ಈಗ ರಾಜ್ಯಪಾಲರು ಕುಮಾರಸ್ವಾಮಿಗೆ ಆಹ್ವಾನ ನೀಡಿದ್ದನ್ನು ಸುಪ್ರೀಂನಲ್ಲಿ ಪ್ರಶ್ನಿಸಿದ ಹಿಂದೂ ಮಹಾಸಭಾ
ಕರ್ನಾಟಕ ರಾಜ್ಯಪಾಲ ವಜುಭಾಯಿ ವಾಲಾ ಅವರು ಸರ್ಕಾರ ರಚಿಸಲು ಜೆಡಿಎಸ್ ನಾಯಕ ಎಚ್ ಡಿ ಕುಮಾರಸ್ವಾಮಿಗೆ....

Published On :
ನವದೆಹಲಿ: ಕರ್ನಾಟಕ ರಾಜ್ಯಪಾಲ ವಜುಭಾಯಿ ವಾಲಾ ಅವರು ಸರ್ಕಾರ ರಚಿಸಲು ಜೆಡಿಎಸ್ ನಾಯಕ ಎಚ್ ಡಿ ಕುಮಾರಸ್ವಾಮಿಗೆ ಆಹ್ವಾನ ನೀಡಿದ್ದನ್ನು ಪ್ರಶ್ನಿಸಿ ಅಖಿಲ ಭಾರತ ಹಿಂದೂ ಮಹಾಸಭಾ ಸೋಮವಾರ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದೆ.
ಇಂದು ಸಂಜೆ ಹಿಂದೂ ಮಹಾಸಭಾ ತುರ್ತು ವಿಚಾರಣೆ ಕೋರಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು, ಕಾಂಗ್ರೆಸ್ - ಜೆಡಿಎಸ್ ಚುನಾವಣೋತ್ತರ ಮೈತ್ರಿ ಅಸಂವಿಧಾನಿಕ. ಹೀಗಾಗಿ ರಾಜ್ಯಪಾಲರ ನಿರ್ಧಾರಕ್ಕೆ ತಡೆ ನೀಡಬೇಕು ಎಂದು ಮನವಿ ಮಾಡಲಾಗಿದೆ.
ರಾಜ್ಯಪಾಲರ ಆಹ್ವಾನದ ಮೆರೆಗೆ ಎಚ್ ಡಿ ಕುಮಾರಸ್ವಾಮಿ ಅವರು ಮೇ 23ರಂದು ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುತ್ತಿದ್ದು, ಇದಕ್ಕೆ ತಡೆ ನೀಡಬೇಕು ಎಂದು ಹಿಂದೂ ಮಹಾಸಭಾ ಪರವಾಗಿ ವಕೀಲ ಬರುನ್ ಕುಮಾರ್ ಸಿನ್ಹಾ ಅವರು ಸುಪ್ರೀಂ ಕೋರ್ಟ್ ಅರ್ಜಿ ಸಲ್ಲಿಸಿದ್ದಾರೆ.
ಈ ಹಿಂದೆ ಬಿಜೆಪಿ ನಾಯಕ ಬಿಎಸ್ ಯಡಿಯೂರಪ್ಪ ಅವರಿಗೆ ರಾಜ್ಯಪಾಲರು ಆಹ್ವಾನ ನೀಡಿದ್ದನ್ನು ಪ್ರಶ್ನಿಸಿ ಕಾಂಗ್ರೆಸ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
supreme courtಸುಪ್ರೀಂ ಕೋರ್ಟ್HD Kumaraswamyಎಚ್ ಡಿ ಕುಮಾರಸ್ವಾಮಿಅಖಿಲ ಭಾರತ ಹಿಂದೂ ಮಹಾಸಭಾAkhil Bharat Hindu Mahasabha
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


