ಜಮ್ಮುಕಾಶ್ಮೀರ: ಲೈಂಗಿಕ ಹಗರಣದಲ್ಲಿ ಇಬ್ಬರು ಪೊಲೀಸ್ ಅಧಿಕಾರಿಗಳು ಸೇರಿ ಐವರು ದೋಷಿ
2006ರಲ್ಲಿ ಇಲ್ಲಿ ನಡೆದ ಲೈಂಗಿಕ ಹಗರಣದಲ್ಲಿ ಬಿಎಸ್ ಎಫ್ ಮಾಜಿ ಡಿಐಜಿ, ಡಿಎಸ್ ಪಿ ಸೇರಿದಂತೆ ಐವರು ಆರೋಪಿಗಳು ದೋಷಿಗಳೆಂದು ಚಂಡೀಘರ್ ನ ವಿಶೇಷ ಸಿಬಿಐ ನ್ಯಾಯಾಲಯ ಇಂದು ಹೇಳಿದೆ.

ಜಮ್ಮು-ಕಾಶ್ಮೀರ: 2006ರಲ್ಲಿ ಇಲ್ಲಿ ನಡೆದ ಲೈಂಗಿಕ ಹಗರಣದಲ್ಲಿ ಬಿಎಸ್ ಎಫ್ ಮಾಜಿ ಡಿಐಜಿ, ಡಿಎಸ್ ಪಿ ಸೇರಿದಂತೆ ಐವರು ಆರೋಪಿಗಳು ದೋಷಿಗಳೆಂದು ಚಂಡೀಘರ್ ನ ವಿಶೇಷ ಸಿಬಿಐ ನ್ಯಾಯಾಲಯ ಇಂದು ಹೇಳಿದೆ.
ಹೆಚ್ಚುವರಿ ಅಡ್ವೊಕೆಟ್ ಜನರಲ್ ಸೇರಿ ಇಬ್ಬರನ್ನು ಪ್ರಕರಣದಿಂದ ಖುಲಾಸೆಗೊಳಿಸಿ ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಗಗನ್ ಗೀತ್ ಕೌರ್ ತೀರ್ಪು ನೀಡಿದ್ದಾರೆ.
ಆರೋಪಿಗಳಿಗೆ ಶಿಕ್ಷೆಯ ಪ್ರಮಾಣ ಜೂನ್ 4 ರಂದು ಪ್ರಕಟಗೊಳ್ಳಲಿದೆ. 2006ರಲ್ಲಿ ಅಪ್ರಾಪ್ತ ಬಾಲಕಿ ಮೇಲಿನ ಲೈಂಗಿಕ ಹಗರಣ ಭಾರೀ ಸುದ್ದಿಯಾಗಿತ್ತು.ಜಮ್ಮು-ಕಾಶ್ಮೀರ ಪೊಲೀಸರು ವಶಪಡಿಸಿಕೊಂಡಿದ್ದ ಎರಡು ಸಿಡಿಗಳಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಲೈಂಗಿಕವಾಗಿ ಬಳಸಿಕೊಂಡಿರುವುದು ಸೆರೆಯಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


