456 ಕೋಟಿ ರು.ವಂಚನೆ: ರೋಟೋಮ್ಯಾಕ್ ವಿರುದ್ಧ ಚಾರ್ಜ್ ಶೀಟ್ ದಾಖಲಿಸಿದ ಸಿಬಿಐ
ಬ್ಯಾಂಕ್ ಆಫ್ ಬರೋಡಾಗೆ 456.63 ಕೋಟಿ ರುಪಾಯಿ ಸಾಲ ಪಡೆದು ಮರು ಪಾವತಿಸದೆ ವಂಚಿಸಿದ ಆರೋಪದ ಮೇಲೆ....

Published On :
ಲಖನೌ/ನವದೆಹಲಿ: ಬ್ಯಾಂಕ್ ಆಫ್ ಬರೋಡಾಗೆ 456.63 ಕೋಟಿ ರುಪಾಯಿ ಸಾಲ ಪಡೆದು ಮರು ಪಾವತಿಸದೆ ವಂಚಿಸಿದ ಆರೋಪದ ಮೇಲೆ ರೋಟೋಮ್ಯಾಕ್ ಪ್ರೈ.ಲಿ. ಮತ್ತು ಅದರ ಮಾಲೀಕ ವಿಕ್ರಮ್ ಕೊಠಾರಿ ಅವರ ವಿರುದ್ಧ ಸಿಬಿಐ ಮಂಗಳವಾರ ಚಾರ್ಜ್ ಶೀಟ್ ದಾಖಲಿಸಿದೆ.
ರೋಟೋಮ್ಯಾಕ್ ಪೆನ್ ಸಂಸ್ಥೆ ಒಟ್ಟು ಏಳು ವಿವಿಧ ಬ್ಯಾಂಕ್ ಗಳಿಗೆ 3,690 ಕೋಟಿ ರುಪಾಯಿ ವಂಚಿಸಿದ ಆರೋಪ ಎದುರಿಸುತ್ತಿದ್ದು, ಕಳೆದ ಮೂರು ತಿಂಗಳಿಂದ ಪ್ರಕರಣ ತನಿಖೆ ನಡೆಸಿದ ಸಿಬಿಐ ಇಂದು ಬ್ಯಾಂಕ್ ಆಫ್ ಬರೋಡಾಗೆ 456.63 ಕೋಟಿ ರುಪಾಯಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾರ್ಜ್ ಶೀಟ್ ಸಲ್ಲಿಸಿದೆ.
ಪ್ರಕರಣದ ತನಿಖೆ ಮುಂದುವರೆದಿದ್ದು, ಮತ್ತಷ್ಟು ಚಾರ್ಜ್ ಶೀಟ್ ಗಳನ್ನು ಸಲ್ಲಿಸಲಾಗುವುದು ಎಂದು ಸಿಬಿಐ ಅಧಿಕಾರಿಗಳು ತಿಳಿಸಿದ್ದಾರೆ.
ಸಿಬಿಐ ಚಾರ್ಜ್ ಶೀಟ್ ಸ್ವೀಕರಿಸಿದ ಸಿಬಿಐ ವಿಶೇಷ ನ್ಯಾಯಾಧೀಶ ಎಂ.ಪಿ.ಚೌಧರಿ ಅವರು ಪ್ರಕರಣದ ವಿಚಾರಣೆಯನ್ನು ಮೇ 30ಕ್ಕೆ ನಿಗದಿಪಡಿಸಿದ್ದಾರೆ.
ರೋಟೋಮ್ಯಾಕ್ ಮಾಲೀಕ ವಿಕ್ರಮ್ ಕೊಠಾರಿ, ಪುತ್ರ ಮತ್ತು ನಿರ್ದೇಶಕ ರಾಹುಲ್ ಕೊಠಾರಿ, ಬ್ಯಾಂಕ್ ಆಫ್ ಬರೋಡಾದ ಅಂದಿನ ಎಜಿಎಂ ಎಸ್ ಕೆ ಉಪಾಧ್ಯಾಯ, ಬ್ಯಾಂಕ್ ನ ಅಂದಿನ ಹಿರಿಯ ಮ್ಯಾನೇಜರ್ ಓಂ ಪ್ರಕಾಶ್ ಕಪೂರ್ ಹಾಗೂ ಅಂದಿನ ಮ್ಯಾನೇಜರ್ ಶಶಿ ಬಿಸ್ವಾಸ್ ಅವರ ವಿರುದ್ಧ ಸಿಬಿಐ ಚಾರ್ಜ್ ಶೀಟ್ ಸಲ್ಲಿಸಿದೆ.
ಬ್ಯಾಂಕ್ ಗಳಿಗೆ ವಂಚಿಸಿದ ಪ್ರಕರಣಕ್ಕೆ ಬಂಧನಕೊಳ್ಳಗಾಗಿರುವ ವಿಕ್ರಮ್ ಕೊಠಾರಿ ಹಾಗೂ ಅವರ ಪುತ್ರ ರಾಹುಲ್ ಸದ್ಯ ನ್ಯಾಯಾಂಗ ಬಂಧನದಲ್ದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
CBIಸಿಬಿಐಚಾರ್ಜ್ ಶೀಟ್Rotomacರೋಟೋಮ್ಯಾಕ್charge-sheetsRs 456.63-crore loan default case456.63 ಕೋಟಿ ರು.ವಂಚನೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


