ಸಾಗರ್ ಚಂಡಮಾರುತ: ದಕ್ಷಿಣದ ರಾಜ್ಯಗಳು ಹಾಗೂ ಲಕ್ಷದ್ವೀಪದ ಜನತೆಗೆ ಹವಾಮಾನ ಇಲಾಖೆಯಿಂದ ಎಚ್ಚರಿಕೆ ಸಂದೇಶ
ಭಾರತದ ಹವಾಮಾನ ಇಲಾಖೆ ಇಂದು ತಮಿಳುನಾಡು, ಕೇರಳ, ಕರ್ನಾಟಕ, ಗೋವಾ, ಮಹಾರಾಷ್ಟ್ರ ಮತ್ತು ಲಕ್ಷದ್ವೀಪ ದ್ವೀಪಸಮೂಹಗಳಿಗೆ.....

Published On :
ನವದೆಹಲಿ: ಭಾರತದ ಹವಾಮಾನ ಇಲಾಖೆ ಇಂದು ತಮಿಳುನಾಡು, ಕೇರಳ, ಕರ್ನಾಟಕ, ಗೋವಾ, ಮಹಾರಾಷ್ಟ್ರ ಮತ್ತು ಲಕ್ಷದ್ವೀಪ ದ್ವೀಪಸಮೂಹಗಳಿಗೆ 'ಸಾಗರ್' ಚಂಡಮಾರುತ ಅಪ್ಪಳಿಸುವ ಕುರಿತಂತೆ ಎಚ್ಚರಿಕೆ ನೀಡಿದೆ.
ಸಧ್ಯ ಅಡೆನ್ ಕೊಲ್ಲಿಯಲ್ಲಿ ಕೇಂದ್ರೀಕೃತವಾಗಿರುವ ಚಂಡಮಾರುತವು ಮಾರು 390 ಕಿಮೀ ಪೂರ್ವಕ್ಕೆಯೆಮನ್ ನ ಏಡೆನ್ ನಗರದ ಈಶಾನ್ಯ ಮತ್ತು 560 ಕಿಮೀ ಸೊಕೊಟ್ರಾ ದ್ವೀಪಗಳ ಗಡಿ ಭಾಗದಲ್ಲಿ ನೆಲೆಯಾಗಿದೆ.
ಮುಂದಿನ 12 ಗಂಟೆಗಳಲ್ಲಿ ಇದು ಇನ್ನಷ್ಟು ತೀವ್ರಗೊಳ್ಳುವ ಸಾಧ್ಯತೆ ಇದ್ದು ಮುಂದಿನ 48 ಗಂಟೆಗಳಲ್ಲಿ ಪಶ್ಚಿಮ ಕೇಂದ್ರ ಭಾಗ, ನೈರುತ್ಯ ಅರೇಬಿಯನ್ ಸಮುದ್ರದಲ್ಲಿ ಮೀನುಗಾರರು ಮೀನುಗಾರಿಕೆಗೆ ತೆರಳಬಾರದೆಂದು ಇಲಾಖೆ ಎಚ್ಚರಿಸಿದೆ.
ಮುಂದಿನ 24 ಗಂಟೆಗಳಲ್ಲಿ ದೇಶದ ಕರಾವಳಿ ಭಾಗಗಳಿಗೆ ಚಂಡಮಾರುತ ಅಪ್ಪಳಿಸುವ ಅಪಾಯವಿದೆ ಎಂದ ಇಲಾಖೆ ಚಂಡಮಾರುತದ ಕಾರಣ ಸಮುದ್ರದಲ್ಲಿ ದೊಡ್ಡ ಪ್ರಮಾಣದ ಅಲೆಗಳೇಳುವ ಸಾಧ್ಯತೆ ಇದೆ ಎಂದಿದೆ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


