ದೇಶ

ಪ್ರಧಾನಿ ಮೋದಿ ಭೇಟಿ; ಜಮ್ಮು-ಕಾಶ್ಮೀರದಲ್ಲಿ ಹೈ ಅಲರ್ಟ್

2 ದಿನಗಳ ಕಾಲ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡುತ್ತಿದ್ದು, ಈ ಹಿನ್ನಲೆಯಲ್ಲಿ ಕಣಿವೆ ರಾಜ್ಯದಲ್ಲಿ ಶನಿವಾರ ಹೈ ಅಲರ್ಟ್ ಘೋಷಿಸಲಾಗಿದೆ...

ಪ್ರಧಾನಿ ಮೋದಿ ಭೇಟಿ; ಜಮ್ಮು-ಕಾಶ್ಮೀರದಲ್ಲಿ ಹೈ ಅಲರ್ಟ್
ಪ್ರಧಾನಿ ಮೋದಿ
Published On :
ಶ್ರೀನಗರ; 2 ದಿನಗಳ ಕಾಲ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡುತ್ತಿದ್ದು, ಈ ಹಿನ್ನಲೆಯಲ್ಲಿ ಕಣಿವೆ ರಾಜ್ಯದಲ್ಲಿ ಶನಿವಾರ ಹೈ ಅಲರ್ಟ್ ಘೋಷಿಸಲಾಗಿದೆ. 
ಶ್ರೀನಗರ ಮತ್ತು ಜಮ್ಮು-ಕಾಶ್ಮೀರದ ಎಲ್ಲಾ ಪ್ರವೇಶ ಹಾಗೂ ನಿರ್ಗಮನ ದ್ವಾರಗಳಲ್ಲಿ ಭದ್ರತಾ ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದ್ದು, ಎಲ್ಲಾ ಒಳ ಬರುವ ಹಾಗೂ ಹೊರ ಹೋಗುವ ವಾಹನಗಳನ್ನು, ಸ್ಥಳೀಯ ನಿವಾಸಿಗಳನ್ನೂ ಕೂಡ ತಪಾಸಣೆಗೊಳಪಡಿಸಲಾಗುತ್ತಿದೆ. 
ನಾನಾ ಅಭಿವೃದ್ಧಿ ಕಾಮಗಾರಿಗಳ ಚಾಲನೆಗೆ ಪ್ರಧಾನಿ ಮೋದಿಯವರು ಇಂದು ಕಾಶ್ಮೀರಕ್ಕೆ ಭೇಟಿ ನೀಡುತ್ತಿದ್ದಾರೆ. ಕಾಶ್ಮೀರದ ಬಂಡಿಪೋರಾ ಜಿಲ್ಲೆಯಲ್ಲಿ 330 ಮೆಗಾ ವ್ಯಾಟ್ ಸಾಮರ್ಥ್ಯದ ಕಿಶೆಂಗಂಗಾ ಜಲವಿದ್ಯುತ್ ಯೋಜನೆಗೆ ಮೋದಿಯವರು ಚಾಲನೆ ನೀಡಲಿದ್ದಾರೆ. ಇನ್ನು ಲೇಹ್ ನಗರದಲ್ಲಿ ನಡೆಯಲಿರುವ ಲಡಾಕ್'ನ ಆಧ್ಯಾತ್ಮಿಕ ನಾಯಕ ಕುಶಾಕ್ ಬಕುಲಾ ಅವರ 100ನೇ ಜನ್ಮದಿನಾಚರಣೆಯಲ್ಲಿ ಮೋದಿಯವರು ಭಾನುವಾರ ಪಾಲ್ಗೊಳ್ಳಲಿದ್ದಾರೆ. 
ಪ್ರಧಾನಿ ಮೋದಿಯವರು ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡುತ್ತಿರುವ ಸುದ್ದಿಗಳು ಬರುತ್ತಿದ್ದಂತೆಯೇ ಗಡಿಯಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಗಡಿ ನುಸುಳಲು ಉಗ್ರರು ಪದೇ ಪದೇ ಯತ್ನಗಳನ್ನು ನಡೆಸುತ್ತಿದ್ದಾರೆ. ಮೋದಿ ಭೇಟಿಗೂ ಮುನ್ನವೇ ಉಗ್ರರು ನಿರಂತರವಾಗಿ ಒಂದಲ್ಲ ಒಂದು ರೀತಿಯ ಸಂಚು ಹಾಗೂ ಕುತಂತ್ರಗಳನ್ನು ರೂಪಿಸುತ್ತಲೇ ಇವೆ. ಇದಲ್ಲದೆ. ಪಾಕಿಸ್ತಾನ ಸೇನೆ ಕೂಡ ಗಡಿಯಲ್ಲಿ ಪದೇ ಪದೇ ಕದನ ವಿರಾಮ ಉಲ್ಲಂಘನೆ ಮಾಡುತ್ತಿದ್ದು, ಭಾರತೀಯ ಸೇನೆಯನ್ನು ಗುರಿಯಾಗಿರಿಸಿಕೊಂಡು ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿದೆ. 
ದಿನಗಳ ಹಿಂದಷ್ಟೇ ಭಯೋತ್ಪಾದಕರು ಜಮ್ಮು ಮತ್ತು ಕಾಶ್ಮೀರ ಪೊಲೀಸರ ಮೇಲೆ ದಾಳಿ ನಡೆಸಿ, ಗನ್ ಗಳನ್ನು ದೋಚಿಕೊಂಡು ಹೋಗಿದ್ದರು. ಅಲ್ಲದೆ, ದೋಚಿಕೊಂಡು ಹೋಗಿದ್ದ ಗನ್ ಗಳನ್ನು ಚಿತ್ರಗಳನ್ನು ಸೆರೆಹಿಡಿದು ಸಾಮಾಜಿಕ ಜಾಲತಾಣಗಳಲ್ಲಿ ಬಿಡುಗಡೆ ಮಾಡಿ, ಬೆದರಿಕೆಯನ್ನೊಡ್ಡಿವೆ. ಈ ಸಂಬಂಧ ಇಬ್ಬರು ಕಾಶ್ಮೀರ ಪೊಲೀಸರನ್ನು ವಶಕ್ಕೆ ಪಡೆದುಕೊಂಡಿರುವ ಅಧಿಕಾರಿಗಳು ವಿಚಾರಣೆಗೊಳಪಡಿಸಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.