ಹಳೆಯ ವಿಚಾರಗಳ ಮರೆತು ಮುನ್ನಡೆಯೋಣ: ಭಾವಿ ಸಿಎಂ ಎಚ್ ಡಿಕೆಗೆ ಕಾಂಗ್ರೆಸ್
ಹಳೆಯ ವಿಚಾರಗಳನ್ನು ಮರೆತು ಉತ್ತಮ ಆಡಳಿತ ನೀಡುವತ್ತ ಮುನ್ನಡೆಯೋಣ ಎಂದು ಕಾಂಗ್ರೆಸ್ ಪಕ್ಷದ ವರಿಷ್ಟರು ಕರ್ನಾಟಕದ ನಿಯೋಜಿತ ಸಿಎಂ ಎಚ್ ಡಿ ಕುಮಾರಸ್ವಾಮಿ ಅವರಿಗೆ ಹೇಳಿದ್ದಾರೆ.

Published On :
ನವದೆಹಲಿ: ಹಳೆಯ ವಿಚಾರಗಳನ್ನು ಮರೆತು ಉತ್ತಮ ಆಡಳಿತ ನೀಡುವತ್ತ ಮುನ್ನಡೆಯೋಣ ಎಂದು ಕಾಂಗ್ರೆಸ್ ಪಕ್ಷದ ವರಿಷ್ಟರು ಕರ್ನಾಟಕದ ನಿಯೋಜಿತ ಸಿಎಂ ಎಚ್ ಡಿ ಕುಮಾರಸ್ವಾಮಿ ಅವರಿಗೆ ಹೇಳಿದ್ದಾರೆ.
ನಿನ್ನೆ ದೆಹಲಿಯಲ್ಲಿ ಕಾಂಗ್ರೆಸ್ ಅಧಿನಾಯಕಿ ಸೋನಿಯಾಗಾಂಧಿ, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಎಚ್ ಡಿ ಕುಮಾರ ಸ್ವಾಮಿ ಅವರು ಭೇಟಿ ಮಾಡಿದರು. ಈ ವೇಳೆ ಹಲವು ವಿಚಾರಗಳ ಕುರಿತು ಚರ್ಚೆ ನಡೆಸಿದ ಉಭಯ ನಾಯಕರು ಸಂಪುಟ ರಚನೆ ಕುರಿತು ಚರ್ಚೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಕೇವಲ ಕರ್ನಾಟಕ ಮಾತ್ರವಲ್ಲದೇ ಮುಂಬರವು ಲೋಕಸಭಾ ಚುನಾವಣೆಗೂ ಕಾಂಗ್ರೆಸ್ ರಣತಂತ್ರ ರೂಪಿಸುತ್ತಿದ್ದು, ಈ ನಿಟ್ಟಿನಲ್ಲಿ ಕುಮಾರಸ್ವಾಮಿ ಅವರೊಂದಿಗೆ ಸೋನಿಯಾ ಮತ್ತು ರಾಹುಲ್ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.
ಇನ್ನು ಭೇಟಿ ವೇಳೆ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಅವರೂ ಕೂಡ ಇದ್ದರು. ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ನಾಳೆ ಎಚ್ ಡಿ ಕುಮಾರಸ್ವಾಮಿ ಪ್ರಮಾಣ ವಚನ ಸ್ವೀಕಾರ ಪಡೆಯಲಿದ್ದಾರೆ. ನಾಳೆ ವಿದಾನಸೌಧದ ಅವರಣದಲ್ಲಿ ಲಕ್ಷಾಂತರ ಅಭಿಮಾನಿಗಳು ಮತ್ತು ವಿವಿಧ ರಾಜಕೀಯ ಪಕ್ಷಗಳ ಗಣ್ಯರ ಸಮ್ಮುಖದಲ್ಲಿ ಎಚ್ ಡಿ ಕುಮಾರಸ್ವಾಮಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ನಾಳೆ ಸಂಜೆ 4 ಗಂಟೆಗೆ ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ನವದೆಹಲಿCongressಕಾಂಗ್ರೆಸ್New DelhiPoliticsರಾಜಕೀಯHD Kumaraswamyಎಚ್ ಡಿ ಕುಮಾರಸ್ವಾಮಿಪ್ರಮಾಣ ವಚನ ಕಾರ್ಯಕ್ರಮKarnataka Assembly ElectionSwear in Ceremony
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


