ದೇಶ

ಮೋದಿ ಪ್ರಚಾರದ ಪ್ರಧಾನಿ : 2019 ರಲ್ಲಿ ಬಿಜೆಪಿ ಖಂಡಿತ ಅಧಿಕಾರಕ್ಕೆ ಬರಲ್ಲ- ಚಂದ್ರಬಾಬು ನಾಯ್ಡು

ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ಪ್ರಧಾನಿ ನರೇಂದ್ರಮೋದಿ ವಿರುದ್ಧ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಖಂಡಿತ ಅಧಿಕಾರಕ್ಕೆ ಬರುವುದಿಲ್ಲ ಎಂದು ಭವಿಷ್ಯ ನುಡಿದ್ದಾರೆ.

ಮೋದಿ ಪ್ರಚಾರದ ಪ್ರಧಾನಿ : 2019 ರಲ್ಲಿ  ಬಿಜೆಪಿ ಖಂಡಿತ ಅಧಿಕಾರಕ್ಕೆ ಬರಲ್ಲ- ಚಂದ್ರಬಾಬು ನಾಯ್ಡು
ಚಂದ್ರಬಾಬು ನಾಯ್ಡು
Published On :

ವಿಜಯವಾಡ :ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ಪ್ರಧಾನಿ  ನರೇಂದ್ರಮೋದಿ ವಿರುದ್ಧ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.  ನರೇಂದ್ರಮೋದಿ ಜನತೆಗೆ ನೀಡಿದ್ದ ಭರವಸೆ ಈಡೇರಿಸುವಲ್ಲಿ ವಿಫಲರಾಗಿದ್ದು, 2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಖಂಡಿತ ಅಧಿಕಾರಕ್ಕೆ ಬರುವುದಿಲ್ಲ ಎಂದು ಭವಿಷ್ಯ ನುಡಿದ್ದಾರೆ.

ಮಹಾನಾಡು ಟಿಡಿಪಿ ವಾರ್ಷಿಕ ಸಮ್ಮೇಳನದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಬಿಜೆಪಿ ಸರ್ಕಾರ ರಚನೆಯಲ್ಲಿ ಮಹತ್ವದ ಪಾತ್ರ ವಹಿಸಿದ್ದ ಟಿಡಿಪಿಗೆ ದೇಶದ ರಾಜಕೀಯ ಚಿತ್ರಣವನ್ನೇ ಬದಲಾಯಿಸುವ  ಶಕ್ತಿ ಇದ್ದು, 2019ರಲ್ಲಿ ಸಮನ ಮನಸ್ಕ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳುವ ಮೂಲಕ ಬಿಜೆಪಿ ಅಧಿಕಾರಕ್ಕೆ ಬರದಂತೆ ತಡೆಗಟ್ಟಲಾಗುವುದು ಎಂದರು.

ನರೇಂದ್ರಮೋದಿ ಪ್ರಚಾರದ ಪ್ರಧಾನಿಯಾಗಿದ್ದಾರೆ. ಅವರ ಘೋಷಣೆ ಮಾತ್ರ ನೀಡುತ್ತಾರೆ. ಅಧಿಕಾರಕ್ಕೆ ಬರುವ ಮುನ್ನ ಜನತೆಗೆ ನೀಡಿದ್ದ ಭರವಸೆ ಈಡೇರಿಸುವಲ್ಲಿ ವಿಫಲರಾಗಿದ್ದು, 2019ರಲ್ಲಿ ಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೆ ಬರುವುದು ಕನಸಿನ ಮಾತು ಎಂದರು.

ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡದಿದ್ದಕ್ಕೆ ಎನ್ ಡಿ ಎ ಮೈತ್ರಿಕೂಟದಿಂದ ಟಿಡಿಪಿ ಹೊರಬಂದಿತ್ತು ಎಂದು ತಿಳಿಸಿದ ಚಂದ್ರಬಾಬು ನಾಯ್ಡು, ಬಿಜೆಪಿ ವೈಎಸ್ ಆರ್ ಸಿ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡು  ಆಂಧ್ರಪ್ರದೇಶದ ಜನತೆಗೆ ದ್ರೋಹ ಬಗೆದಿದೆ ಎಂದು ಆರೋಪಿಸಿದರು.


Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.