ದೇಶ

'ರಂಜಾನ್ ಕದನ ವಿರಾಮ'ಕ್ಕೆ ಬ್ರೇಕ್; ಪಾಕ್ ಬಂಕರ್ ಧ್ವಂಸ, ದಾಳಿ ನಿಲ್ಲಿಸಿ ಎಂದು ಪಾಕ್ ಸೇನೆ ಮನವಿ!

ಗಡಿಯಲ್ಲಿ ತನ್ನ ಪುಂಡಾಟವನ್ನು ಮುಂದುವರೆಸಿದ್ದ ಪಾಕಿಸ್ತಾನಕ್ಕೆ ಭಾರತೀಯ ಸೇನೆ ತಕ್ಕ ಪಾಠವನ್ನೇ ಕಲಿಸಿದ್ದು, ಮೇ.19ರಂದು ವೈರಿ ಪಡೆಯ ಹಲವು ಸೇನಾ ಶಿಬಿರಗಳನ್ನು ಧ್ವಂಸಗೊಳಿಸಿದೆ...

'ರಂಜಾನ್ ಕದನ ವಿರಾಮ'ಕ್ಕೆ ಬ್ರೇಕ್; ಪಾಕ್ ಬಂಕರ್ ಧ್ವಂಸ, ದಾಳಿ ನಿಲ್ಲಿಸಿ ಎಂದು ಪಾಕ್ ಸೇನೆ ಮನವಿ!
ಸಂಗ್ರಹ ಚಿತ್ರ
Published On :
ಜಮ್ಮು; ಗಡಿಯಲ್ಲಿ ತನ್ನ ಪುಂಡಾಟವನ್ನು ಮುಂದುವರೆಸಿದ್ದ ಪಾಕಿಸ್ತಾನಕ್ಕೆ ಭಾರತೀಯ ಸೇನೆ ತಕ್ಕ ಪಾಠವನ್ನೇ ಕಲಿಸಿದ್ದು, ಮೇ.19ರಂದು ವೈರಿ ಪಡೆಯ ಹಲವು ಸೇನಾ ಶಿಬಿರಗಳನ್ನು ಧ್ವಂಸಗೊಳಿಸಿದೆ. 
ರಂಜಾನ್ ಪ್ರಯುಕ್ತ ಕದನ ವಿರಾಮ ಕಾಯ್ದುಕೊಳ್ಳುವಂತೆ ಭದ್ರಾತಾ ಪಡೆಗಳಿಗೆ ಕೇಂದ್ರ ಸರ್ಕಾರ ಆದೇಶ ನೀಡಿದ್ದನ್ನೇ ತಮ್ಮ ಅಸ್ತ್ರವನ್ನಾಗಿ ಬಳಸಿಕೊಳ್ಳಲು ಮುಂದಾಗಿದ್ದ ಪಾಕಿಸ್ತಾನ, ಗಡಿಯಲ್ಲಿ ಉದ್ಧಟತವನ್ನು ಪ್ರದರ್ಶಿಸಿತ್ತು. 
ಮೇ.18ರಂದು ಗಡಿಯಲ್ಲಿ ಕದನ ವಿರಾಮ ಉಲ್ಲಂಘನೆ ಮಾಡಿದ್ದ ಪಾಕಿಸ್ತಾನ ಸೇನೆ ಇಬ್ಬರು ನಾಗರೀಕರನ್ನು ಬಲಿ ಪಡೆದುಕೊಂಡಿತ್ತು. 
ಪಾಕಿಸ್ತಾನ ಈ ಉದ್ಧಟತನಕ್ಕೆ ದಿಟ್ಟ ಉತ್ತರ ನೀಡಿದ್ದ ಗಡಿ ಭದ್ರತಾ ಪಡೆಗಳು ಅಂತರಾಷ್ಟ್ರೀಯ ಗಡಿಯಲ್ಲಿದ್ದ ಪಾಕಿಸ್ತಾನ ಸೇನಾ ಬಂಕರ್ ಗಳನ್ನು ಧ್ವಂಸಗೊಳಿಸಿದೆ.
ಈ ಹಿನ್ನಲೆಯಲ್ಲಿ ಇದೀಗ ಬೆದರಿರುವ ಪಾಕಿಸ್ತಾನ ಸೇನಾಪಡೆಗಳ ಬಳಿ ಮನವಿ ಮಾಡಿಕೊಂಡಿದ್ದು, ಅಂತರಾಷ್ಟ್ರೀಯ ಗಡಿಯಲ್ಲಿ ನಡೆಸಲಾಗುತ್ತಿರುವ ಗುಂಡಿನ ದಾಳಿನ್ನು ನಿಲ್ಲಿಸುವಂತೆ ಮನವಿ ಮಾಡಿಕೊಂಡಿದೆ ಎಂದು ತಿಳಿದುಬಂದಿದೆ. 
ಈ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಬಿಎಸ್ಎಫ್ ವಕ್ತಾರ, ಜಮ್ಮುವಿನ ಗಡಿ ಭದ್ರತಾ ಪಡೆ ಅಧಿಕಾರಿಗಳನ್ನು ಕರೆದ ಪಾಕಿಸ್ತಾನ ಪಡೆಗಳು, ಗುಂಡಿನ ದಾಳಿ ನಡೆಸುವುದನ್ನು ನಿಲ್ಲಿಸುವಂತೆ ಮನವಿ ಮಾಡಿಕೊಂಡಿತು ಎಂದು ಹೇಳಿದ್ದಾರೆ. 
ಗಡಿಯಲ್ಲಿ ಪಾಕಿಸ್ತಾನ ಪದೇ ಪದೇ ಕದನ ವಿರಾಮ ಉಲ್ಲಂಘನೆ ಮಾಡುತ್ತಿತ್ತು. ಈ ಹಿನ್ನಲೆಯಲ್ಲಿ ಸೇನೆ ದಿಟ್ಟ ಉತ್ತರವನ್ನು ನೀಡಿತ್ತು ಎಂದು ಹಿರಿಯ ಆಧಿಕಾರಿ ಹೇಳಿದ್ದಾರೆರೆ. 
ಕಳೆದ ಮೂರು ದಿನಗಳಿಂದ ಪಾಕಿಸ್ತಾನ ಪದೇ ಪದೇ ಕದನ ವಿರಾಮ ಉಲ್ಲಂಘನೆ ಮಾಡುತ್ತಿದ್ದು, ಭಾರತೀಯ ಸೇನೆಯನ್ನು ಗುರಿಯಾಗಿರಿಸಿಕೊಂಡು ಗುಂಡಿನ ದಾಳಿ ನಡೆಸುತ್ತಿದೆ. ಇದರ ಪರಿಣಾಮ ಇಬ್ಬರು ಬಿಎಸ್ಎಫ್ ಯೋಧರು ಹುತಾತ್ಮರಾಗಿದ್ದರು. ಇದಲ್ಲದೆ, ಹಲವು ನಾಗರೀಕರೂ ಕೂಡ ಸಾವನ್ನಪ್ಪಿದ್ದು, ಹಲವರಿಗೆ ಗಾಯಗಳಾಗಿವೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.