ದೇಶ

ಕುಮಾರ ಪರ್ವ: ದೆಹಲಿಯಲ್ಲಿ ಸೋನಿಯಾ, ರಾಹುಲ್ ಗಾಂಧಿ ಭೇಟಿ ಮಾಡಿದ ನಿಯೋಜಿತ ಸಿಎಂ

ನಿಯೋಜಿತ‌ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಸೋಮವಾರ ದೆಹಲಿಯಲ್ಲಿ ಬಿಎಸ್ ಪಿ ಮುಖ್ಯಸ್ಥೆ....

ಕುಮಾರ ಪರ್ವ: ದೆಹಲಿಯಲ್ಲಿ ಸೋನಿಯಾ, ರಾಹುಲ್ ಗಾಂಧಿ ಭೇಟಿ ಮಾಡಿದ ನಿಯೋಜಿತ ಸಿಎಂ
ರಾಹುಲ್ ಗಾಂಧಿ,- ಎಚ್ ಡಿ ಕುಮಾರಸ್ವಾಮಿ, ಸೋನಿಯಾ ಗಾಂಧಿ
Published On :
ನವದೆಹಲಿ: ನಿಯೋಜಿತ‌ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಸೋಮವಾರ ದೆಹಲಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿದ್ದು, ಬುಧವಾರ ತಮ್ಮ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಆಗಮಿಸುವಂತೆ ಆಹ್ವಾನ ನೀಡಿದ್ದಾರೆ.
ಇಂದು ಸಂಜೆ ರಾಹುಲ್ ಗಾಂಧಿ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿದ ಕುಮಾರಸ್ವಾಮಿ, ಕಾಂಗ್ರೆಸ್‌-ಜೆಡಿಎಸ್ ಮೈತ್ರಿ ಸರ್ಕಾರದ ರಚನೆಯ ರೂಪುರೇಷೆಗಳ ಬಗ್ಗೆಯೂ ಚರ್ಚಿಸಿದ್ದಾರೆ ಎನ್ನಲಾಗಿದೆ.
ಇದಕ್ಕು ಮುನ್ನ ಬಿಎಸ್ ಪಿ ಮುಖ್ಯಸ್ಥೆ ಮಾಯಾವತಿ ಅವರನ್ನು‌ಭೇಟಿ ಮಾಡಿದ್ದ ನಿಯೋಜಿತ ಸಿಎಂ, ತಮ್ಮ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಆಗಮಿಸುವಂತೆ ಆಹ್ವಾನ ನೀಡಿದ್ದರು.
ಕುಮಾರಸ್ವಾಮಿ ಅವರು ನಾಳೆ ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಬುಧವಾರ ವಿಧಾನಸೌಧ ಮುಂಭಾಗ ಪ್ರಮಾಣ ವಚನ ಸ್ವೀಕರಿಸಲಿದ್ದು, ಕಾರ್ಯಕ್ರಮಕ್ಕೆ ಮಾಯಾವತಿ, ರಾಹುಲ್ ‌ಗಾಂಧಿ, ಸೋನಿಯಾ ಗಾಂಧಿ ಹಾಗೂ ಗುಲಾಂ ನಬಿ ಅಜಾದ್ ಸೇರಿದಂತೆ ಹಲವು ನಾಯಕರು ಆಗಮಿಸುವ ಸಾಧ್ಯತೆ ಇದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.