ಮುಂದಿನ 20 ವರ್ಷಗಳ ಕಾಲ ಬಿಎಸ್ಪಿ ಅಧ್ಯಕ್ಷ ಸ್ಥಾನದ ಮೇಲೆ ಯಾರು ಕಣ್ಣೀಡಬೇಡಿ: ಮಾಯಾವತಿ
ಬಹುಜನ ಸಮಾಜವಾದಿ ಪಕ್ಷ(ಬಿಎಸ್ಪಿ)ದ ಅಧ್ಯಕ್ಷೆಯಾಗಿ ಮುಂದಿನ 20 ವರ್ಷಗಳ ಕಾಲ ನಾನೇ ಮುಂದುವರೆಯುತ್ತೇನೆ ಎಂದು ಮಾಯಾವತಿ ಹೇಳಿದ್ದಾರೆ...

Published On :
ಲಖನೌ: ಬಹುಜನ ಸಮಾಜವಾದಿ ಪಕ್ಷ(ಬಿಎಸ್ಪಿ)ದ ಅಧ್ಯಕ್ಷೆಯಾಗಿ ಮುಂದಿನ 20 ವರ್ಷಗಳ ಕಾಲ ನಾನೇ ಮುಂದುವರೆಯುತ್ತೇನೆ ಎಂದು ಮಾಯಾವತಿ ಹೇಳಿದ್ದಾರೆ.
ಉತ್ತರಪ್ರದೇಶದ ಲಖನೌನಲ್ಲಿ ನಡೆದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಮಾಯಾವತಿ ಈ ಘೋಷಣೆ ಮಾಡಿದ್ದು, ಮುಂದಿನ 20 ವರ್ಷಗಳ ಕಾಲ ಬಿಎಸ್ಪಿ ಅಧ್ಯಕ್ಷ ಸ್ಥಾನದ ಮೇಲೆ ಯಾರು ಕಣ್ಣೀಡಬೇಡಿ ಎಂದು ಹೇಳಿದ್ದಾರೆ.
ಇದೇ ವೇಳೆ ಪಕ್ಷದ ನಿಯಮಾವಳಿಗಳಿಗೆ ತಿದ್ದುಪಡಿ ತಂದು ತಮ್ಮ ಸೋದರನನ್ನು ಪಕ್ಷದ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಿದ್ದಾರೆ. ಈ ಮೂಲಕ ಮಾಯಾವತಿ ಅವರು ಅಧ್ಯಕ್ಷಗಿರಿ ಕುರಿತು ಪಕ್ಷದ ನಾಯಕರು ಕನಸು ಕಾಣದಂತೆ ಸೂಚ್ಯವಾಗಿ ತಿಳಿಸಿದ್ದಾರೆ.
ಬಿಎಸ್ಪಿ ಪಕ್ಷದ ಸಂಸ್ಥಾಪಕರಾದ ಕಾಶ್ಮಿರಾಮ್ ಅವರು ಪಕ್ಷದಲ್ಲಿ ತಮ್ಮ ಬಂಧುಗಳಿಗೆ ಯಾವುದೇ ಸ್ಥಾನ ನೀಡಿರಲಿಲ್ಲ. ಇದರಿಂದಾಗಿ ಅವರ ಸಾಕಷ್ಟು ಬಂಧುಗಳು ಬೇಸರಗೊಂಡಿದ್ದರು. ಈಗ ಈ ನಿಯಮಾವಳಿಗಳಲ್ಲಿ ಅಲ್ಪ ಬದಲಾವಣೆ ಮಾಡಲಾಗಿದೆ. ಭವಿಷ್ಯದಲ್ಲಿ ಬಿಎಸ್ಪಿ ಬೇರೆ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳುವ ಕುರಿತು ಚರ್ಚೆ ನಡೆಸುತ್ತಿದೆ. ನೀವು ಯಾವುದೇ ಪರಿಸ್ಥಿತಿಯಲ್ಲಿ ಚುನಾವಣೆ ಎದುರಿಸಲು ಸಿದ್ಧರಾಗಿರಿ ಎಂದು ತಮ್ಮ ಪಕ್ಷದ ನಾಯಕರಿಗೆ ಮಾಯಾವತಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


