ಗಗನಕ್ಕೇರುತ್ತಿರುವ ಪೆಟ್ರೋಲ್, ಡೀಸೆಲ್ ದರ, ಅಬಕಾರಿ ಸುಂಕ ಇಳಿಕೆ ಮಾಡಿದ ಕೇರಳ ಸರ್ಕಾರ
ದಿನೇ ದಿನೇ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ದರ ಏರಿಕೆಯಾಗುತ್ತಲೇ ಇರುವಂತೆ ಆಯಾ ರಾಜ್ಯ ಸರ್ಕಾರಗಳು ತಮ್ಮ ಪಾಲಿನ ಅಬಕಾರಿ ಸುಂಕ ಇಳಿಕೆ ಮಾಡಬೇಕು ಎಂಬ ಆಗ್ರಹ ಕೇಳಿಬರುತ್ತಿರುವ ಹೊತ್ತಲ್ಲೇ ಕೇರಳ ಸರ್ಕಾರ ತನ್ನ ಪಾಲಿನ ಅಬಕಾರಿ ಸುಂಕದಲ್ಲಿ ಇಳಿಕೆ ಮಾಡಿದೆ.

Published On :
ತಿರುವನಂತಪುರಂ: ದಿನೇ ದಿನೇ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ದರ ಏರಿಕೆಯಾಗುತ್ತಲೇ ಇರುವಂತೆ ಆಯಾ ರಾಜ್ಯ ಸರ್ಕಾರಗಳು ತಮ್ಮ ಪಾಲಿನ ಅಬಕಾರಿ ಸುಂಕ ಇಳಿಕೆ ಮಾಡಬೇಕು ಎಂಬ ಆಗ್ರಹ ಕೇಳಿಬರುತ್ತಿರುವ ಹೊತ್ತಲ್ಲೇ ಕೇರಳ ಸರ್ಕಾರ ತನ್ನ ಪಾಲಿನ ಅಬಕಾರಿ ಸುಂಕದಲ್ಲಿ ಇಳಿಕೆ ಮಾಡಿದೆ.
ಕೇರಳ ಸರ್ಕಾರ ತೈಲ ದರವನ್ನು ರು1 ರೂಪಾಯಿಯಷ್ಟು ಇಳಿಸುವ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದು, ಇದರಿಂದ ಕೇರಳದಲ್ಲಿ ತೈಲ ದರ ಒಂದು ರೂ. ಕಡಿಮೆ ದರದಲ್ಲಿ ಗ್ರಾಹಕರಿಗೆ ಸಿಗಲಿದೆ. ಅಬಕಾರಿ ಸುಂಕ ಇಳಿಕೆ ಮಾಡುವ ಮಹತ್ವದ ನಿರ್ಧಾರ ಕೈಗೊಳ್ಳುವ ಮೂಲಕ ಈ ನಿರ್ಧಾರ ಕೈಗೊಂಡ ಮೊದಲ ರಾಜ್ಯ ಎಂಬ ಕೀರ್ತಿಗೂ ಕೇರಳ ಭಾಜನವಾಗಿದೆ. ಕೇರಳ ಸಿಎಂ ಪಿಣರಾಯಿ ವಿಜಯನ್ ಅವರ ಈ ನಿರ್ಧಾರ ಜೂನ್. 1ರಿಂದ ಜಾರಿಗೆ ಬರಲಿದೆ.
'ತೈಲ ದರದ ಇಳಿಕೆಯಿಂದ ರಾಜ್ಯಕ್ಕೆ ರೂ.509 ಕೋಟಿ ನಷ್ಟವಾಗುತ್ತಿತ್ತು. ಅಲ್ಲದೇ ಇಡೀ ದೇಶ ತೈಲದ ದರವನ್ನು ಇಳಿಸುವಂತೆ ಒತ್ತಾಯ ಹೇರಿತ್ತು. ಆದರೆ ಕೇಂದ್ರ ಸರ್ಕಾರ ಮಾತ್ರ ಕಿವಿಗೊಡಲಿಲ್ಲ. ಹಾಗಾಗಿ ಈ ನಿರ್ಧಾರದ ಮುಖೇನ ಕೇಂದ್ರ ಸರ್ಕಾರಕ್ಕೆ ನಾವು ಸಂದೇಶ ರವಾನಿಸಿದ್ದೇವೆ’ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಹೇಳಿದ್ದಾರೆ.
ಎರಡು ವಾರಗಳ ಹಿಂದೆ ಪೆಟ್ರೋಲ್ ಪ್ರತಿ ಲೀಟರ್ ದರ 3.8 ಹಾಗೂ ಡೀಸೆಲ್ ದರ 3.38ರಷ್ಟು ಏರಿಕೆಯಾಗಿತ್ತು. ಇದು ಈ ವರೆಗಿನ ಗರಿಷ್ಛ ದರ ಏರಿಕೆಯಾಗಿತ್ತು.
ಬುಧವಾರ ಪೆಟ್ರೋಲ್ ಮತ್ತು ಡಿಸೇಲ್ ದರ 1 ಪೈಸೆಯಷ್ಟು ಇಳಿಕೆಯಾಗಿದ್ದು, ಈ ನಿರ್ಣಯದ ಬಗ್ಗೆ ವಿರೋಧ ವ್ಯಕ್ತವಾಗುತ್ತಿದ್ದಂತೆ, ತಾಂತ್ರಿಕ ದೋಷದಿಂದ ದರ ಇಳಿಕೆ 60 ಪೈಸೆ ಎಂದು ಪ್ರಕಟಗೊಂಡಿರುವುದಾಗಿ ಐಒಸಿಎಲ್ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಕೇರಳ ಸರ್ಕಾರThiruvananthapuramಅಬಕಾರಿ ಸುಂಕKerala governmentexcise dutyತಿರುವನಂತಪುರಂಪೆಟ್ರೋಲ್ ದರPetrol Rate
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


