ದೇಶ

ಏರ್ ಇಂಡಿಯಾ ಗಗನಸಖಿಗೆ ಲೈಂಗಿಕ ಕಿರುಕುಳ: ಕೇಂದ್ರ ಸಚಿವರಿಂದ ತನಿಖೆಗೆ ಆದೇಶ

ಏರ್ ಇಂಡಿಯಾ ಗಗನಸಖಿಯೊಬ್ಬರು ತಮ್ಮ ಸಂಸ್ಥೆಯ ಹಿರಿಯ ಕಾರ್ಯನಿರ್ವಾಹಕರೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದು....

ಏರ್ ಇಂಡಿಯಾ ಗಗನಸಖಿಗೆ ಲೈಂಗಿಕ ಕಿರುಕುಳ: ಕೇಂದ್ರ ಸಚಿವರಿಂದ ತನಿಖೆಗೆ ಆದೇಶ
ಸಾಂದರ್ಭಿಕ ಚಿತ್ರ
Published On :
ನವದೆಹಲಿ: ಏರ್ ಇಂಡಿಯಾ ಗಗನಸಖಿಯೊಬ್ಬರು ತಮ್ಮ ಸಂಸ್ಥೆಯ ಹಿರಿಯ ಕಾರ್ಯನಿರ್ವಾಹಕರೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದು ವಿಮಾನಯಾನ ಸಚಿವ ಸುರೇಶ್ ಪ್ರಭು ಸಮಸ್ಯೆ ಪರಿಹಾರಕ್ಕೆ ತುರ್ತು ಕ್ರಮ ಜರುಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. 
ಘಟನೆಯ ತನಿಖೆಗಾಗಿ ತನಿಖಾ ಸಮಿತಿ ನೇಮಕ ಮಾಡಲಾಗುತ್ತದೆ ಎಂದು ಸಚಿವರು ಹೇಳಿದ್ದಾರೆ.ಏರ್ ಇಂಡಿಯಾ ಸಿಎಂಓ ಅವರಿಗೆ ಸಮಸ್ಯೆಯ ತಕ್ಷಣ ಪರಿಹಾರ ಕಮ ಜರುಗಿಸಲು ಕೋರಲಾಗಿದೆ. ಅಗತ್ಯ ಬಿದ್ದರೆ ಇದಕ್ಕಾಗಿ ಇನ್ನೊಂದು ಸಮಿತಿ ರಚನೆ ಮಾಡಲಾಗುತ್ತದೆ ಎಂದು ಸಚಿವರು ಟ್ವೀಟ್ ಮಾಡಿದ್ದಾರೆ.
ಏರ್ ಇಂಡಿಯಾದ ಅಧಿಕಾರಿಯೊಬ್ಬರು ಕಳೆದ ಆರು ವರ್ಷಗಳಿಂದ  ನನಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ. ಈ ಬಗ್ಗೆ ಸಂಸ್ಥೆಯ ಆಡಳಿತಕ್ಕೆ ದೂರು ಸಲ್ಲಿಸಿದ್ದರೂ ಪ್ರಯೋಜನವಾಗಿಲ್ಲ. ಅಧಿಕಾರಿಯ ವಿರುದ್ಧ ದೂರು ಸಲ್ಲಿಸಿದ ಕಾರಣ ನನ್ನ ಹುದ್ದೆಯಲ್ಲಿನ ಮುಂಭಡ್ತಿಯನ್ನೂ ತಡೆಯಲಾಗಿದೆ ಎಂದು ಗಗನಸಖಿ ತನ್ನ ಪತ್ರದಲ್ಲಿ ದೂರಿದ್ದಾರೆ.
ಕಡೆಯ ಆಯ್ಕೆ ಎನ್ನುವಂತೆ ಸಚಿವಾಲಯಕ್ಕೆ ದೂರು ಸಲ್ಲಿಸುತ್ತಿದ್ದೇನೆ. ನನ್ನಂತೆಯೇ ಇತರೆ ಗಗನಸಖಿಯರಿಗೆ ಸಹ ಕಿರುಕುಳ ನೀಡಲಾಗುತ್ತಿದೆ ಎಂದು ಅವರು ತಮ್ಮ ಪತ್ರದಲ್ಲಿ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.