಮದುವೆಯಾಗಿದ್ದ ಯುವ ಕಾಂಗ್ರೆಸ್ ನಾಯಕನನ್ನು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಚ್ಚಿಯ ಸಿಬಿಐ ವಿಶೇಷ ಕೋರ್ಟ್ ಇಬ್ಬರು ತಪ್ಪಿತಸ್ಥರಿಗೆ ಜೀವಾವಧಿ ಶಿಕ್ಷೆ ವಿಧಿಸಿ ಶುಕ್ರವಾರ ತೀರ್ಪು ನೀಡಿದೆ. ಅಲ್ಲದೆ ತಲಾ ಒಂದು ಲಕ್ಷ ರುಪಾಯಿ ದಂಡ ವಿಧಿಸಿದೆ.
2001ರಲ್ಲಿ ಮುಸ್ಲಿಂ ಮಹಿಳೆಯನ್ನು ಮದುವೆಯಾಗಿದ್ದ ಯುವ ಕಾಂಗ್ರೆಸ್ ಬಾಲಕೃಷ್ಣನ್ ಅವರನ್ನು ಹತ್ಯೆ ಮಾಡಲಾಗಿತ್ತು.
ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ಸಿಬಿಐ ನ್ಯಾಯಾಧೀಶ ಎಸ್ ಸಂತೋಷ್ ಕುಮಾರ್ ಅವರು, ಅಪರಾಧಿಗಳಾದ ಮೊಹಮ್ಮದ್ ಇಖ್ಬಾಲ್ ಅಲಿಯಾಸ್ ಇಕ್ಕು, ಹಾಗೂ ಮೊಹಮ್ಮದ್ ಹನೀಫ್ ಅಲಿಯಾಸ್ ಜ್ಯಾಕಿ ಹನೀಫ್ ಗೆ ಜೀವಾವಧಿ ಶಿಕ್ಷೆ ವಿಧಿಸಿದೆ ಮತ್ತು ಇತರೆ ನಾಲ್ವರು ಆರೋಪಿಗಳನ್ನು ಖುಲಾಸೆಗೊಳಿಸಿದೆ.
ದಂಡದ ಹಣವನ್ನು ಬಾಲಕೃಷ್ಣನ್ ಅವರ ತಂದೆ ಗೋಪಾಲನ್ ಅವರಿಗೆ ನೀಡಬೇಕು ಎಂದು ಸಿಬಿಐ ಕೋರ್ಟ್ ಆದೇಶಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
CBI Courtಸಿಬಿಐ ಕೋರ್ಟ್2001 Kerala \'honour killing\' caselife imprisonment to two2001ರ ಕೇರಳ ಮರ್ಯಾದೆ ಹತ್ಯೆ ಪ್ರಕರಣಇಬ್ಬರಿಗೆ ಜೀವಾವಧಿ ಶಿಕ್ಷೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


