ದೇಶ

ಅಧಿಕಾರಕ್ಕಾಗಿ ಪ್ರಧಾನಿ ಮೋದಿ, ಅಮಿತ್ ಶಾರಿಂದ ರಾಜ್ಯಪಾಲರ ಕಚೇರಿ ದುರ್ಬಳಕೆ: ಮಾಯಾವತಿ

ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ಕರ್ನಾಟಕದಲ್ಲಿ ವಾಮಮಾರ್ಗದಿಂದ ಅಧಿಕಾರ ಹಿಡಿಯಲು....

ಅಧಿಕಾರಕ್ಕಾಗಿ ಪ್ರಧಾನಿ ಮೋದಿ, ಅಮಿತ್ ಶಾರಿಂದ ರಾಜ್ಯಪಾಲರ ಕಚೇರಿ ದುರ್ಬಳಕೆ: ಮಾಯಾವತಿ
ಮಾಯವತಿ
Published On :
ಲಖನೌ: ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ಕರ್ನಾಟಕದಲ್ಲಿ ವಾಮಮಾರ್ಗದಿಂದ ಅಧಿಕಾರ ಹಿಡಿಯಲು ರಾಜ್ಯಪಾಲರ ಕಚೇರಿಯನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಅವರು ಆರೋಪಿಸಿದ್ದಾರೆ.
ಬಿಜೆಪಿ ನಾಯಕ ಬಿಎಸ್ ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮಾಯಾವತಿ, ಇದು ಬಿಜೆಪಿಗೆ ದೊಡ್ಡ ಹಿನ್ನಡೆ ಮತ್ತು 2019ರ ಲೋಕಸಭೆ ಚುನಾವಣೆ ಗೆಲ್ಲಲು ಮಾಡಿದ್ದ ತಂತ್ರ ವಿಫಲವಾಗಿದೆ ಎಂದಿದ್ದಾರೆ.
ಪ್ರಧಾನಿ ಮೋದಿ ಅವರು ಅಧಿಕಾರಕ್ಕಾಗಿ ಸಂವಿಧಾನಾತ್ಮಕ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಮಾಯಾವತಿ ವಾಗ್ದಾಳಿ ನಡೆಸಿದ್ದಾರೆ.
ಇದಕ್ಕು ಮುನ್ನ ಬಿಎಸ್ ಯಡಿಯೂರಪ್ಪ ಅವರು ವಿಶ್ವಾಸಮತಯಾಚಿಸುವ ಮುನ್ನವೇ ಸಿಎಂ ಸ್ಥಾನಕ್ಕೆ ರಾಜಿನಾಮೆ ಘೋಷಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.