ದೇಶ

ಜೂನ್ 1ರಿಂದ ಮಹಾರಾಷ್ಟ್ರ ರೈತರಿಂದ ಮುಷ್ಕರ

ರೈತರ ಸಮಸ್ಯೆಗಳನ್ನು ಪರಿಹರಿಸುವಲ್ಲಿ ವಿಫಲವಾಗಿರುವ ರಾಜ್ಯ ಸರ್ಕಾರದ ವಿರುದ್ಧ ಜೂನ್ 1ರಿಂದ ಮಹಾರಾಷ್ಟ್ರ....

ಜೂನ್ 1ರಿಂದ ಮಹಾರಾಷ್ಟ್ರ ರೈತರಿಂದ ಮುಷ್ಕರ
ಸಾಂದರ್ಭಿಕ ಚಿತ್ರ
Published On :
ಔರಂಗಬಾದ್: ರೈತರ ಸಮಸ್ಯೆಗಳನ್ನು ಪರಿಹರಿಸುವಲ್ಲಿ ವಿಫಲವಾಗಿರುವ ರಾಜ್ಯ ಸರ್ಕಾರದ ವಿರುದ್ಧ ಜೂನ್ 1ರಿಂದ ಮಹಾರಾಷ್ಟ್ರದಾದ್ಯಂತ ಮುಷ್ಕರ ನಡೆಸಲು ರೈತರು ನಿರ್ಧರಿಸಿದ್ದಾರೆ.
ಜೂನ್ 1ರಿಂದ ಜೂನ್ 1ರ ವರೆಗೆ ರಾಜ್ಯಾಧ್ಯಂತ ಪ್ರತಿಭಟನೆ ನಡೆಸಲಾಗುವುದು ಮತ್ತು ಜೂನ್ 10ರಂದು ಭಾರತ್ ಬಂದ್ ಗೆ ಬೆಂಬಲ ನೀಡಲಾಗುವುದು ಎಂದ ಕಿಸಾನ್ ಕ್ರಾಂತಿ ಜನಾಂದೋಲನ ಸದಸ್ಯ ಕುಸುಮ ಸಾವಂತ್ ಅವರು ಹೇಳಿದ್ದಾರೆ.
ತಮ್ಮ ಪ್ರತಿಭಟನೆಗೆ ಬೆಂಬಲ ನೀಡದ ರಾಜಕಾರಣಿಗಳನ್ನು ಜೂನ್ 10ರ ವರೆಗೆ ಅವರು ಗ್ರಾಮಗಳನ್ನು ಪ್ರವೇಶಿಸದಂತೆ ತಡೆಯಲಾಗುವುದು ಎಂದು ಅವರು ಸಾವಂತ್ ತಿಳಿಸಿದ್ದಾರೆ.
ರಾಷ್ಟ್ರೀಯ ಕಿಸಾನ್ ಮಹಾಸಂಘ ಜೂನ್ 1ರಿಂದ 10ರ ವರೆಗೆ ಭಾರತ್ ಬಂದ್ ಗೆ ಕರೆ ನೀಡಿದ್ದು, ಇದಕ್ಕೆ 130ಕ್ಕೂ ಹೆಚ್ಚು ರೈತ ಪರ ಸಂಘಟನೆಗಳು ಬೆಂಬಲ ನೀಡಿವೆ.
ಕೇಂದ್ರ ಸರ್ಕಾರದ ರೈತರ ವಿರೋಧಿ ನೀತಿಯನ್ನು ಖಂಡಿಸಿ ಈ ಪ್ರತಿಭಟನೆ ಹಮ್ಮಿಕೊಳ್ಳಲಾಗುತ್ತಿದ್ದು, ಜೂನ್ 10ರ ಮಧ್ಯಾಹ್ನ 2 ಗಂಟೆಯವರೆಗೆ ರಾಷ್ಟ್ರಾದ್ಯಂತ ಬಂದ್ ಆಚರಿಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.