ಸ್ಟೆರ್ಲೈಟ್ ಹಿಂಸಾಚಾರ: ನಿವೃತ್ತ ನ್ಯಾಯಮೂರ್ತಿಗಳಿಂದ ತನಿಖೆ; ಕಾಮಗಾರಿಗೆ ಮದ್ರಾಸ್ ಹೈಕೋರ್ಟ್ ತಡೆ
ತಮಿಳುನಾಡಿನ ತೂತುಕುಡಿಯಲ್ಲಿ ತಾಮ್ರ ಮಿಶ್ರಣ ಘಟಕ ಸ್ಟೆರ್ಲೈಟ್ ಕಂಪನಿ ಕಾರ್ಯಾಚರಣೆ ನಿಲ್ಲಿಸುವಂತೆ ಆಗ್ರಹಿಸಿ ನಡೆಯುತ್ತಿದ್ದ...

Published On :
ಚೆನ್ನೈ: ತಮಿಳುನಾಡಿನ ತೂತುಕುಡಿಯಲ್ಲಿ ನಡೆದಿದ್ದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವಾಲಯ ವರದಿ ಕೇಳಿದ ಬೆನ್ನಲ್ಲೆ ತಮಿಳುನಾಡು ಸರ್ಕಾರ ನಿವೃತ್ತ ನ್ಯಾಯಾಧೀಶರಿಂದ ತನಿಖೆ ನಡೆಸಲು ಆದೇಶಿಸಿದ್ದು ನಿವೃತ್ತ ನ್ಯಾ. ಅರುಣಾ ಜಗದೀಶನ್ ತನಿಖೆ ನಡೆಸಲಿದ್ದಾರೆ.
ಇದೇ ವೇಳೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಸಹ ತಮಿಳುನಾಡು ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಡಿಜಿಪಿಗೆ ನೋಟಿಸ್ ಜಾರಿಗೊಳಿಸಿದರೆ, ಮದ್ರಾಸ್ ಹೈಕೋರ್ಟ್ ಸ್ಟೆರ್ಲೈಟ್ ಕಂಪನಿಯಿಂದ ನಿರ್ಮಾಣವಾಗುತ್ತಿದ್ದ ಹೊಸ ಕಾಮಗಾರಿಗೆ ತಡೆ ನೀಡಿದೆ.
ಸ್ಟೆರ್ಲೈಟ್ ಕಂಪನಿ ಕಾರ್ಯಾಚರಣೆಯನ್ನು ವಿರೋಧಿಸಿ ತಮಿಳುನಾಡಿನಲ್ಲಿ ಪ್ರತಿಭಟನೆ ಹಿಂಸಾಚಾರ ಸ್ವರೂಪ ಪಡೆದಿದ್ದ ಹಿನ್ನೆಲೆಯಲ್ಲಿ ಪೊಲೀಸರು ಗೋಲಿಬಾರ್ ಮಾಡಿದ್ದ ಪರಿಣಾಮ 11 ಜನರು ಸಾವನ್ನಪ್ಪಿದ್ದಾರೆ. ಈ ಘಟನೆ ಬಗ್ಗೆ ಈಗ ಕೇಂದ್ರ ಗೃಹ ಇಲಾಖೆ ವರದಿ ಕೇಳಿದೆ. ಪೊಲೀಸರ ಕ್ರಮದಿಂದಾಗಿ 9 ಜನರು ಮೃತಪಟ್ಟಿರುವುದನ್ನು ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿ ಸ್ಪಾಶ್ಟಪಡಿಸಿದ್ದಾರೆ. ಪೊಲೀಸರ ಕ್ರಮಕ್ಕೂ ಆಕ್ರೋಶ ವ್ಯಕ್ತವಾಗುತ್ತಿದ್ದು, ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳಬೇಕು, ಡಿಜಿಪಿ, ಎಸ್ ಪಿ, ಜಿಲ್ಲಾಧಿಕಾರಿಗಳನ್ನು ಅಮಾನತುಗೊಳಿಸಬೇಕು ಎಂದು ರಾಜಕೀಯ ಪಕ್ಷಗಳ ನಾಯಕರು ಆಗ್ರಹಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


