ದೇಶ

ರಾಜೀವ್ ಗಾಂಧಿ 27ನೇ ಪುಣ್ಯತಿಥಿ: ತಂದೆಯನ್ನು ಸ್ಮರಿಸಿದ ರಾಹುಲ್ ಗಾಂಧಿ

ಸೋಮವಾರ ದಿವಂಗತ ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ 27ನೇ ಪುಣ್ಯತಿಥಿ. ಈ ಸಂದರ್ಭದಲ್ಲಿ ...

ರಾಜೀವ್ ಗಾಂಧಿ 27ನೇ ಪುಣ್ಯತಿಥಿ: ತಂದೆಯನ್ನು ಸ್ಮರಿಸಿದ ರಾಹುಲ್ ಗಾಂಧಿ
ರಾಜೀವ್ ಗಾಂಧಿ
Published On :

ನವದೆಹಲಿ: ಸೋಮವಾರ ದಿವಂಗತ ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ 27ನೇ ಪುಣ್ಯತಿಥಿ. ಈ ಸಂದರ್ಭದಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ತಮ್ಮ ತಂದೆಯನ್ನು ಸ್ಮರಿಸಿದ್ದಾರೆ.

ದೇಶದ ಪ್ರತಿಯೊಬ್ಬರಿಗೂ ಹೇಗೆ ಪ್ರೀತಿ, ಗೌರವಗಳನ್ನು ತೋರಿಸಬೇಕೆಂಬುದನ್ನು ತಮಗೆ ತಂದೆ ಹೇಳಿಕೊಟ್ಟಿದ್ದಾರೆ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

ದ್ವೇಷ ಸಾಧಿಸಿಕೊಂಡು ಹೋಗುವವರಿಗೆ ಅದು ಜೈಲಿನಂತೆ, ಅದನ್ನು ಮುಂದುವರಿಸಿಕೊಂಡು ಹೋಗುವುದರಲ್ಲಿ ಅರ್ಥವಿಲ್ಲ ಎಂಬುದನ್ನು ನನಗೆ ತಂದೆ ಹೇಳಿಕೊಟ್ಟಿದ್ದಾರೆ. ಇಂದು ಅವರ ಪುಣ್ಯತಿಥಿಯಂದು ಅವರು ನನಗೆ ಹೇಳಿಕೊಟ್ಟ ಎಲ್ಲರನ್ನೂ ಪ್ರೀತಿ, ಆದರಗಳಿಂದ ಕಾಣಬೇಕೆಂಬ ಪಾಠವನ್ನು ಪಾಲಿಸಿಕೊಂಡು ಹೋಗುತ್ತಿದ್ದೇನೆ. ಇದು ಒಬ್ಬ ತಂದೆಯಾಗಿ ಮಗನಿಗೆ ನೀಡುವ ಅತ್ಯಂತ ಅಮೂಲ್ಯ ಉಡುಗೊರೆ ಎಂದು ರಾಹುಲ್ ಗಾಂಧಿ ಅವರು ಬರೆದುಕೊಂಡಿದ್ದಾರೆ.

ಇದಕ್ಕೂ ಮುನ್ನ ಅವರು ತಮ್ಮ ಸೋದರಿ ಪ್ರಿಯಾಂಕಾ ಗಾಂಧಿಯವರ ಜೊತೆಗೆ ದೆಹಲಿಯ ವೀರಭೂಮಿಯಲ್ಲಿರುವ ರಾಜೀವ್ ಗಾಂಧಿ ಸಮಾಧಿಗೆ ತೆರಳಿ ಗೌರವ ನಮನ ಸಲ್ಲಿಸಿದರು.
ಕಾಂಗ್ರೆಸ್ ವರಿಷ್ಠೆ, ರಾಜೀವ್ ಗಾಂಧಿಯವರ ಪತ್ನಿ ಸೋನಿಯಾ ಗಾಂಧಿ, ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್, ಕಾಂಗ್ರೆಸ್ ನ ಹಿರಿಯ ನಾಯಕರಾದ ಸುಶೀಲ್ ಕುಮಾರ್ ಶಿಂಧೆ, ಮಲ್ಲಿಕಾರ್ಜುನ ಖರ್ಗೆ ಕೂಡ ವೀರಭೂಮಿಗೆ ತೆರಳಿ ಗೌರವ ನಮನ ಸಲ್ಲಿಸಿದರು.

Story image


ಭಾರತ ರತ್ನ ಪ್ರಶಸ್ತಿ ಪುರಸ್ಕೃತರಾದ ರಾಜೀವ್ ಗಾಂಧಿ ಚೆನ್ನೈಯ ಶ್ರೀಪೆರಂಬದೂರಿನಲ್ಲಿ ಮೇ 21, 1991ರಂದು ಆತ್ಮಹತ್ಯಾ ಬಾಂಬ್ ದಾಳಿಗೆ ಹತ್ಯೆಯಾಗಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.