ದೇಶ

ಇಂಧನ ಬೆಲೆ ಏರಿಕೆ ಸಮಸ್ಯೆಯಿಂದ ಜನರನ್ನು ಕಾಪಾಡಿ: ಕೇಂದ್ರಕ್ಕೆ ಮಮತಾ ಬ್ಯಾನರ್ಜಿ ಒತ್ತಾಯ

ಸಾಮಾನ್ಯ ಜನರು ಇಂಧನ ಬೆಲೆ ಏರಿಕೆಯಿಂದ ಬಳಲುತ್ತಿದ್ದಾರೆ. ಈ ಕುರಿತಂತೆ ಕೇಂದ್ರ ಸರ್ಕಾರ ತಕ್ಷಣ ಪರಿಹಾರ ಕೈಗೊಳ್ಳಬೇಕೆಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜ...

ಇಂಧನ ಬೆಲೆ ಏರಿಕೆ ಸಮಸ್ಯೆಯಿಂದ ಜನರನ್ನು ಕಾಪಾಡಿ: ಕೇಂದ್ರಕ್ಕೆ ಮಮತಾ ಬ್ಯಾನರ್ಜಿ ಒತ್ತಾಯ
ಮಮತಾ ಬ್ಯಾನರ್ಜಿ
Published On :
ಕೋಲ್ಕತ್ತಾ: ಸಾಮಾನ್ಯ ಜನರು ಇಂಧನ ಬೆಲೆ ಏರಿಕೆಯಿಂದ ಬಳಲುತ್ತಿದ್ದಾರೆ. ಈ ಕುರಿತಂತೆ  ಕೇಂದ್ರ ಸರ್ಕಾರ ತಕ್ಷಣ ಪರಿಹಾರ ಕೈಗೊಳ್ಳಬೇಕೆಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಒತ್ತಾಯಿಸಿದ್ದಾರೆ.
ಬುಧವಾರ ಕರ್ನಾಟಕ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಪ್ರಮಣವಚನ ಕಾರ್ಯಕ್ರಮಕ್ಕೆ ಆಗಮಿಸಿದ್ದ ವಿರೋಧ ಪಕ್ಷಗಳ ಎಲ್ಲಾ ನಾಯಕರು ದೇಶದಲ್ಲಿನ ಇಂಧನ ಬೆಲೆ ಏರಿಕೆ ಪರಿಣಾಮ ಜನಸಾಮಾನ್ಯರು ಮತ್ತು ರೈತರ ಮೇಲಾಗುತ್ತಿರುವ ಬಗ್ಗೆ ಚರ್ಚೆ ನಡೆಸಿದ್ದರು.
ಗುರುವಾರ ಮಮತಾ ಇದರ ಕುರಿತಂತೆ ಮತ್ತಷ್ಟು ಕಳವಳ ವ್ಯಕ್ತಪಡಿಸಿದ್ದು ತೈಲ ಬೆಲೆ ಏರಿಕೆಯು ಮನೆಗೆಲಸ ಹಾಗೂ ಸಾರಿಗೆ ವೆಚ್ಚಗಳ ಏರಿಕೆಗೆ ಕಾರಣವಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಭಾರತದಲ್ಲಿನ ಎಲ್ಲಾ ವಿರೋಧ ಪಕ್ಷಗಳು ತೈಲ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ ನಡೆಸಬೇಕೆಂದು ಅವರು ಒತ್ತಾಯಿಸಿದರು."ತೃಣಮೂಲ ಕಾಂಗ್ರೆಸ್ ಪಕ್ಷವು ಶುಕ್ರವಾರ ಕೋಲ್ಕತ್ತಾದಲ್ಲಿ ಪ್ರತಿಭಟನೆ ನಡೆಸಲಿದೆ. ಶನಿವಾರದಂದು ಪಶ್ಚಿಮ ಬಂಗಾಳದ ಎಲ್ಲಾ ಜಿಲ್ಲೆ ಹಾಗೂ ಬ್ಲಾಕ್ ಹಂತಗಳಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗುತ್ತದೆ.ಎಲ್ಲಾ ರಾಜಕೀಯ ಪಕ್ಷಗಳು ಇಂಧನ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆಗಿಳಿಯಬೇಕು. ಎಂದು ಣಾನು ಮನವಿ ಮಾಡುತ್ತೇನೆ" ಅವರು ಹೇಳಿದ್ದಾರೆ.
ತೈಲ ಬೆಲೆ ಏರಿಕೆ ಬಿಕ್ಕಟ್ಟಿನ ಕುರಿತಂತೆ ಕೇಂದ್ರದ ’ಮೌನ’ ವನ್ನು ಕೆಣಕಿದ ಮಮತಾ "ಬೇರೆಯವರು ಅಧಿಕಾರದಲ್ಲಿದ್ದಾಗ ನಾವು ಅವರನ್ನು ಟೀಕಿಸುವೆವು. ಅದೇ ಪಕ್ಷ ಅಧಿಕಾರಕ್ಕೆ ಬಂದಾಗ ಅವರು ಇದ್ದಕ್ಕಿದ್ದ ಹಾಗೆ ಮೌನ ತಾಳುತ್ತಾರೆ. ಮತ್ತು ಎಲ್ಲವನ್ನೂ ಮರೆಯುತ್ತಾರೆ. ರಾಜಕೀಯವೆನ್ನುವುದು ಇಂದಿಗಾಗಿ ಮಾತ್ರವೇ ಇಲ್ಲ, ಅದು ನಾಳೆಗಾಗಿ ಇದೆ ಎಂದು ನಾನು ಕೇಂದ್ರಕ್ಕೆ ತಿಳಿಸಲು ಇಚ್ಚಿಸಿದ್ದೇನೆ"
ಪೆಟ್ರೋಲ್ ಹಾಗೂ ಡೀಸೆಲ್  ಬೆಲೆ ಏರಿಕೆ ಎನ್ನುವುದು ಜನರ ಸಮಸ್ಯೆಯಾಗಿದೆ. ಇದರ ಸಂಬಂಧ ರಾಜಕೀಯ ಮಾಡುವುದು ಒಳಿತಲ್ಲ ಎಂದು ಮಮತಾ ಹೇಳಿದ್ದಾರೆ.
ಇತ್ತೀಚಿನ ದಿನಗಳಲ್ಲಿ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ದಾಖಲೆಯ ಪ್ರಮಾಣದಲ್ಲಿ ಹೆಚ್ಚಳ ಕಾಣುತ್ತಿದೆ.ಇದು ಜನಸಾಮಾನ್ಯರ ಜೀವನದ ಮೇಲೆ ಅತಿ ಕೆಟ್ಟ ಪರಿಣಾಮ ಬೀರುತ್ತಿದೆ.ಪ್ರಸ್ತುತ, ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಲೀ. ಗೆ 77.47 ರೂ. ಆಗಿದ್ದರೆ, ಮುಂಬೈನಲ್ಲಿ 85.29 ರೂ. ಇದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.