ಪಾಕ್ ಬಂಕರ್ ಧ್ವಂಸ ಬಳಿಕ ದಾಳಿ ನಿಲ್ಲಿಸಿ ಎಂದು ಬೇಡಿಕೊಂಡಿದ್ದ ಪಾಕ್‌ನಿಂದ ಮತ್ತೆ ಗುಂಡಿನ ದಾಳಿ, 6 ಗಾಯ
ಜಮ್ಮು ಮತ್ತು ಕಾಶ್ಮೀರದ ಗಡಿಯಲ್ಲಿ ಗುಂಡಿನ ದಾಳಿ ನಡೆಸುತ್ತಿದ್ದ ಪಾಕಿಸ್ತಾನಕ್ಕೆ ಭಾರತೀಯ ಸೇನೆ ತಕ್ಕ ಪಾಠ ಕಲಿಸಿತ್ತು. ಸೇನೆ ವೈರಿ ಪಡೆಯ ಹಲವು ಸೇನಾ ಶಿಬಿರಗಳನ್ನು...

Published On :
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಗಡಿಯಲ್ಲಿ ಗುಂಡಿನ ದಾಳಿ ನಡೆಸುತ್ತಿದ್ದ ಪಾಕಿಸ್ತಾನಕ್ಕೆ ಭಾರತೀಯ ಸೇನೆ ತಕ್ಕ ಪಾಠ ಕಲಿಸಿತ್ತು. ಸೇನೆ ವೈರಿ ಪಡೆಯ ಹಲವು ಸೇನಾ ಶಿಬಿರಗಳನ್ನು ಧ್ವಂಸಗೊಳಿಸಿತ್ತು. ಇದಾದ ಬಳಿಕ ದಾಳಿ ನಿಲ್ಲಿಸಿ ಎಂದು ಬೇಡಿಕೊಂಡಿದ್ದ ಪಾಕ್ ಮತ್ತೆ ಗಡಿಯಲ್ಲಿ ಗುಂಡಿನ ದಾಳಿ ನಡೆಸಿದ್ದು ಇದರಲ್ಲಿ 6 ಮಂದಿ ಗಾಯಗೊಂಡಿದ್ದಾರೆ.
ಜಮ್ಮುವಿನ ಆರ್'ಎಸ್ ಪುರ ಸೆಕ್ಟರ್ ಬಳಿ ಪಾಕಿಸ್ತಾನ ಸೇನೆ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಈ ವೇಳೆ ನಡೆಸಿದ ಅಪ್ರಚೋದಿತ ಗುಂಡಿನ ದಾಳಿಯಲ್ಲಿ ಓರ್ವ ಯೋಧ ಹಾಗೂ ಮಹಿಳೆ ಸೇರಿದಂತೆ ಆರು ಮಂದಿ ಗಾಯಗೊಂಡಿದ್ದಾರೆ.
ಇನ್ನು ಪಾಕ್ ಸೇನೆಯ ಗುಂಡಿನ ದಾಳಿ ಭಾರತೀಯ ಯೋಧರು ಸಹ ಪ್ರತ್ಯುತ್ತರವಾಗಿ ಗುಂಡಿನ ಮಳೆ ಸುರಿಸುತ್ತಿದ್ದಾರೆ.
ರಂಜಾನ್ ಪ್ರಯುಕ್ತ ಕದನ ವಿರಾಮ ಕಾಯ್ದುಕೊಳ್ಳುವಂತೆ ಭದ್ರತಾ ಪಡೆಗಳಿಗೆ ಕೇಂದ್ರ ಸರ್ಕಾರ ಆದೇಶ ನೀಡಿದ್ದನ್ನೇ ತಮ್ಮ ಅಸ್ತ್ರವನ್ನಾಗಿ ಬಳಸಿಕೊಳ್ಳಲು ಮುಂದಾಗಿದ್ದ ಪಾಕಿಸ್ತಾನ, ಗಡಿಯಲ್ಲಿ ಉದ್ಧಟತವನ್ನು ಪ್ರದರ್ಶಿಸಿತ್ತು. ಪಾಕಿಸ್ತಾನ ಈ ಉದ್ಧಟತನಕ್ಕೆ ದಿಟ್ಟ ಉತ್ತರ ನೀಡಿದ್ದ ಗಡಿ ಭದ್ರತಾ ಪಡೆಗಳು ಅಂತರಾಷ್ಟ್ರೀಯ ಗಡಿಯಲ್ಲಿದ್ದ ಪಾಕಿಸ್ತಾನ ಸೇನಾ ಬಂಕರ್ ಗಳನ್ನು ಧ್ವಂಸಗೊಳಿಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Indian ArmyPakistanಪಾಕಿಸ್ತಾನಜಮ್ಮು ಮತ್ತು ಕಾಶ್ಮೀರJammu and Kashmirಭಾರತೀಯ ಸೇನೆRS PuraPoliceman injuredಆರ್\'ಎಸ್.ಪುರಪೊಲೀಸ್ ಗಾಯ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


