ದೇಶ

ಜಮ್ಮು-ಕಾಶ್ಮೀರ; ಗಡಿ ನುಸುಳುತ್ತಿದ್ದ 3 ಉಗ್ರರನ್ನು ಸದೆಬಡಿದ ಸೇನೆ

ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಗಡಿ ನುಸುಳಲು ಯತ್ನ ನಡೆಸುತ್ತಿದ್ದ ಮೂವರು ಉಗ್ರರನ್ನು ಭಾರತೀಯ ಸೇನೆ ಸದೆಬಡಿದಿದೆ ಎಂದು ರಕ್ಷಣಾ ಇಲಾಖೆಯ ವಕ್ತಾರರು ಮಾಹಿತಿ ಶನಿವಾರ ಮಾಹಿದಿ ನೀಡಿದ್ದಾರೆ...

ಜಮ್ಮು-ಕಾಶ್ಮೀರ; ಗಡಿ ನುಸುಳುತ್ತಿದ್ದ 3 ಉಗ್ರರನ್ನು ಸದೆಬಡಿದ ಸೇನೆ
ಸಂಗ್ರಹ ಚಿತ್ರ
Published On :
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಗಡಿ ನುಸುಳಲು ಯತ್ನ ನಡೆಸುತ್ತಿದ್ದ ಮೂವರು ಉಗ್ರರನ್ನು ಭಾರತೀಯ ಸೇನೆ ಸದೆಬಡಿದಿದೆ ಎಂದು ರಕ್ಷಣಾ ಇಲಾಖೆಯ ವಕ್ತಾರರು ಮಾಹಿತಿ ಶನಿವಾರ ಮಾಹಿದಿ ನೀಡಿದ್ದಾರೆ. 
ಗಡಿ ನಿಯಂತ್ರಣ ರೇಖೆ ಬಳಿ ಅನುಮಾನಾಸ್ಪದ ಓಡಾಟಗಳು ಕಂಡು ಬಂದಿದ್ದವು. ಕೌನಾರ್ ಪ್ರದೇಶದಲ್ಲಿ ಭಾರತದ ಗಡಿ ನುಸುಳಲು ಉಗ್ರರ ಗುಂಪೊಂದು ಯತ್ನ ನಡೆಸುತ್ತಿತ್ತು ಎಂದು ಹೇಳಿದ್ದಾರೆ. 
ಉಗ್ರರು ಗಡಿ ನುಸುಳುತ್ತಿದ್ದುದ್ದನ್ನು ಗಮನಿಸಿದ ಸೇನೆ ಗುಂಡಿನ ದಾಳಿ ನಡೆಸಿತು. ಈ ವೇಳೆ ಉಗ್ರರು ಸೇನೆ ಮೇಲೆ ಪ್ರತಿ ದಾಳಿ ನಡೆಸಿದ್ದಾರೆ. ಈ ವೇಳೆ ಮೂವರು ಉಗ್ರರನ್ನು ಸೇನೆ ಹತ್ಯೆ ಮಾಡಿದ್ದು, ಇಬ್ಬರು ಉಗ್ರರು ತಪ್ಪಿಸಿಕೊಂಡಿದ್ದಾರೆಂದು ತಿಳಿದುಬಂದಿದೆ. ಪ್ರಸ್ತುತ ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದೆ ಎಂದು ತಿಳಿದುಬಂದಿದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.