ದೇಶ

ಸುನಂದಾ ಪುಷ್ಕರ್ ಪ್ರಕರಣ: ಶಶಿ ತರೂರ್ ಆರೋಪಿಯೇ ಎನ್ನುವ ಆದೇಶವನ್ನು ಕಾಯ್ದಿರಿಸಿದ ಕೋರ್ಟ್

ಸುನಂದಾ ಪುಷ್ಕರ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿ ಶಶಿ ತರೂರ್ ಆರೋಪಿಯೇ ಎನ್ನುವ ಕುರಿತು ಜೂನ್ 5ರಂದು ತೀರ್ಪು ನೀಡುವುದಾಗಿ ದೆಹಲಿ ನ್ಯಾಯಾಲಯ ಹೇಳಿದೆ.

ಸುನಂದಾ ಪುಷ್ಕರ್ ಪ್ರಕರಣ: ಶಶಿ ತರೂರ್ ಆರೋಪಿಯೇ ಎನ್ನುವ ಆದೇಶವನ್ನು ಕಾಯ್ದಿರಿಸಿದ ಕೋರ್ಟ್
ದಿವಂಗತ ಸುನಂದಾ ಪುಷ್ಕರ್ ಶಶಿ ತರೂರ್ ಅವರೊಂದಿಗೆ (ಫೈಲ್ ಚಿತ್ರ)
Published On :
ನವದೆಹಲಿ: ಸುನಂದಾ ಪುಷ್ಕರ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿ ಶಶಿ ತರೂರ್ ಆರೋಪಿಯೇ ಎನ್ನುವ ಕುರಿತು  ಜೂನ್ 5ರಂದು ತೀರ್ಪು ನೀಡುವುದಾಗಿ ದೆಹಲಿ ನ್ಯಾಯಾಲಯ ಹೇಳಿದೆ.
ಹೆಚ್ಚುವರಿ ಮುಖ್ಯ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ಸಮರ್ ವಿಶಾಲ್ ಈ ತೀರ್ಪು ನೀಡಿದ್ದು ತರೂರ್ ಅವರನ್ನು ಅಪರಾಧಿ ಎನ್ನಲು ಪ್ರಾಸಿಕ್ಯೂಷನ್ ಬಳಿ ಸಾಕಷ್ಟು ಸಾಕ್ಷಾಧಾರಗಳಿಲ್ಲ ಎಂಬ ಕಾರಣಕ್ಕೆ ತೀರ್ಪು ಕಾಯ್ದಿರಿಸಲಾಗಿದೆ ಎಂದಿದ್ದಾರೆ.
ಸುನಂದಾ ಪುಷ್ಕರ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸ್ ಮಾಜಿ ಕೇಂದ್ರ ಸಚಿವ ಶಶಿ ತರೂರ್ ಆರೋಪಿಯಾಗಿದ್ದಾರೆಂದು ದೆಹಲಿ ಪೋಲೀಸರು ಮೇ 14ರಂದು ನ್ಯಾಯಾಲಯಕ್ಕೆ ತಿಳಿಸಿದ್ದರು. ನಾಲ್ಕೂವರೆ ವರ್ಷದ ಹಿಂದಿನ ಪ್ರಕರಣದಲ್ಲಿ ತರೂರ್ ಅವರನ್ನು ಆರೋಪಿಯಾಗಿ ಪರಿಗಣಿಸಬೇಕೆಂದು ಅವರು ಕೋರಿದ್ದರು.
ಸುಮಾರು 3,000 ಪುಟಗಳ ಚಾರ್ಜ್ ಶೀಟ್ ನಲ್ಲಿ ತರೂರ್ ಅವರೌ ಮಾತ್ರವೇ ಆರೋಪಿ ಎಂದು ತೋರಿಸಿದ್ದ ಪೋಲೀಸರು ತರೂರ್ ತಮ್ಮ ಪತ್ನಿಯನ್ನು ಕ್ರೌರ್ಯಕ್ಕೆ ಒಳಪಡಿಸಿದ್ದರೆಂದು ದೂರಿದ್ದಾರೆ. ತರೂರ್ ಅವರ ಮನೆಗೆಲಸದವನಾದ ನಾರಾಯಣ್ ಸಿಂಗ್ ಈ ಪ್ರಕರಣದಲ್ಲಿ ಪ್ರಮುಖ ಸಾಕ್ಷಿಯಾಗಿದ್ದಾನೆ.
ಜನವರಿ 17, 2014 ರ ರಾತ್ರಿ ದೆಹಲಿಯ ಐಷಾರಾಮಿ ಹೋಟೆಲ್ ಕೋಣೆಯಲ್ಲಿ ಪುಷ್ಕರ್ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದರು. ಪ್ರಕರಣಕ್ಕೆ ಸಂಬಂಧಿಸಿ ಇದುವರೆಗೆ ತರೂರ್ ಅವರನ್ನು ಬಂಧಿಸಲಿಲ್ಲ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.