2ಜಿ ಹಗರಣದ ಆರೋಪಿಗಳ ಖುಲಾಸೆ; ದೇಶಕ್ಕೆ ನಾಚಿಕೆಗೇಡಿನ ಸಂಗತಿ: ಸಿಬಿಐ
2ಜಿ ತರಂಗಾಂತರ ಅಕ್ರಮ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲಾ ಆರೋಪಿಗಳನ್ನು ಖುಲಾಸೆಗೊಳಿಸಿರುವುದು....

Published On :
ನವದೆಹಲಿ: 2ಜಿ ತರಂಗಾಂತರ ಅಕ್ರಮ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲಾ ಆರೋಪಿಗಳನ್ನು ಖುಲಾಸೆಗೊಳಿಸಿರುವುದು ಇಡೀ ದೇಶಕ್ಕೆ ನಾಚಿಕೆಗೇಡಿನ ಸಂಗತಿ ಮತ್ತು ಇದೊಂದು ಸ್ಮಾರಕ ಹಾನಿ ಪ್ರಕರಣ ಎಂದು ಸಿಬಿಐ ದೆಹಲಿ ಹೈಕೋರ್ಟ್ ಗೆ ಶುಕ್ರವಾರ ಹೇಳಿದೆ.
ಟೆಲಿಕಾಂ ಮಾಜಿ ಸಚಿವ ಎ ರಾಜಾ ಹಾಗೂ ಡಿಎಂಕೆ ಸಂಸದೆ ಕನಿಮೋಳಿ ಸೇರಿದಂತೆ ಇತರೆ ಆರೋಪಿಗಳ ಖುಲಾಸೆ ಪ್ರಶ್ನಿಸಿ ಸಿಬಿಐ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದು, ವಿಚಾರಣೆ ನಡೆಸಿದ ಕೋರ್ಟ್ ಎಲ್ಲಾ ಆರೋಪಿಗಳಿಗೆ ಪ್ರತಿಕ್ರಿಯೆ ಸಲ್ಲಿಸುವಂತೆ ಸೂಚಿಸಿದೆ.
2ಜಿ ತರಂಗಾಂತರ ಅಕ್ರಮ ಹಂಚಿಕೆಯಿಂದ ಸಾರ್ವಜನಿಕರ ಖಜಾನೆಗೆ ದೊಡ್ಡ ನಷ್ಟವಾಗಿದೆ ಎಂದು ಸಿಬಿಐ ವಾದಿಸಿದೆ.
ಈ ವೇಳೆ ಪ್ರತಿಕ್ರಿಯೆ ಸಲ್ಲಿಸಲು ಕಾಲಾವಕಾಶ ಬೇಕು ಎಂಬ ಆರೋಪಿಗಳ ಮನವಿಗೂ ಸಿಬಿಐ ವಿರೋಧ ವ್ಯಕ್ತಪಡಿಸಿದೆ.
ವಾದ, ಪ್ರತಿವಾದ ಆಲಿಸಿದ ನ್ಯಾಯಮೂರ್ತಿ ಎಸ್ ಜಿ ಗರ್ಗ್ ಅವರು ವಿಚಾರಣೆಯನ್ನು ಆಗಸ್ಟ್ 10ಕ್ಕೆ ಮುಂದೂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


