ದೇಶ

ದಲಿತರ ಉದ್ದಾರಕ್ಕಾಗಿ ಸರ್ಕಾರ ಪ್ರಯತ್ನಿಸುತ್ತಿದ್ದರೂ ಕಾಂಗ್ರೆಸ್ ಅಪಹಾಸ್ಯ- ಪ್ರಧಾನಿ ಮೋದಿ

ಕೇಂದ್ರಸರ್ಕಾರ ಹಲವು ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ದಲಿತರ ಉದ್ದಾರಕ್ಕಾಗಿ ಪ್ರಯತ್ನಿಸುತ್ತಿದ್ದರೂ ಕಾಂಗ್ರೆಸ್ ಅಪಹಾಸ್ಯ ಮಾಡುತ್ತಿದೆ ಎಂದು ಪ್ರಧಾನಿ ನರೇಂದ್ರಮೋದಿ ಆರೋಪಿಸಿದ್ದಾರೆ.

ದಲಿತರ ಉದ್ದಾರಕ್ಕಾಗಿ ಸರ್ಕಾರ ಪ್ರಯತ್ನಿಸುತ್ತಿದ್ದರೂ ಕಾಂಗ್ರೆಸ್ ಅಪಹಾಸ್ಯ- ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರಮೋದಿ
Published On :

ಉತ್ತರ ಪ್ರದೇಶ:  ಕೇಂದ್ರಸರ್ಕಾರ ಹಲವು ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ದಲಿತರ ಉದ್ದಾರಕ್ಕಾಗಿ  ಪ್ರಯತ್ನಿಸುತ್ತಿದ್ದರೂ ಕಾಂಗ್ರೆಸ್  ಅಪಹಾಸ್ಯ ಮಾಡುತ್ತಿದೆ ಎಂದು ಪ್ರಧಾನಿ ನರೇಂದ್ರಮೋದಿ ಆರೋಪಿಸಿದ್ದಾರೆ.

ಬಾಗ್ಪತ್  ನಲ್ಲಿಂದು  11 ಸಾವಿರ ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ 135 ಕಿಲೋ ಮೀಟರ್ ಉದ್ದದ ಪೂರ್ವ ಫೆರಿಪೆರಲ್ ಎಕ್ಸ್ ಪ್ರೆಸ್ ಹೆದ್ದಾರಿಯನ್ನು ದೇಶಕ್ಕೆ ಸಮರ್ಪಣೆಗೊಳಿಸಿದ ಬಳಿಕ ಮಾತನಾಡಿದ ಅವರು, ದಲಿತರು,  ಪರಿಶಿಷ್ಟ ಜಾತಿ, ಪಂಗಡ, ಹಿಂದುಳಿದ ವರ್ಗದವರ  ಅಭಿವೃದ್ದಿಗಾಗಿ ಸರ್ಕಾರ ಅನೇಕ ಕ್ರಮಗಳನ್ನು ಕೈಗೊಂಡಿದೆ ಎಂದರು.
ದಲಿತರ ಮೇಲಿನ ದೌರ್ಜನ್ಯ ತಡೆಗಾಗಿ  ವಿಶೇಷ ನ್ಯಾಯಾಲಯಗಳನ್ನು ಸ್ಥಾಪಿಸಲಾಗಿದೆ, ಆದಾಗ್ಯೂ, ಕಾಂಗ್ರೆಸ್ ಮತ್ತು ಅದರ ಮೈತ್ರಿ ಪಕ್ಷಗಳು ಸರ್ಕಾರದ ಪ್ರಯತ್ನಗಳನ್ನು ಅಪಹಾಸ್ಯ ಮಾಡುತ್ತಿವೆ ಎಂದು ಅಪಾದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.